Metro Yellow Line: ನಮ್ಮ ಮೆಟ್ರೋ ಯೆಲ್ಲೋ ಲೈನ್​ನಲ್ಲಿ ಸಂಚಾರ ವ್ಯತ್ಯಯ

Namma Metro Yellow Line: ಕೆಲವು ದಿನಗಳ ಹಿಂದಷ್ಟೇ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಬೆಳಗ್ಗೆ ಸಂಚಾರ ವ್ಯತ್ಯಯ ಉಂಟಾಗಿ ಪ್ರಯಾಣಿಕರು ಪರದಾಟ ಪಡುವಂತಾಗಿತ್ತು. ಇದೀಗ ಹಳದಿ ಮಾರ್ಗದ ಸರದಿ. ಯೆಲ್ಲೋ ಲೈನ್ ಮೆಟ್ರೋದಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ತೊಂದರೆಯಾಗಿದ್ದು, ಈ ಕಾರಣ ಸಂಚಾರದಲ್ಲಿ ವ್ಯತ್ಯಾಸವಾಗಿದೆ.

Metro Yellow Line: ನಮ್ಮ ಮೆಟ್ರೋ ಯೆಲ್ಲೋ ಲೈನ್​ನಲ್ಲಿ ಸಂಚಾರ ವ್ಯತ್ಯಯ
ಸಾಂದರ್ಭಿಕ ಚಿತ್ರ

Updated on: Nov 12, 2025 | 10:12 AM

ಬೆಂಗಳೂರು, ನವೆಂಬರ್ 12: ನಮ್ಮ ಮೆಟ್ರೋ ಹಳದಿ ಮಾರ್ಗದ (Namma Metro Yellow Line) ಒಂದು ರೈಲಿನಲ್ಲಿ ತಾಂತ್ರಿಕ ತೊಂದರೆ ಉಂಟಾಗಿದ್ದು, ಪರಿಣಾಮವಾಗಿ ಈ ಮಾರ್ಗದಲ್ಲಿ ಸಂಚಾರ ವಿಳಂಬವಾಗುವ ಸಾಧ್ಯತೆ ಇದೆ ಎಂದು ಬಿಎಂಆರ್‌ಸಿಎಲ್ (BMRCL) ತಿಳಿಸಿದೆ. ಬುಧವಾರ ಬೆಳಗ್ಗೆ ಜನರು ಕಚೇರಿ, ಕೆಲಸ ಕಾರ್ಯಗಳಿಗೆ ತೆರಳುವ ಸಮಯದಲ್ಲೇ ಈ ಅನಾನುಕೂಲತೆ ಉಂಟಾಗಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ವಿಷಾದಿಸುತ್ತೇವೆ ಎಂದು ಬಿಎಂಆರ್​ಸಿಎಲ್ ತಿಳಿಸಿದೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಬಿಎಂಆರ್ ಮಾಹಿತಿ ನೀಡಿದೆ.

‘ಹಳದಿ ಮಾರ್ಗದ ಒಂದು ರೈಲಿನಲ್ಲಿ ತಾಂತ್ರಿಕ ತೊಂದರೆ ಉಂಟಾದ ಕಾರಣ, ರೈಲು ಸಂಚಾರದಲ್ಲಿ ವಿಳಂಬ ಉಂಟಾಗುವ ಸಾಧ್ಯತೆ ಇದೆ. ನಮ್ಮ ಮೆಟ್ರೋ ಪ್ರಯಾಣಿಕರ ಮಾಹಿತಿಗಾಗಿ ತಿಳಿಸಲಾಗಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ವಿಷಾದಿಸುತ್ತೇವೆ’ ಎಂದು ನಮ್ಮ ಮೆಟ್ರೋ ಅಧಿಕೃತ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್ ಮಾಡಲಾಗಿದೆ.

ನಮ್ಮ ಮೆಟ್ರೋ ಎಕ್ಸ್ ಸಂದೇಶ

ನಮ್ಮ ಮೆಟ್ರೋ ಯೆಲ್ಲೋ ಲೈನ್​ನಲ್ಲಿ ಇತ್ತೀಚೆಗಷ್ಟೇ ಐದನೇ ರೈಲು ಸಂಚಾರ ಶುರುವಾಗಿತ್ತು. ಇದರಿಂದಾಗಿ ಪ್ರತಿ 15 ನಿಮಿಷಕ್ಕೆ ಒಂದು ರೈಲು ಸಂಚಾರ ಮಾಡುವಂತೆ ಆಗಿದ್ದು, ಪ್ರಯಾಣಿಕರಿಗೂ ಅನುಕೂಲವಾಗಿತ್ತು.

ಮೆಟ್ರೋ ನೇರಳೆ ಮಾರ್ಗದಲ್ಲೂ ಉಂಟಾಗಿತ್ತು ಸಂಚಾರ ವ್ಯತ್ಯಯ

ಚಲ್ಲಘಟ್ಟದಿಂದ ವೈಟ್ ಫೀಲ್ಡ್ ವರೆಗಿನ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಇತ್ತೀಚೆಗೆ ಇದೇ ರೀತಿ ಬೆಳಗ್ಗೆ ಸಂಚಾರ ವ್ಯತ್ಯಯವಾಗಿತ್ತು. ಪ್ರಯಾಣಿಕರು ಸುಮಾರು ಹೊತ್ತು ಕಾಯುವಂತಾಗಿತ್ತು.

ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್: ಸಿದ್ದರಾಮಯ್ಯ, ಖರ್ಗೆ ಇದನ್ನು ಒಪ್ಪುತ್ತಾರೆಯೇ? ಬಿಜೆಪಿ ಪ್ರಶ್ನೆ 

ತಾಂತ್ರಿಕ ಸಮಸ್ಯೆಯಿಂದಾಗಿ ವಿಜಯನಗರ -ಹೊಸಹಳ್ಳಿ ನಿಲ್ದಾಣಗಳ ನಡುವೆ ರೈಲೊಂದು ಕೆಟ್ಟು ನಿಂತಿದ್ದರ ಪರಿಣಾಮ ಸಮಸ್ಯೆ ಆಗಿತ್ತು. ಕೆಟ್ಟುನಿಂತ ರೈಲನ್ನು ಚಲ್ಲಘಟ್ಟ ನಿಲ್ದಾಣಕ್ಕೆ ಸ್ಥಳಾಂತರ ಮಾಡಿದ ನಂತರ ಪ್ರಯಾಣ ಮಾಮೂಲಿಯಂತೆ ಆರಂಭವಾಗಿತ್ತು. ಆದರೆ, ಪೀಕ್ ಅವರ್ ಆದ್ದರಿಂದ ಜನ ಮೆಟ್ರೋ ಸ್ಟೇಷನ್​ಗಳಲ್ಲಿ ಕಿಕ್ಕಿರಿದು ತುಂಬಿದ್ದರಿಂದ ಸಮಸ್ಯೆ ಆಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:59 am, Wed, 12 November 25