Bamul: ಹಾಲಿನ ಪ್ರೋತ್ಸಾಹ ಧನ 1.50 ರೂ. ಕಡಿತ

ಹಾಲಿನ ಪ್ರೋತ್ಸಾಹ ಧನ ಲೀಟರ್​ಗೆ 1.50 ರೂ. ದಷ್ಟು ಕಡಿತಗೊಳಿಸಿ ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ಆದೇಶ ಹೊರಡಿಸಿದೆ.

Bamul: ಹಾಲಿನ ಪ್ರೋತ್ಸಾಹ ಧನ 1.50 ರೂ. ಕಡಿತ
ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ

Updated on: Jun 02, 2023 | 10:16 AM

ಬೆಂಗಳೂರು: ಹಾಲಿನ ಪ್ರೋತ್ಸಾಹ ಧನ ಲೀಟರ್​ಗೆ 1.50 ರೂ. ದಷ್ಟು ಕಡಿತಗೊಳಿಸಿ ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ (BAMUL) ಆದೇಶ ಹೊರಡಿಸಿದೆ. ಜಿಲ್ಲಾ ಹಾಲು ಒಕ್ಕೂಟ ಬೇಸಿಗೆ ಸಮಯದಲ್ಲಿ ಪ್ರತಿ ಲೀಟರ್ ಹಾಲಿಗೆ 2.85 ರೂ. ವಿಶೇಷ ಪ್ರೋತ್ಸಾಹ ಧನ ಘೋಷಿಸಿತ್ತು. ಅದರಂತೆ ಒಕ್ಕೂಟ ಏ. 1ರಿಂದ ಮೇ. 31 ರವರೆಗೆ ವಿಶೇಷ ಪ್ರೋತ್ಸಾಹ ಧನ ನೀಡಿತ್ತು. ಆದರೆ ಈಗ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿ ಹಸಿರು ಮೇವಿನ ಲಭ್ಯತೆ ಹೇರಳವಾಗಿದೆ. ಮೇಲಾಗಿ ಹಸಿರು ಮೇವಿನ ಸಮಸ್ಯೆ ಬಗೆಹರಿದಿರುವುದರಿಂದಾಗಿ ಹಾಲಿನ ಉತ್ಪಾದನೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರೋತ್ಸಾಹಧನವನ್ನು ಕಡಿತಗೊಳಿಸಲಾಗಿದೆ.

ಇದನ್ನೂ ಓದಿ: ಮಹಿಳೆಯರಿಗೆ ಸರ್ಕಾರಿ ಬಸ್​ನಲ್ಲಿ ಉಚಿತ ಪ್ರಯಾಣ: ಖಾಸಗಿ ಬಸ್​ನವರಿಗೆ ಶುರುವಾಯ್ತು ಹೊಸ ಟೆನ್ಶನ್

ಎರಡು ತಿಂಗಳ ಹಿಂದೆ ಏಪ್ರಿಲ್ ತಿಂಗಳ ಆರಂಭದಲ್ಲಿ ಪ್ರತಿದಿನ 13.50 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗಿತ್ತು. ನಂತರ ದಿನಗಳಲ್ಲಿ ಮಳೆಯಾಗಿ ಹಸಿರು ಮೇವಿನ ಲಭ್ಯತೆ ಹೇರಳವಾಗಿದೆ. ಮೇಲಾಗಿ ಹಸಿರು ಮೇವಿನ ಸಮಸ್ಯೆ ಬಗೆಹರಿದಿರುವುದರಿಂದ ಹಾಲು ಉತ್ಪಾದನೆ ಹೆಚ್ಚಾಗುತ್ತಿದೆ.

ಇದರಿಂದ ಅದು 16 ಲಕ್ಷ ಲೀಟರ್​ಗೆ ತಲುಪುವ ಮೂಲಕ ದಿನದಲ್ಲಿ ಸುಮಾರು 2.50 ಲಕ್ಷ ಲೀಟರ್ ಹಾಲು ಉತ್ಪಾದನೆ ಹೆಚ್ಚಳವಾಗಿದೆ. ಹೀಗಾಗಿ ಜಿಲ್ಲಾ ಹಾಲು ಒಕ್ಕೂಟ ಲೀಟರ್​​ಗೆ 1.50 ರೂ. ಪ್ರೋತ್ಸಾಹ ಧನವನ್ನು ಕಡಿತಗೊಳಿಸಿ ಆದೇಶ ಹೊರಡಿಸಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:14 am, Fri, 2 June 23