AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಬಿಎ ಸ್ಟಿಕ್ಕರ್ ಭೀತಿಗೆ ಗಲ್ಲಿ ಸೇರಿದ ಕಾರುಗಳು: ಕುಮಾರಸ್ವಾಮಿ ಲೇಔಟ್‌ನಲ್ಲಿ ಅಕ್ರಮ ಪಾರ್ಕಿಂಗ್ ಹಾವಳಿ

ಬೆಂಗಳೂರಿನಲ್ಲಿ ಜಿಬಿಎ ಮುಖ್ಯ ರಸ್ತೆಗಳಿಂದ ಅನಾಥ ವಾಹನಗಳನ್ನು ತೆರವುಗೊಳಿಸುತ್ತಿದ್ದಂತೆ, ಅವು ವಸತಿ ಪ್ರದೇಶಗಳ ಗಲ್ಲಿಗಳಿಗೆ ಸ್ಥಳಾಂತರಗೊಂಡಿವೆ. ಇದು ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸಿ, ತುರ್ತು ವಾಹನಗಳಿಗೆ ದಾರಿ ಇಲ್ಲದಂತೆ ಮಾಡಿದೆ. ಸ್ವಚ್ಛತೆ, ಸುರಕ್ಷತೆ ಮತ್ತು ನೈರ್ಮಲ್ಯಕ್ಕೆ ದೊಡ್ಡ ಸವಾಲಾಗಿದ್ದು, ಸ್ಥಳೀಯರು ಜಿಬಿಎ ಮತ್ತು ಅಧಿಕಾರಿಗಳಿಂದ ಕೂಡಲೇ ಪರಿಹಾರ ನಿರೀಕ್ಷಿಸುತ್ತಿದ್ದಾರೆ. ಈ ಹೊಸ ಪಾರ್ಕಿಂಗ್ ಸಮಸ್ಯೆಗೆ ಶಾಶ್ವತ ಪರಿಹಾರ ಅಗತ್ಯ.

ಜಿಬಿಎ ಸ್ಟಿಕ್ಕರ್ ಭೀತಿಗೆ ಗಲ್ಲಿ ಸೇರಿದ ಕಾರುಗಳು: ಕುಮಾರಸ್ವಾಮಿ ಲೇಔಟ್‌ನಲ್ಲಿ ಅಕ್ರಮ ಪಾರ್ಕಿಂಗ್ ಹಾವಳಿ
ಅಕ್ರಮ ವಾಹನ ನಿಲುಗಡೆ
ಅಕ್ಷಯ್​ ಪಲ್ಲಮಜಲು​​
| Edited By: |

Updated on:Jul 15, 2026 | 6:51 PM

Share

ಬೆಂಗಳೂರು, ಜು.15: ಸಿಲಿಕಾನ್ ಸಿಟಿಯಲ್ಲಿ ಅನಾಥ ವಾಹನಗಳು ಹಾಗೂ ದೀರ್ಘಕಾಲದಿಂದ ರಸ್ತೆ ಬದಿಯಲ್ಲಿ ನಿಲ್ಲಿಸಿರುವ ವಾಹನಗಳ ವಿರುದ್ಧ ಜಿಬಿಎ ಸಮರ ಸಾರಿದೆ. ಪ್ರಮುಖ ರಸ್ತೆಗಳಲ್ಲಿ ಇಂತಹ ವಾಹನಗಳಿಗೆ ಸ್ಟಿಕ್ಕರ್ ಅಂಟಿಸಿ, ಟೋಯಿಂಗ್ ಮಾಡುವ ಮೂಲಕ ತೆರವು ಕಾರ್ಯಾಚರಣೆಯ ಕಠಿಣ ಎಚ್ಚರಿಕೆ ನೀಡುತ್ತಿದೆ. ಆದರೆ, ಜಿಬಿಎ ಕೈಗೊಂಡಿರುವ ಈ ಕ್ರಮದ ಬೆನ್ನಲ್ಲೇ ನಗರದಲ್ಲಿ ಹೊಸದೊಂದು ತಲೆನೋವು ಶುರುವಾಗಿದೆ. ಮುಖ್ಯ ರಸ್ತೆಗಳಲ್ಲಿ ಜಿಬಿಎ ಕಣ್ಣು ತಪ್ಪಿಸಲು ವಾಹನ ಮಾಲೀಕರು ಈಗ ವಸತಿ ಪ್ರದೇಶಗಳ ಗಲ್ಲಿ-ಗಲ್ಲಿಗಳನ್ನೇ ತಮ್ಮ ಹೊಸ ಪಾರ್ಕಿಂಗ್ ತಾಣಗಳನ್ನಾಗಿ ಮಾಡಿಕೊಳ್ಳುತ್ತಿದ್ದಾರೆ.

ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಮೊದಲ ಹಂತದಲ್ಲಿರುವ ಲವಕುಶ ಪಾರ್ಕ್ ಪಕ್ಕದ ರಸ್ತೆ ಇದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ. ಇಲ್ಲಿನ ರಸ್ತೆಯ ಎರಡೂ ಬದಿಗಳಲ್ಲೂ ಸಾಲು ಸಾಲು ಕಾರುಗಳು ನಿಂತಿದ್ದು, ಇಡೀ ರಸ್ತೆಯೇ ಪಾರ್ಕಿಂಗ್ ಲಾಟ್‌ನಂತೆ ಮಾರ್ಪಟ್ಟಿದೆ. ಆಶ್ಚರ್ಯದ ಸಂಗತಿ ಎಂದರೆ, ಈ ವಾಹನಗಳಲ್ಲಿ ಬಹುತೇಕವು ಸ್ಥಳೀಯ ನಿವಾಸಿಗಳದ್ದಲ್ಲ, ಬೇರೆ ಪ್ರದೇಶದ ವಾಹನ ಮಾಲೀಕರು ಜಿಬಿಎಗೆ ಹೆದರಿ ತಮ್ಮ ಕಾರುಗಳನ್ನು ಇಲ್ಲಿ ದಿನಗಟ್ಟಲೆ, ವಾರಗಟ್ಟಲೆ ನಿಲ್ಲಿಸಿ ಹೋಗುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಗಲ್ಲಿಗಳ ರಸ್ತೆಯಲ್ಲಿ ಅನಿಯಂತ್ರಿತವಾಗಿ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ಸಾರ್ವಜನಿಕರಿಗೆ ಓಡಾಡುವುದೇ ಕಷ್ಟಕರವಾಗಿದೆ. ಕಿರಿದಾದ ಗಲ್ಲಿಗಳಲ್ಲಿ ಎರಡು ವಾಹನಗಳು ಎದುರು ಬಂದರೆ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳುತ್ತಿದೆ. ತುರ್ತು ಸಂದರ್ಭಗಳಲ್ಲಿ ಆಂಬ್ಯುಲೆನ್ಸ್ ಹಾಗೂ ಅಗ್ನಿಶಾಮಕ ವಾಹನಗಳು ಕೂಡ ಸಾಗಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ರಸ್ತೆ ಸ್ವಚ್ಛಗೊಳಿಸಲು ಬರುವ ಜಿಬಿಎ ಸಿಬ್ಬಂದಿಗೂ ಈ ಸಾಲು ಸಾಲು ವಾಹನಗಳ ಕಾರಣದಿಂದ ಸ್ವಚ್ಛತಾ ಕಾರ್ಯ ನಡೆಸಲು ಸಾಧ್ಯವಾಗುತ್ತಿಲ್ಲ. ವಾಹನಗಳ ಕೆಳಗೆ ಹಾಗೂ ಮಧ್ಯೆ ಕಸದ ರಾಶಿ ಬೀಳುತ್ತಿದ್ದು, ಇಡೀ ಪ್ರದೇಶ ದುರ್ವಾಸನೆಯಿಂದ ನರಳುತ್ತಿದೆ. ಈ ಅಕ್ರಮ ಪಾರ್ಕಿಂಗ್ ಸಮಸ್ಯೆ ಕೇವಲ ಸಂಚಾರ ಮತ್ತು ಸ್ವಚ್ಛತೆಗೆ ಮಾತ್ರ ಸೀಮಿತವಾಗಿಲ್ಲ, ಬದಲಿಗೆ ಸ್ಥಳೀಯರ ಭದ್ರತೆಗೂ ಕಂಟಕ ತಂದಿದೆ. ರಾತ್ರಿ ವೇಳೆ ಕತ್ತಲಾಗುತ್ತಿದ್ದಂತೆ ಕೆಲವರು ಈ ವಾಹನಗಳ ಮರೆಯಲ್ಲಿ ನಿಂತು ಮದ್ಯಪಾನ ಮಾಡುತ್ತಿದ್ದು, ಖಾಲಿ ಬಾಟಲಿಗಳನ್ನು ಅಲ್ಲಿಯೇ ಬಿಸಾಡಿ ಹೋಗುತ್ತಿದ್ದಾರೆ. ಇದರಿಂದಾಗಿ ಮಹಿಳೆಯರು ಹಾಗೂ ಮಕ್ಕಳು ರಾತ್ರಿ ವೇಳೆ ಈ ರಸ್ತೆಗಳಲ್ಲಿ ಓಡಾಡಲು ಭಯಪಡುವಂತಾಗಿದೆ.

ಇದನ್ನೂ ಓದಿ: ಫುಟ್​ಪಾತ್ ಒತ್ತುವರಿ, ಅನಾಥ ವಾಹನಗಳ ತೆರವು ಬೆನ್ನಲ್ಲೇ ಮತ್ತೊಂದು ಅಭಿಯಾನಕ್ಕೆ ಬೆಂಗಳೂರು ಸಿದ್ಧ! ಆಗಸ್ಟ್​ 1ರಿಂದ ಕ್ಲೀನಿಂಗ್

ಈ ಗಂಭೀರ ಸಮಸ್ಯೆಯ ಕುರಿತು ಸ್ಥಳೀಯ ನಿವಾಸಿಗಳು ಹಲವು ಬಾರಿ ಜಿಬಿಎ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಸೂಕ್ತ ಸ್ಪಂದನೆ ಸಿಕ್ಕಿಲ್ಲ ಎನ್ನುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮುಖ್ಯ ರಸ್ತೆಗಳಲ್ಲಿ ಮಾತ್ರ ಕಾರ್ಯಾಚರಣೆ ನಡೆಸಿದರೆ ಸಾಲದು, ವಸತಿ ಪ್ರದೇಶಗಳ ಗಲ್ಲಿಗಳಲ್ಲಿ ಶಾಶ್ವತವಾಗಿ ನಿಲ್ಲಿಸಿರುವ ಇಂತಹ ವಾಹನಗಳ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಿವಾಸಿಗಳು ಕಡಕ್ಕಾಗಿ ಒತ್ತಾಯಿಸಿದ್ದಾರೆ. ಮುಖ್ಯ ರಸ್ತೆಯಿಂದ ಗಲ್ಲಿಗೆ ಶಿಫ್ಟ್ ಆದ ಈ ಹೊಸ ಪಾರ್ಕಿಂಗ್ ಟ್ರೆಂಡ್‌ಗೆ ಜಿಬಿಎ ಬ್ರೇಕ್ ಹಾಕುತ್ತಾ? ಅಥವಾ ಲೇಔಟ್‌ಗಳು ಹೀಗೆಯೇ ಅಕ್ರಮ ಪಾರ್ಕಿಂಗ್ ಅಡ್ಡೆಗಳಾಗಿ ಉಳಿಯುತ್ತವಾ? ಎಂಬುದನ್ನು ಅಧಿಕಾರಿಗಳೇ ಉತ್ತರಿಸಬೇಕಿದೆ.

ವರದಿ: ನಟರಾಜ್ ಬೆಂಗಳೂರು

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:16 am, Wed, 15 July 26

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ