ಮೆಟ್ರೋ ಟಿಕೆಟ್​ ದರ ಏರಿಕೆ ವಿರುದ್ಧ ಪ್ರತಿಭಟನೆ: ಎಬಿವಿಪಿ ಕಾರ್ಯಕರ್ತರ ವಿರುದ್ಧ ಎಫ್​ಐಆರ್

| Updated By: ವಿವೇಕ ಬಿರಾದಾರ

Updated on: Feb 15, 2025 | 11:33 AM

ಬೆಂಗಳೂರಿನ ನಮ್ಮ ಮೆಟ್ರೋದ ದರ ಏರಿಕೆಯಿಂದಾಗಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೆಟ್ರೋ ದರ ಏರಿಕೆಯು 45-50% ಎಂದು ಹೇಳಲಾಗಿದ್ದರೂ, ಪ್ರಯಾಣಿಕರು ಅದು 100% ರಷ್ಟು ಏರಿಕೆಯಾಗಿತ್ತು ಎಂದು ಆರೋಪಿಸಿದ್ದರು. ದರ ಏರಿಕೆಯಿಂದಾಗಿ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದೆ ಮತ್ತು ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿತ್ತು.

ಮೆಟ್ರೋ ಟಿಕೆಟ್​ ದರ ಏರಿಕೆ ವಿರುದ್ಧ ಪ್ರತಿಭಟನೆ: ಎಬಿವಿಪಿ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಎಬಿವಿಪಿ, ನಮ್ಮ ಮೆಟ್ರೋ
Follow us on

ಬೆಂಗಳೂರು, ಫೆಬ್ರವರಿ 15: ನಮ್ಮ ಮೆಟ್ರೋ (Namma Metro) ಪ್ರಯಾಣದ ದರ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದ್ದ ಎಬಿವಿಪಿಯ (ABVP) 16 ಜನ ಕಾರ್ಯಕರ್ತರ ವಿರುದ್ಧ ಕಾಟನ್​ಪೇಟೆ ಪೊಲೀಸ್​ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅನುಮತಿ ಪಡೆಯದೆ ಶುಕ್ರವಾರ ನಾಡಪ್ರಭು ಕೆಂಪೇಗೌಡ (ಮೆಜೆಸ್ಟಿಕ್) ಮೆಟ್ರೋ ನಿಲ್ದಾಣದ ಬಳಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದರು.

ನಮ್ಮ ಮೆಟ್ರೋ ದರ ಎಷ್ಟು ಏರಿಕೆಯಾಗಿತ್ತು?

ಈಗಾಗಲೇ ಮೆಟ್ರೋ ದರ ಏರಿಕೆಯನ್ನು ಜನರು ಖಂಡಿಸುತ್ತಿದ್ದಾರೆ. ದೊಡ್ಡ ಮಟ್ಟದಲ್ಲಿ ಪ್ರಯಾಣಿಕರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದರು. ಬಿಎಂಆರ್​ಸಿಎಲ್ 45% ರಿಂದ 50% ರಷ್ಟು ದರ ಏರಿಕೆ ಮಾಡಿದ್ದೇವೆ ಎಂದು ಹೇಳುತ್ತು. ಆದರೆ, 100% ರಷ್ಟು, ಅಂದ್ರೆ ಒನ್​ ಟು ಡಬಲ್ ಏರಿಕೆಯಾಗಿತ್ತು. ರೈತರು, ಕನ್ನಡಪರ ಹೋರಾಟಗಾರರು,ಪ್ರಗತಿಪರ ಸಂಘಟನೆಗಳು ಮತ್ತು ಪ್ರಯಾಣಿಕರು ಸೇರಿದಂತೆ ಪ್ರಯಾಣಿಕರು ಬಿಎಂಆರ್​ಸಿಎಲ್ ವಿರುದ್ಧ ಪ್ರತಿಭಟನೆ ನಡೆಸಿದ್ದರು.

ಸಾರ್ವಜನಿಕರ ಆಕ್ರೋಶ

ಇನ್ನು ಮೆಟ್ರೋ ದರ ಯಥೇಚ್ಚಾಗಿ ಏರಿಕೆಯಾಗಿದ್ದಕ್ಕೆ ಪ್ರಯಾಣಿಕರು ಆಕ್ರೋಶಗೊಂಡು, ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಶುರು ಮಾಡಿದ್ದರು. ಇದರಿಂದ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ, ಯಾವ ಯಾವ ಸ್ಟೇಜ್​ಗಳಲ್ಲಿ ದುಪ್ಪಟ್ಟು ದರ ಏರಿಕೆ ಮಾಡಲಾಗಿದೆ ಎಂದು ಪರಿಶೀಲಿಸಿ ಕೂಡಲೇ ಕಡಿತಗೊಳಿಸುವಂತೆ ಬಿಎಂಆರ್​ಸಿಎಲ್​ಗೆ ಸೂಚನೆ ನೀಡಿದ್ದರು.

ಇದನ್ನೂ ಓದಿ: ಜನಾಕ್ರೋಶ ಹಿನ್ನೆಲೆ ಪ್ರಯಾಣ ದರ ಸರಿಪಡಿಸಿದ ಮೆಟ್ರೋ: ಎಲ್ಲಿಂದ ಎಲ್ಲಿಗೆ ಎಷ್ಟು ಕಡಿಮೆಯಾಯ್ತು? ಇಲ್ಲಿದೆ ವಿವರ

ಪ್ರಯಾಣಿಕರ ಸಂಖ್ಯೆ ಇಳಿಕೆ

ಟಿಕೆಟ್ ದರ ಏರಿಕೆಯಿಂದಾಗಿ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಪ್ರತಿದಿನ ಮೆಟ್ರೋದಲ್ಲಿ 8 ರಿಂದ 9 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಆದ್ರೆ ದರ ಏರಿಕೆ ಆದ ಮೇಲೆ ಪ್ರತಿದಿನ 6 ರಿಂದ 7 ಲಕ್ಷ ಪ್ರಯಾಣಿಕರು ಮಾತ್ರ ಸಂಚಾರ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ