ಬೆಂಗಳೂರು: ಇಂದಿರಾಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ಎಂಆರ್​ಐ ಸ್ಕ್ಯಾನಿಂಗ್ ಕೊರತೆ

ಬೆಂಗಳೂರಿನ ಪ್ರತಿಷ್ಠಿತ ಸರ್ಕಾರಿ ಮಕ್ಕಳ ಆಸ್ಪತ್ರೆಗೆ ನಿತ್ಯ ನೂರಾರು ಜನರು ಚಿಕಿತ್ಸೆಗೆ ಬರುತ್ತಾರೆ. ಬಡ ಪೋಷಕರು ಉಚಿತ ಚಿಕಿತ್ಸೆ ಎಂದು ಮಕ್ಕಳನ್ನು ಕರೆದುಕೊಂಡು ಇಂದಿರಾಗಾಂಧಿ ಸರ್ಕಾರಿ ಆಸ್ಪತ್ರೆಗೆ ಬರುತ್ತಾರೆ. ಆದರೆ, ಸಣ್ಣಪುಟ್ಟ ಸ್ಕ್ಯಾನ್​​ಗೂ ಸಾವಿರಾರು ರೂಪಾಯಿ ಖರ್ಚ ಮಾಡಬೇಕಾದ ಸ್ಥಿತಿ ಈ ಆಸ್ಪತ್ರೆಯಲ್ಲಿದೆ.

ಬೆಂಗಳೂರು: ಇಂದಿರಾಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ಎಂಆರ್​ಐ ಸ್ಕ್ಯಾನಿಂಗ್ ಕೊರತೆ
ಇಂದಿರಾಗಾಂಧಿ ಸರ್ಕಾರಿ ಆಸ್ಪತ್ರೆ
Updated By: Ganapathi Sharma

Updated on: Aug 10, 2024 | 5:46 PM

ಬೆಂಗಳೂರು, ಆಗಸ್ಟ್ 10: ಬೆಂಗಳೂರಿನ ಇಂದಿರಾಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ಎಂಆರ್​​​ಐ ಸ್ಕ್ಯಾನಿಂಗ್ ಇಲ್ಲದೇ ಬಡ ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಉಚಿತ ಅಥವಾ ಕಡಿಮೆ ದರದಲ್ಲಿ ಮಾಡಿಸಬಹುದಾದ ಸ್ಕ್ಯಾನಿಂಗ್‌ಗೆ ಖಾಸಗಿ ಲ್ಯಾಬ್‌ಗಳಲ್ಲಿ ದುಬಾರಿ ಹಣ ತೆತ್ತು ರೋಗಿಗಳು ಸುಸ್ತಾಗಿದ್ದಾರೆ. ಇಂದಿಗೂ ಖಾಸಗಿ ಲ್ಯಾಬ್‌ಗಳಿಗೆ ರೋಗಿಗಳ ಅಲೆದಾಟ ನಿಂತಿಲ್ಲ. ಎಂಆರ್​​​ಐ ಸ್ಕ್ಯಾನಿಂಗ್ ಸೌಲಭ್ಯ ದೊರೆಯದೇ ಬಡ ರೋಗಿಗಳು ಪರದಾಡುವಂತಾಗಿದೆ.

ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ನಿತ್ಯ ನೂರಾರು ಜನರು ಚಿಕಿತ್ಸೆಗೆ ಬರುತ್ತಾರೆ. ಉಚಿತ ಚಿಕಿತ್ಸೆ ದೊರೆಯುತ್ತದೆ ಎಂದು ನಿತ್ಯ ಬಡ ಪೋಷಕರು ಮಕ್ಕಳನ್ನು ಕರೆದುಕೊಂಡು ಈ ಸರ್ಕಾರಿ ಆಸ್ಪತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಆದರೆ ಸಣ್ಣಪುಟ್ಟ ಸ್ಕ್ಯಾನ್​​ಗೂ ಸಾವಿರಾರೂ ರೂಪಾಯಿ ಖರ್ಚು ಮಾಡಬೇಕಾಗಿ ಬರುತ್ತಿದೆ. ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ ಎಂಆರ್​ಐ ಸ್ಕ್ಯಾನಿಂಗ್​​​ಗೆ ಬೇಡಿಕೆ ಇದೆ. ಆದರೆ ಇಲ್ಲಿ ಸ್ಕ್ಯಾನಿಂಗ್ ಸೆಂಟರ್ ಇಲ್ಲದ ಕಾರಣ ಪೋಷಕರು ಸಾವಿರಾರು ರೂಪಾಯಿ ಖರ್ಚು ಮಾಡಿ ಹೊರಗಡೆ ಸ್ಕ್ಯಾನ್ ಮಾಡಿಸಲು ಹೋಗಬೇಕಾದ ಸ್ಥಿತಿ ಎದುರಾಗಿದೆ. ಎಂಆರ್​​​ಐ ಸ್ಕ್ಯಾನಿಂಗ್ ಸೆಂಟರ್​​ಗಾಗಿ ಆಸ್ಪತ್ರೆ ಹಲವು ವರ್ಷಗಳಿಂದ ಸರ್ಕಾರಕ್ಕೆ ಬೇಡಿಕೆ ಇಟ್ಟರೂ ಸಿಕ್ಕಿಲ್ಲ. ಹೀಗಾಗಿ ಬಡ ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಉಚಿತ ಅಥವಾ ಕಡಿಮೆ ದರದಲ್ಲಿ ಮಾಡಿಸಬಹುದಾದ ಸ್ಕ್ಯಾನಿಂಗ್‌ಗೆ ಖಾಸಗಿ ಲ್ಯಾಬ್‌ಗಳಲ್ಲಿ ದುಬಾರಿ ಹಣ ತೆತ್ತು ರೋಗಿಗಳು ಸುಸ್ತಾಗಿದ್ದಾರೆ. ಇಂದಿಗೂ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ ಎಂಆರ್​​​ಐ ಸ್ಕ್ಯಾನಿಂಗ್ ಸೌಲಭ್ಯ ಇಲ್ಲದೆ ಖಾಸಗಿ ಲ್ಯಾಬ್‌ಗಳಿಗೆ ರೋಗಿಗಳ ಅಲೆದಾಟ ನಿಂತಿಲ್ಲ. ನಿತ್ಯ 300 ರಿಂದ 350 ಮಕ್ಕಳು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಬರುತ್ತಾರೆ.

ಇದನ್ನೂ ಓದಿ: ಡೆಂಗ್ಯೂ ಕಂಟ್ರೋಲ್​ಗೆ ಮುಂಬೈ ಮಾದರಿ ಫಾಲೋ ಮಾಡಲು ಮುಂದಾದ ಬಿಬಿಎಂಪಿ; ಇಕೋ ಬಯೋ ಟ್ರ್ಯಾಪ್‌ ಬಳಕೆಗೆ ಪ್ಲಾನ್

ಈ ಆಸ್ಪತ್ರೆಗೆ ಬರುವ ರೋಗಿಗಳು ಆಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೇರಿದಂತೆ ಬೇರೆ ಎಲ್ಲ ರೀತಿಯ ಸ್ಕ್ಯಾನಿಂಗ್ ಮಾಡಿಸಲು ಖಾಸಗಿ ಲ್ಯಾಬ್‌ ಮೊರೆ ಹೋಗುತ್ತಿದ್ದು ಸಾವಿರಾರು ರೂಪಾಯಿ ಖರ್ಚು ಮಾಡಬೇಕಿದೆ. ಇದು ಬಡ ರೋಗಿಗಳಿಗೆ ದೊಡ್ಡ ಹೊರೆಯಾಗಿದೆ.

ಎಂಆರ್​ಐ ಸ್ಕ್ಯಾನಿಂಗ್ ವ್ಯವಸ್ಥೆ ಒದಗಿಸುವ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಇಂದಿರಾಗಾಂಧಿ ಆಸ್ಪತ್ರೆಯ ಡಾ. ಪ್ರಹ್ಲಾದ್ ತಿಳಿಸಿದ್ದಾರೆ. ಸರ್ಕಾರ ಇನ್ನಾದರೂ ಎಚ್ಚೆತ್ತು ಈ ಸೌಲಭ್ಯ ಒದಗಿಸಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ