AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚ ಪಡೆಯುತ್ತಿರುವಾಗಲೇ ಲೋಕಾ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು: ಬೆಂಗಳೂರಿನಲ್ಲಿ ಲೋಕಾಯುಕ್ತ ಭರ್ಜರಿ ಟ್ರ್ಯಾಪ್

ಬೆಂಗಳೂರು ಲೋಕಾಯುಕ್ತ ಭ್ರಷ್ಟಾಚಾರ ನಿಗ್ರಹ ಕಾರ್ಯಾಚರಣೆಯಲ್ಲಿ, ದಕ್ಷಿಣ ವಿಭಾಗದ ಉಪ ಮುಖ್ಯ ವಿದ್ಯುತ್ ನಿರೀಕ್ಷಕ ಸಿದ್ದಪ್ಪ ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಹೊಸ ಅಪಾರ್ಟ್‌ಮೆಂಟ್‌ಗೆ ವಿದ್ಯುತ್ ಸುರಕ್ಷತಾ ವರದಿ ನೀಡಲು ₹20,000 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸಿದ್ದಪ್ಪನನ್ನು ವಿದ್ಯುತ್ ಗುತ್ತಿಗೆದಾರರ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಈ ಮೂಲಕ ಸಿಲಿಕಾನ್ ಸಿಟಿಯಲ್ಲಿ ಭ್ರಷ್ಟಾಚಾರಕ್ಕೆ ಬ್ರೇಕ್ ಬಿದ್ದಿದೆ.

ಲಂಚ ಪಡೆಯುತ್ತಿರುವಾಗಲೇ ಲೋಕಾ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು: ಬೆಂಗಳೂರಿನಲ್ಲಿ ಲೋಕಾಯುಕ್ತ ಭರ್ಜರಿ ಟ್ರ್ಯಾಪ್
ಲೋಕಾಯುಕ್ತ ಬೆಂಗಳೂರು
ರಾಚಪ್ಪಾಜಿ ನಾಯ್ಕ್
| Edited By: |

Updated on: Jun 08, 2026 | 10:13 PM

Share

ಬೆಂಗಳೂರು, ಜೂ.8: ಸಿಲಿಕಾನ್ ಸಿಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಪಾರ್ಟ್‌ಮೆಂಟ್ ಪರಿಶೀಲನೆ ವರದಿ ನೀಡಲು ಲಂಚ ಸ್ವೀಕರಿಸುತ್ತಿದ್ದ ಬೆಂಗಳೂರು ದಕ್ಷಿಣ ವಿಭಾಗದ ಉಪ ಮುಖ್ಯ ವಿದ್ಯುತ್ ನಿರೀಕ್ಷಕರನ್ನು (Deputy Chief Electrical Inspector) ಹಣ ಸಹಿತ ವಶಕ್ಕೆ ಪಡೆದಿದ್ದಾರೆ. ಲೋಕಾ ಬಲೆಗೆ ಬಿದ್ದ ಈ ಭ್ರಷ್ಟ ಅಧಿಕಾರಿಯನ್ನು ಸಿದ್ದಪ್ಪ ಎಂದು ಗುರುತಿಸಲಾಗಿದೆ.

ಮೂಲಗಳ ಪ್ರಕಾರ, ಬೆಂಗಳೂರು ದಕ್ಷಿಣ ವ್ಯಾಪ್ತಿಯಲ್ಲಿ ಹೊಸದಾಗಿ ನಿರ್ಮಾಣಗೊಂಡಿದ್ದ ಅಪಾರ್ಟ್‌ಮೆಂಟ್ ಕಟ್ಟಡದ ಆವರ್ತಕ ಪರಿಶೀಲನೆ ನಡೆಸಲು ಮತ್ತು ಅದಕ್ಕೆ ಸಂಬಂಧಿಸಿದ ಬಾಕಿ ಇರುವ ವಿದ್ಯುತ್ ಸುರಕ್ಷತಾ ವರದಿಗಳನ್ನು ನೀಡಲು ಅಧಿಕಾರಿ ಸಿದ್ದಪ್ಪ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ವಿದ್ಯುತ್ ಗುತ್ತಿಗೆದಾರರಾದ ರಘುರಾಜ್ ಮತ್ತು ನಾಗರಾಜ್ ಅವರು ಭ್ರಷ್ಟ ಅಧಿಕಾರಿಗೆ ಪಾಠ ಕಲಿಸಲು ನಿರ್ಧರಿಸಿ, ಬೆಂಗಳೂರು ಲೋಕಾಯುಕ್ತ ಪೊಲೀಸರಿಗೆ ಅಧಿಕೃತವಾಗಿ ದೂರು ನೀಡಿದ್ದರು.

ಇದನ್ನೂ ಓದಿ: ‘ರಸ್ತೆ ಗುಂಡಿಗೆ ಬಿದ್ದು ಪ್ರಾಣ ಹೋದರೆ ಇಂಜಿನಿಯರ್‌ಗಳೇ ನೇರ ಹೊಣೆ’: ಸಚಿವ ಯು.ಟಿ.ಖಾದರ್ ಖಡಕ್ ವಾರ್ನಿಂಗ್

ಮುಖ್ಯಾಂಶಗಳು:

ಲಂಚ ಸ್ವೀಕರಿಸುತ್ತಿದ್ದ ಬೆಂಗಳೂರು ದಕ್ಷಿಣ ವಿಭಾಗದ ಉಪ ಮುಖ್ಯ ವಿದ್ಯುತ್ ನಿರೀಕ್ಷಕ ಲೋಕಯುಕ್ತ ಬಲೆಗೆ

ಅಪಾರ್ಟ್‌ಮೆಂಟ್ ಕಟ್ಟಡ ವಿದ್ಯುತ್ ಸುರಕ್ಷತಾ ವರದಿಗಳನ್ನು ನೀಡಲು ಲಂಚಕ್ಕೆ ಬೇಡಿಕೆ

ಆರೋಪಿ ಸಿದ್ದಪ್ಪನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳ ಮಾರ್ಗದರ್ಶನದಂತೆಯೇ ಇಂದು ದೂರುದಾರರಾದ ರಘುರಾಜ್ ಮತ್ತು ನಾಗರಾಜ್ ಅವರು ಅಧಿಕಾರಿ ಸಿದ್ದಪ್ಪ ಅವರನ್ನು ಭೇಟಿಯಾಗಿ, ಅವರು ಕೇಳಿದ್ದ 20,000 ರೂಪಾಯಿ ಲಂಚದ ಹಣವನ್ನು ಹಸ್ತಾಂತರಿಸುತ್ತಿದ್ದರು. ಈ ವೇಳೆ ಹೊಂಚು ಹಾಕಿ ಕುಳಿತಿದ್ದ ಲೋಕಾಯುಕ್ತ ಇನ್ಸ್‌ಪೆಕ್ಟರ್‌ಗಳ ತಂಡ ದಾಳಿ ನಡೆಸಿ, ಲಂಚದ ಹಣದೊಂದಿಗೆ ಸಿದ್ದಪ್ಪನನ್ನು ಸ್ಥಳದಲ್ಲೇ ಟ್ರ್ಯಾಪ್ ಮಾಡಿದೆ. ಸದ್ಯ ಆರೋಪಿ ಸಿದ್ದಪ್ಪನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದು, ಲಂಚದ ಹಣವನ್ನು ವಶಪಡಿಸಿಕೊಂಡು ತೀವ್ರ ವಿಚಾರಣೆ ಮುಂದುವರಿಸಿದ್ದಾರೆ.

ಮೊಬೈಲ್ ಲೈಸೆನ್ಸ್‌ಗೆ ಲಂಚ ಪಡೆದು ಸಿಕ್ಕಿಬಿದ್ದ ಲೇಡಿ ಆಫೀಸರ್ ವಾಣಿಶ್ರೀ:

ಲಂಚ ಸ್ವೀಕರಿಸುತ್ತಿದ್ದ ಕಾನೂನು ಮಾಪನಶಾಸ್ತ್ರ ಇಲಾಖೆಯ ಮಹಿಳಾ ಅಧಿಕಾರಿಯನ್ನು ಸಾಕ್ಷಿ ಸಮೇತ ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ನಾಗರಭಾವಿಯಲ್ಲಿರುವ ಕಚೇರಿಯ ಸಹಾಯಕ ನಿಯಂತ್ರಕಿ ಎಂ.ಎಸ್. ವಾಣಿಶ್ರೀ ಲೋಕಾಯುಕ್ತರ ಬಲೆಗೆ ಬಿದ್ದ ಭ್ರಷ್ಟ ಅಧಿಕಾರಿಯಾಗಿದ್ದಾರೆ. ದೂರುದಾರರು ಮೊಬೈಲ್ ಆಕ್ಸೆಸರೀಸ್ ಪ್ಯಾಕೇಜಿಂಗ್ ಪರವಾನಗಿ ಪಡೆಯಲು ಕಾನೂನು ಮಾಪನಶಾಸ್ತ್ರ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ಆದರೆ ಈ ಪರವಾನಗಿ ನೀಡಲು ಸಹಾಯಕ ನಿಯಂತ್ರಕಿ ವಾಣಿಶ್ರೀ ಅವರು ಒಟ್ಟು 10,000 ರೂಪಾಯಿ ಲಂಚ ನೀಡುವಂತೆ ದೂರುದಾರರಿಗೆ ಬೇಡಿಕೆ ಇಟ್ಟು ಸತಾಯಿಸುತ್ತಿದ್ದರು. ಅಧಿಕಾರಿಯ ಕಿರುಕುಳದಿಂದ ಬೇಸತ್ತ ಅರ್ಜಿದಾರರು ತಕ್ಷಣವೇ ಈ ಬಗ್ಗೆ ಬೆಂಗಳೂರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಲೋಕಾಯುಕ್ತ ಅಧಿಕಾರಿಗಳ ಮಾಸ್ಟರ್ ಪ್ಲಾನ್‌ನಂತೆ, ಇಂದು ದೂರುದಾರರು ಲಂಚದ ಒಟ್ಟು ಮೊತ್ತದ ಪೈಕಿ ಮೊದಲ ಕಂತಾಗಿ 5,000 ರೂಪಾಯಿ ನಗದು ಹಣವನ್ನು ನಾಗರಭಾವಿ ಕಚೇರಿಯಲ್ಲಿ ಅಧಿಕಾರಿ ವಾಣಿಶ್ರೀ ಅವರಿಗೆ ಹಸ್ತಾಂತರಿಸುತ್ತಿದ್ದರು. ಈ ವೇಳೆ ಹೊಂಚು ಹಾಕಿದ್ದ ಲೋಕಾಯುಕ್ತ ಎಸ್ಪಿ (SP) ಶಿವಪ್ರಕಾಶ್ ದೇವರಾಜ್ ನೇತೃತ್ವದ ಹಿರಿಯ ಅಧಿಕಾರಿಗಳ ತಂಡ ಕಚೇರಿಯ ಮೇಲೆ ಧಿಡೀರ್ ದಾಳಿ ನಡೆಸಿ, ಲಂಚದ ಹಣದೊಂದಿಗೆ ವಾಣಿಶ್ರೀ ಅವರನ್ನು ಹಿಡಿದಿದ್ದಾರೆ. ಸದ್ಯ ಮಹಿಳಾ ಅಧಿಕಾರಿಯನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ