AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ: ಸಿಎಂ ಸಿದ್ದರಾಮಯ್ಯ ವಿರುದ್ಧ ತೇಜಸ್ವಿ ಸೂರ್ಯ ವಾಗ್ದಾಳಿ

ನಮ್ಮ ಮೆಟ್ರೋದ ಪ್ರಯಾಣ ದರ ಏರಿಕೆಯಿಂದಾಗಿ ಜನರಲ್ಲಿ ಆಕ್ರೋಶ ಹೆಚ್ಚಾಗಿದೆ. ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರಕ್ಕೆ ಈ ಅಧಿಕಾರವಿಲ್ಲ ಎಂದಿದ್ದಾರೆ. ಆದರೆ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ದರ ಏರಿಕೆ ಪ್ರಕ್ರಿಯೆಯನ್ನು ಸರ್ಕಾರವೇ ಆರಂಭಿಸಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಈ ದರ ಏರಿಕೆಯನ್ನು ವಿರೋಧಿಸುತ್ತಿದೆ ಮತ್ತು ಮರುಪರಿಶೀಲನೆಗೆ ಒತ್ತಾಯಿಸುತ್ತಿದೆ ಎಂದು ಹೇಳಿದ್ದಾರೆ.

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ: ಸಿಎಂ ಸಿದ್ದರಾಮಯ್ಯ ವಿರುದ್ಧ ತೇಜಸ್ವಿ ಸೂರ್ಯ ವಾಗ್ದಾಳಿ
ತೇಜಸ್ವಿ ಸೂರ್ಯ
Follow us
ವಿವೇಕ ಬಿರಾದಾರ
|

Updated on:Feb 12, 2025 | 10:06 AM

ಬೆಂಗಳೂರು, ಫೆಬ್ರವರಿ 12: ನಮ್ಮ ಮೆಟ್ರೋ (Namma Metro) ಪ್ರಯಾಣ ದರ ಏರಿಕೆ ವಿಚಾರ ದೇಶಾದ್ಯಂತ ಚರ್ಚೆಯಾಗುತ್ತಿದೆ. ದರ ಏರಿಕೆಯಿಂದ ರೋಸಿ ಹೋಗಿರುವ ಮೆಟ್ರೋ ಪ್ರಯಾಣಿಕರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರ ಹಾಕತ್ತಿದ್ದಾರೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನಮ್ಮ ಮೆಟ್ರೋ ದರ ಏರಿಕೆಯ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಸ್ಪಷ್ಟನೆ ನೀಡಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯರ ಈ ಹೇಳಿಕೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya) ತಿರುಗೇಟು ನೀಡಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪೋಸ್ಟ್​ಗೆ ಪ್ರತಿಕ್ರಿಯೆ ನೀಡಿರುವ ತೇಜಸ್ವಿ ಸೂರ್ಯ ನಮ್ಮ ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಪ್ರಕ್ರಿಯೆಯನ್ನು ಆರಂಭಿಸಿದ್ದೇ ರಾಜ್ಯ ಸರ್ಕಾರ ಎಂದು ಆರೋಪಿಸಿದ್ದಾರೆ.

2023 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಪ್ರತಿಯೊಂದು ಇಲಾಖೆಗಳಲ್ಲಿಯೂ ಬೆಲೆ ಏರಿಕೆ ಸಾಮಾನ್ಯವಾಗಿದೆ. ಬಿಎಂಟಿಸಿ ಪ್ರಯಾಣ ದರ, ವಿದ್ಯುತ್‌ ಬಿಲ್‌, ಆಸ್ತಿ ತೆರಿಗೆ, ಅಬಕಾರಿ ಸುಂಕ ಹೀಗೆ ಪ್ರತಿಯೊಂದರ ಬೆಲೆ ಏರಿಕೆಯಾಗಿದೆ ಎಂದರು.

ಪ್ರಸ್ತುತ ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಕುರಿತು ದರ ನಿಗದಿ ಸಮಿತಿ ರಚಿಸಲು ಮತ್ತು ಇದರ ಸಂಪೂರ್ಣ ಪ್ರಕ್ರಿಯೆಯನ್ನು ಪ್ರಾರಂಭಿಸಲು BMRCL ಗೆ ರಾಜ್ಯ ಸರ್ಕಾರ ಸಲಹೆ ನೀಡಿದ್ದು, ಸಮಿತಿಯಲ್ಲಿನ ರಾಜ್ಯ ಪ್ರತಿನಿಧಿಗಳ ಪ್ರಯಾಣದ ದರ ಏರಿಕೆಯ ಒತ್ತಾಯದ ಮೇರೆಗೆ ಪರಿಷ್ಕೃತ ದರದ ವರದಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ನಮ್ಮ ಮೆಟ್ರೋ ದರ ಏರಿಕೆ ಮಾಡಿದ್ಯಾರು? ಎಳೆ ಎಳೆಯಾಗಿ ಬಿಚ್ಚಿಟ್ಟ ಸಿದ್ದರಾಮಯ್ಯ

ಪ್ರಯಾಣದ ದರ ಏರಿಕೆಯಿಂದ ಬೆಂಗಳೂರಿನ ಜನತೆಗೆ ಉಂಟಾಗುವ ತೊಂದರೆಗಳ ಅರಿತು ಬಿಜೆಪಿ ದರ ಏರಿಕೆಯನ್ನು ಮೊದಲಿನಿಂದಲೂ ವಿರೋಧಿಸುತ್ತಲೇ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಈ ಸಮಸ್ಯೆ ಬಗ್ಗೆ ನಿಮಗೆ ನಿಜಾವದ ಕಾಳಜಿ ಇದ್ದರೆ ಪರಿಷ್ಕೃತ ದರಗಳ ಏರಿಕೆಯನ್ನು ಮರು ಪರಿಶೀಲಿಸಿ ನ್ಯಾಯಸಮ್ಮತ ದರ ನಿಗದಿಪಡಿಸಬೇಕು. ದರ ಕಡಿಮೆ ಮಾಡಲು ನಿಮ್ಮನ್ನು ಯಾವ ಕಾನೂನು ಅಡ್ಡಿಪಡಿಸುವುದಲ್ಲ ಎಂದರು.

ಮುಖ್ಯಮಂತ್ರಿಗಳಿಗೆ ಈ ಸಮಸ್ಯೆ ಬಗ್ಗೆ ನಿಜವಾದ ಕಾಳಜಿ ಇದ್ದರೆ, ಪರಿಷ್ಕೃತ ದರಗಳ ಏರಿಕೆಯನ್ನು ಮರು ಪರಿಶೀಲಿಸಿ ನ್ಯಾಯಸಮ್ಮತ ದರ ನಿಗದಿಪಡಿಸಲು ನೆರವಾಗಬೇಕು. ಬೆಂಗಳೂರಿನ ಸಂಸದರು ಹಾಗೂ ದರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತೊಡಗಿರುವ ಕೇಂದ್ರ ಸರ್ಕಾರದ ಅಧಿಕಾರಿಗಳು ಬೆಂಗಳೂರಿನ ಜನರ ಸಮಸ್ಯೆಗಳನ್ನು ಪರಿಹರಿಸುವ ಕಾರ್ಯದಲ್ಲಿ ತಮಗೆ ಸಲಹೆ ಮತ್ತು ಸಹಕಾರ ನೀಡಲು ಸಿದ್ದರಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:03 am, Wed, 12 February 25

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ