ಕರ್ನಾಟಕ ವಿಧಾನಸಭೆ ಚುನಾವಣೆ(Karnataka Assembly Elections 2023) ಬೆನ್ನಲ್ಲೆ ರಾಜ್ಯದಲ್ಲಿ ರಾಜಕೀಯ ಪಕ್ಷಗಳು ಫುಲ್ ಆಕ್ಟಿವ್ ಆಗಿವೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿ(Narendra Modi) ಬೆಂಗಳೂರು, ತುಮಕೂರು ಸಂಚರಿಸಿ ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದಾರೆ. ಇತ್ತ ರಾಜ್ಯ ನಾಯಕರು ತಮ್ಮದೇ ರೀತಿಯಲ್ಲಿ ಸರ್ಕಸ್ ನಡೆಸುತ್ತಿದ್ದಾರೆ. ಸದ್ಯ ಬೆಂಗಳೂರಿನ ರಿಂಗ್ ರಸ್ತೆಗೆ ನಟ ಪುನೀತ್ ಹೆಸರು ನಾಮಕರಣ ಮಾಡಲಾಗುತ್ತಿದೆ. ಸಂಜೆ 6 ಗಂಟೆಗೆ ಪದ್ಮನಾಭನಗರದಲ್ಲಿ ಉದ್ಘಾಟನಾ ಸಮಾರಂಭ ಆಯೋಜಿಸಲಾಗಿದೆ. ಇನ್ನು ಇಂದು ಕಲಬುರಗಿ ಜಿಲ್ಲೆಯಲ್ಲಿ ಎರಡನೇ ದಿನದ ಪ್ರಜಾಧ್ವನಿ ಯಾತ್ರೆ ನಡೆಯಲಿದ್ದು ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವ ವಹಿಸಲಿದ್ದಾರೆ. ಮತ್ತೊಂದೆಡೆ ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಸಭೆಗೆ ಮುಂದಾಗಿದ್ದಾರೆ. ಇಂದು ಬೆಂಗಳೂರಿನ ವಿವಿಧ ವಿಧಾನಸಭಾ ಕ್ಷೇತ್ರಗಳ ಮುಖಂಡರ ಸಭೆ ನಡೆಸಲಿದ್ದಾರೆ. ಬನ್ನಿ ರಾಜಕೀಯದ ಕ್ಷಣ ಕ್ಷಣದ ಮಾಹಿತಿಯನ್ನು ಲೈವ್ ಮುಖಾಂತರ ಪಡೆಯಿರಿ.
Published On - 9:37 am, Tue, 7 February 23