ಬೆಂಗಳೂರಿನಲ್ಲಿ ರೌಡಿ ಶೀಟರ್​ಗಳ ಮೇಲೆ ಪೊಲೀಸ್​ ಫೈರಿಂಗ್​​

ಗಾಯಾಳು ಪಿಎಸ್ಐ ಉಮೇಶ್ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಗುಂಡೇಟು ಬಿದ್ದು ಬಂಧಿತರಾಗಿರುವ ಆರೋಪಿಗಳನ್ನು ಚಿಕಿತ್ಸೆಗಾಗಿ ಯಲಹಂಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನಲ್ಲಿ ರೌಡಿ ಶೀಟರ್​ಗಳ ಮೇಲೆ ಪೊಲೀಸ್​ ಫೈರಿಂಗ್​​
ಪ್ರಾತಿನಿಧಿಕ ಚಿತ್ರImage Credit source: google
Follow us
TV9 Web
| Updated By: ಸಾಧು ಶ್ರೀನಾಥ್​

Updated on:Apr 05, 2022 | 7:20 PM

ಬೆಂಗಳೂರು: ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಹಿನ್ನೆಲೆ ಬೆಂಗಳೂರಿನಲ್ಲಿ ಇಬ್ಬರು ರೌಡಿಶೀಟರ್​ಗಳ ಮೇಲೆ ಪೊಲೀಸರು ಫೈರಿಂಗ್​​ ಮಾಡಿದ್ದಾರೆ. ಮೂಲತಃ ಮಂಗಳೂರಿನ ಅಶಿಕ್ ಮತ್ತು ಇಸಾಕ್​​ ಕಾಲಿಗೆ ಗುಂಡೇಟು ತಿಂದ ಪಾತಕಿಗಳು. ಆತ್ಮರಕ್ಷಣೆಗಾಗಿ ಕಾಲಿಗೆ ಗುಂಡು ಹಾರಿಸಿ ಆರೋಪಿಗಳ ಸೆರೆ ಹಿಡಿಯಲಾಗಿದೆ. ಆರೋಪಿ ಡೆಡ್ಲಿ ದರೋಡೆಕೋರರು ಪೊಲೀಸ್​ ಸಬ್​ಇನ್ಸ್​ಪೆಕ್ಟರ್​​ ಉಮೇಶ್​ ಎದೆಗೆ ಚಾಕು ಇರಿದಿದ್ದರು.

ಕೊತ್ತನೂರು ಠಾಣಾ ವ್ಯಾಪ್ತಿಯಲ್ಲಿ ಕಾರನ್ನ ಅಡ್ಡಗಟ್ಟಿ ಮಾರ್ಚ್ 26 ರಂದು ವ್ಯಕ್ತಿ ಸುಲಿಗೆ ಮಾಡಲಾಗಿತ್ತು. ಸುಲಿಗೆ ಬಳಿಕ ದೂರುದಾರರನ್ನ ಲೈಂಗಿಕವಾಗಿ ಬಳಸಿಕೊಂಡಿದ್ದರು. ಖಚಿತ ಮಾಹಿತಿ ಮೇರೆಗೆ ಕೊತ್ತನೂರು ಇನ್ಸ್ ಪೆಕ್ಟರ್ ಮತ್ತು ತಂಡ ಬಂಧಿಸಲು ತೆರಳಿದ್ದಾಗ ಘಟನೆ ನಡೆದಿದೆ. ಸಂಪಿಗೆಹಳ್ಳಿ ಉಪವಿಭಾಗ ಎಸಿಪಿ ರಂಗಪ್ಪ ನೇತೃತ್ವದಲ್ಲಿ ದಾಳಿ ನಡೆದಿತ್ತು. ಇದೀಗ ಕೊತ್ತನೂರು ಠಾಣೆ ಇನ್ಸ್​​ಪೆಕ್ಟರ್​​ ಚೆನ್ನೇಶ್​ ಆರೊಪಿಗಳ ಮೇಲೆ ಗುಂಡು ಹಾರಿಸಿದ್ದಾರೆ. ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಗಾಯಾಳು ಪಿಎಸ್ಐ ಉಮೇಶ್ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಗುಂಡೇಟು ಬಿದ್ದು ಬಂಧಿತರಾಗಿರುವ ಆರೋಪಿಗಳನ್ನು ಚಿಕಿತ್ಸೆಗಾಗಿ ಯಲಹಂಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನ ಬಾಲಗಂಗಾಧರನಾಥ ಫ್ಲೈಓವರ್​ ಮೇಲೆ ಆ್ಯಕ್ಸಿಡೆಂಡ್: ಕೆ ಆರ್ ಮಾರ್ಕೆಟ್ ಬಳಿಯ ಬಾಲಗಂಗಾಧರನಾಥ ಸ್ವಾಮಿಜಿ‌ ಮೇಲ್ಸೆತುವೆ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಮೇಲ್ಸೆತುವೆ ಮೇಲೆ ಅಪಘಾತವಾದ ಕಾರಣ ಕಾರ್ಪೋರೇಶನ್ ಸುತ್ತಮುತ್ತ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಹಲಸೂರು ಗೇಟ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಎರಡು ಕಾರುಗಳ ಮಧ್ಯೆ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು: ಎರಡು ಕಾರುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಬಿದರೆಗುಡಿ ಬಳಿ ದುರಂತ ಸಂಭವಿಸಿದೆ. ಸ್ವಿಪ್ಟ್ ಹಾಗೂ ಬ್ರೀಜಾ ಕಾರುಗಳು ಮುಖಾಮುಖಿ ಡಿಕ್ಕಿಯಾಗಿವೆ. ಸ್ಚಿಪ್ಟ್ ಕಾರಿನಲ್ಲಿದ್ದ ಸಿಎಸ್ ಪುರದ ರಾಜೇಶ್ ಹಾಗೂ ಬೆಲವತ್ತ ಗ್ರಾಮದ ವೆಂಕಟಾಚಲ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ಹೊನ್ನವಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬ್ರೀಜಾ ಕಾರಿನಲ್ಲಿ ಇದ್ದ ಓರ್ವ ವ್ಯಕ್ತಿಗೆ ಕಾಲು‌ ಮುರಿದಿದೆ. ಸಣ್ಣಪುಟ್ಟ ಗಾಯಗೊಂಡ ಮೂವರಿಗೆ ತಿಪಟೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

Published On - 7:07 pm, Tue, 5 April 22

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ