ಬಿಜೆಪಿ ಶಾಸಕ ಪುತ್ರ ಪ್ರಶಾಂತ್ ಮಾಡಾಳ್ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದ ಲೋಕಾಯುಕ್ತ ಕೋರ್ಟ್
ಲಂಚ ಸ್ವೀರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಬಿಜೆಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಪುತ್ರ ಪ್ರಶಾಂತ್ಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.
ಬೆಂಗಳೂರು: ಲಂಚ ಸ್ವೀರಿಸುತ್ತಿದ್ದ ವೇಳೆ ಲೋಕಾಯುಕ್ತ (lokayukta)ಬಲೆಗೆ ಬಿದ್ದಿದ್ದ ಬಿಜೆಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಪುತ್ರ ಪ್ರಶಾಂತ್ಗೆ 14 ದಿನ ನ್ಯಾಯಾಂಗ ಬಂಧನವಾಗಿದೆ. ಪ್ರಶಾಂತ್ ಸೇರಿದಂತೆ ಐವರರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ ಲೋಕಾಯುಕ್ತ ಕೋರ್ಟ್ (bangalore lokayukta court) ಆದೇಶ ಹೊರಡಿಸಿದೆ. ನಿನ್ನೆ(ಮಾ.02) ಸಂಜೆ ಬೆಂಗಳೂರಿನ ಕ್ರಸೆಂಟ್ ರಸ್ತೆಯಲ್ಲಿರುವ ಕಚೇರಿಯಲ್ಲಿ ವ್ಯಕ್ತಿಯಿಂದ 40 ಲಕ್ಷ ರೂ ನಗದು ಲಂಚ ತೆಗೆದುಕೊಳ್ಳುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು.
ನಿನ್ನೆ (ಮಾ.02) ಸಂಜೆ ಪ್ರಶಾಂತ್ನನ್ನು ಬಂಧಿಸಿದ್ದ ಲೋಕಾಯುಕ್ತ ಪೊಲೀಸರು ಇಂದು ಬೆಳಿಗ್ಗೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು. ಕೋರ್ಟ್ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಇನ್ನೂ ರೇಡ್ ಬಾಕಿ ಇರುವ ಹಿನ್ನೆಲೆಯಲ್ಲಿ ಪ್ರಾಥಮಿಕ ತನಿಖಾ ಹಂತ ಪೂರ್ಣಗೊಂಡ ನಂತರ ಲೋಕಾಯುಕ್ತ ಅಧಿಕಾರಿಗಳು ತಮ್ಮ ಕಷ್ಟಡಿಗೆ ಕೇಳುವ ಸಾಧ್ಯತೆಗಳಿವೆ. ಸದ್ಯ ಪ್ರಶಾಂತ್ ಮಾಡಾಳ್ ಸೇರಿ ಐವರಿಗೂ 14 ದಿನಗಳ ಕಾಲ ಜೈಲು ಫಿಕ್ಸ್.
ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ, ಕೆಎಸ್ಡಿಎಲ್ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಟೆಂಡರ್ವೊಂದಕ್ಕೆ ಸಂಬಂಧಿಸಿದಂತೆ 80 ಲಕ್ಷ ಕಮಿಷನ್ ಕೇಳಿದ್ದರು. ಈ ಪೈಕಿ ಮುಂಗಡವಾಗಿ ಪ್ರಶಾಂತ್ 40 ಲಕ್ಷ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಬಂಧಿಸಿದ್ದರು. ಬಳಿಕ BWSSB ಮುಖ್ಯ ಲೆಕ್ಕಾಧಿಕಾರಿ ಮಾಡಾಳ್ ಪ್ರಶಾಂತ್ ಕಚೇರಿ ಮತ್ತು ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಾಡಿದ್ದರು. ಈ ವೇಳೆ ಬರೊಬ್ಬರಿ ಒಟ್ಟು 7 ಕೋಟಿ 62 ಲಕ್ಷ ರೂ. ಹಣ ಪತ್ತೆಯಾಗಿದೆ. ಹಾಗೇ ಪ್ರಶಾಂತ್ ಮಾಡಾಳ್ ಸೇರಿ ಐವರನ್ನು ಬಂಧಿಸಲಾಗಿತ್ತು.
Published On - 10:42 am, Fri, 3 March 23