AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಧು ಹುಡುಕಿಕೊಡದ ಮ್ಯಾರೇಜ್​ ಬ್ಯೂರೋಗೆ ಬರೊಬ್ಬರಿ 60 ಸಾವಿರ ರೂ. ದಂಡ

ಬೆಂಗಳೂರಿನ ದಿಲ್ ಮಿಲ್ ಮ್ಯಾಟ್ರಿಮೋನಿ ಸಂಸ್ಥೆ ತನ್ನ ಗ್ರಾಹಕರಿಗೆ ವಧು ಹುಡುಕಲು ವಿಫಲವಾದ ಕಾರಣ ಗ್ರಾಹಕ ನ್ಯಾಯಾಲಯವು 60,000 ರೂ. ದಂಡ ವಿಧಿಸಿದೆ. ಈ ಪ್ರಕರಣವು ಮದುವೆ ಬ್ಯೂರೋಗಳಲ್ಲಿನ ವಿಶ್ವಾಸಾರ್ಹತೆಯ ಕೊರತೆಯನ್ನು ಎತ್ತಿ ತೋರಿಸುತ್ತದೆ.

ವಧು ಹುಡುಕಿಕೊಡದ ಮ್ಯಾರೇಜ್​ ಬ್ಯೂರೋಗೆ ಬರೊಬ್ಬರಿ 60 ಸಾವಿರ ರೂ. ದಂಡ
ವಧು ಹುಡುಕಿಕೊಡದ ಮ್ಯಾರೇಜ್​ ಬ್ಯೂರೋಗೆ ಬರೊಬ್ಬರಿ 60 ಸಾವಿರ ರೂ. ದಂಡ
ವಿವೇಕ ಬಿರಾದಾರ
|

Updated on:Nov 04, 2024 | 10:34 AM

Share

ಬೆಂಗಳೂರು, ನವೆಂಬರ್​ 04: ಮದುವೆಯಾಗಲು (Marriage) ಕನ್ಯೆ ಸಿಗುತ್ತಿಲ್ಲ ಎಂದು ಅನೇಕ ಯುವಕರು ನೋವು ತೋಡಿಕೊಳ್ಳುತ್ತಾರೆ. ಲವ್​ ಮಾಡಿ ಮದುವೆಯಾಗೋಣವೆಂದರೇ ಯಾವ ಹುಡಗಿನೂ ಪ್ರಪೋಸಲ್​ ಎಕ್ಸಪ್ಟ್​​ ಮಾಡಿಕೊಳ್ಳುತ್ತಿಲ್ಲ ಅಂತ ಅನೇಕ ಯುವಕರು ಮರಗುತ್ತಾರೆ. ಅದರಲ್ಲಂತೂ ರೈತ ಮಕ್ಕಳಿಗೆ ಕನ್ಯೆ ಸಿಗುವುದೇ ದರ್ಲಬವಾಗಿದೆ. ಹೀಗಾಗಿ ಎಲ್ಲರೂ ಮ್ಯಾರೇಜ್​ ಬ್ಯೂರೋಗಳ ಮೊರೆ ಹೋಗುತ್ತಿದ್ದಾರೆ. ಆದರೆ, ಅವುಗಳಿಂದಲೂ ಕನ್ಯೆ ಸಿಗುತ್ತಿಲ್ಲ. ಹೌದು, ವಧು (Bride) ಹುಡುಕಿಕೊಡಲಿಲ್ಲ ಅಂತ ಮ್ಯಾಟ್ರಿಮೋನಿ ಪೋರ್ಟಲ್​​ಗೆ ಗ್ರಾಹಕರ ನ್ಯಾಯಾಲಯ (Consumer Court) 60 ಸಾವಿರ ರೂ. ದಂಡ ವಿಧಿಸಿದೆ.

ಬೆಂಗಳೂರಿನ ಎಂಎಸ್​ ನಗರ ನಿವಾಸಿ ಕೆಎಸ್​ ವಿಜಯಕುಮಾರ್​ ಅವರು ತಮ್ಮ ಮಗ ಬಾಲಾಜಿಗೆ ಕನ್ಯೆ ಹುಡುಕುತ್ತಿದ್ದರು. ಅದರಂತೆ, ವಿಜಯಕುಮಾರ್ ಅವರು ಕಲ್ಯಾಣ ನಗರದಲ್ಲಿರುವ ದಿಲ್ ಮಿಲ್ ಮ್ಯಾಟ್ರಿಮೋನಿಗೆ ಭೇಟಿ ನೀಡಿದ್ದರು. ಈ ವೇಳೆ ಸಂಸ್ಥೆ ಬಾಲಾಜಿಗೆ 45 ದಿನಗಳಲ್ಲಿ ವಧು ಹುಡುಕುವುದಾಗಿ ಭರವಸೆ ನೀಡಿತ್ತು. ಬಳಿಕ, ಕೆಸ್​​ ವಿಜಯಕುಮಾರ್ ಅವರು ಮಾರ್ಚ್ 17 ರಂದು ಸಂಸ್ಥಗೆ ತಮ್ಮ ಮಗನ ಮಗನ ಭಾವಚಿತ್ರ ಮತ್ತು ಅಗತ್ಯ ದಾಖಲೆಗಳನ್ನು ನೀಡಿದ್ದರು. ಜೊತೆಗೆ 30 ಸಾವಿರ ರೂ. ಶುಲ್ಕ ಪಾವತಿಸಿದ್ದರು. 45 ದಿನಗಳು ಕಳೆದರೂ ಸಂಸ್ಥೆ ವಧು ಹುಡುಕಿಕೊಡುವಲ್ಲಿ ವಿಫಲವಾಯಿತು. ಆಗ, ವಿಜಯಕುಮಾರ್​ ಅವರು ಹಣ ಮರಳಿಸುವಂತೆ ಹೇಳಿದರು. ಆದರೆ, ಸಂಸ್ಥೆ ಮಾತ್ರ ಸರಿಯಾಗಿ ಪ್ರತಿಕ್ರಿಯಿಸಲಿಲ್ಲ.

ಹೀಗಾಗಿ, ವಿಜಯಕುಮಾರ್ ಅವರು ಮಾರ್ಚ್ 30 ರಂದು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದರು. ಆಗ, ಸಂಸ್ಥೆ ಏಪ್ರಿಲ್ 30ರವರೆಗೆ ಕಾಯುವಂತೆ ಮನವಿ ಮಾಡಿಕೊಂಡಿತು. ಒಂದು ತಿಂಗಳು ಕಾಯುತ್ತಿದ್ದರೂ ದಿಲ್ ಮಿಲ್​ ಮ್ಯಾಟ್ರಿಮೋನಿ ಸಂಸ್ಥೆಯಿಂದ ಪ್ರತಿಕ್ರಿಯೆ ಬಂರಲಿಲ್ಲ. ಹೀಗಾಗಿ, ವಿಜಯಕುಮಾರ್​ ಅವರು ಮತ್ತೊಮ್ಮೆ ಕಚೇರಿಗೆ ಭೇಟಿ ನೀಡಿದಾಗ ಅಲ್ಲಿನ ಸಿಬ್ಬಂದಿ ನಿಂದಿಸಿ ಕೆಟ್ಟದಾಗಿ ನಡೆಸಿಕೊಂಡಿದ್ದಾರೆ.

ನಂತರ, ವಿಜಯಕುಮಾರ್ ಅವರು ಮೇ5 ರಂದು ಸಂಸ್ಥೆಗೆ ಲೀಗಲ್ ನೋಟಿಸ್ ನೀಡಿದರು. ಇದಕ್ಕೆ ಸಂಸ್ಥೆ ಯಾವುದೇ ಉತ್ತರ ನೀಡಲಿಲ್ಲ. ಹೀಗಾಗಿ, ವಿಜಯಕುಮಾರ್ ಅವರು ಗ್ರಾಹಕ ನ್ಯಾಯಾಲಯದ ಮೊರೆ ಹೋದರು. ವಿಜಯಕುಮಾರ್ ಅವರ ಆರೋಪಕ್ಕೆ ದಿಲ್ ಮಿಲ್‌ ಸಂಸ್ಥೆ ಯಾವುದೇ ಉತ್ತರ ನೀಡಲಿಲ್ಲ.

ಬೆಂಗಳೂರಿನ ನಾಲ್ಕನೇ ಹೆಚ್ಚುವರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಅಧ್ಯಕ್ಷ ಎಂಎಸ್ ರಾಮಚಂದ್ರ ಅವರು ವಿಚಾರಣೆ ವೇಳೆ, ದೂರುದಾರರಿಗೆ ಸೇವೆ ಸಲ್ಲಿಸುವ ವೇಳೆ ಸ್ಪಷ್ಟವಾದ ಕೊರತೆ ಕಂಡು ಬಂದಿದೆ. ಇದು ಅನ್ಯಾಯದ ವ್ಯಾಪಾರದ ಅಭ್ಯಾಸಗಳಲ್ಲಿ ತೊಡಗಿದೆ ಎಂದು ಹೇಳಬಹುದು. ಹೀಗಾಗಿ ದೂರುದಾರರು ಸಂಸ್ಥೆಗೆ ನೀಡಲಾದ ಶಲ್ಕದೊಂದಿಗೆ ಪರಿಹಾರ ಮೊತ್ತವನ್ನೂ ನೀಡಬೇಕೆಂದು ಆದೇಶಿಸಿದರು.

ಶುಲ್ಕವಾಗಿ ಸಂಗ್ರಹಿಸಿದ 30,000 ರೂ., ಸೇವಾ ಕೊರೆತಗೆ 20,000 ರೂ., ಮಾನಸಿಕ ಸಂಕಟ ಉಂಟುಮಾಡಿದ್ದಕ್ಕಾಗಿ 5,000 ರೂ. ವ್ಯಾಜ್ಯಕ್ಕೆ 5,000 ರೂಪಾಯಿಗಳನ್ನು ದೂರುದಾರ ವಿಜಯಕುಮಾರ್ ಅವರಿಗೆ ಮರುಪಾವತಿಸುವಂತೆ ಆಯೋಗ ಆದೇಶಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:32 am, Mon, 4 November 24

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ