AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷಾಚರಣೆ: ಲಾಡ್ಜ್, ರೆಸ್ಟೋರೆಂಟ್ ಮೇಲೆ ಪೊಲೀಸ್​ ಕಣ್ಣು, ಹಲವರ ವಿಚಾರಣೆ

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಮುನ್ನ ಪೊಲೀಸರು ದೊಡ್ಡ ಪ್ರಮಾಣದಲ್ಲಿ ದಾಳಿ ನಡೆಸಿದ್ದಾರೆ.380ಕ್ಕೂ ಹೆಚ್ಚು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ ಮತ್ತು 1630 ಬಾರ್ ಮತ್ತು ರೆಸ್ಟೋರೆಂಟ್‌ಗಳನ್ನು ಪರಿಶೀಲಿಸಲಾಗಿದೆ. ವೀಸಾ ಅವಧಿ ಮುಗಿದರೂ ಇಲ್ಲಿಯೇ ವಾಸವಾಗಿರುವ ವಿದೇಶಿಯರ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತಿದೆ.

ಹೊಸ ವರ್ಷಾಚರಣೆ: ಲಾಡ್ಜ್, ರೆಸ್ಟೋರೆಂಟ್ ಮೇಲೆ ಪೊಲೀಸ್​ ಕಣ್ಣು, ಹಲವರ ವಿಚಾರಣೆ
ಬಿ ದಯಾನಂದ್
Jagadisha B
| Edited By: |

Updated on:Dec 03, 2024 | 4:38 PM

Share

ಬೆಂಗಳೂರು, ಡಿಸೆಂಬರ್​ 03: ಹೊಸ ವರ್ಷವನ್ನು (New Year) ಸ್ವಾಗತಿಸಲು ಜನರು ಸಜ್ಜಾಗುತ್ತಿದ್ದಾರೆ. ಬೆಂಗಳೂರಿನ (Bengaluru) ಬ್ರಿಗೇಡ್​ ರೋಡ್​, ಎಂಜಿ ರೋಡ್​ಗಳಲ್ಲಿನ ಪಬ್​ಗಳಲ್ಲಿ ಪಾರ್ಟಿ ಜೋರಾಗಿರುತ್ತದೆ. ಈ ವಿಚಾರವಾಗಿ ನಗರ ಪೊಲೀಸ್​ ಆಯುಕ್ತ ಬಿ ದಯಾನಂದ್​ ಮಾತನಾಡಿ, ಲಾಡ್ಜ್, ರೆಸ್ಟೋರೆಂಟ್​ಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಮಾದಕ ವಸ್ತುಗಳ ಮಾರಾಟದ ಬಗ್ಗೆ ಕಣ್ಣು ಇಡಲಾಗಿದೆ. ಡ್ರಗ್​ ಕೇಸ್​ನಲ್ಲಿ 380 ಆರೋಪಿಗಳನ್ನು ಕರೆಸಿ ವಿಚಾರಣೆ ನಡೆಸಲಾಗಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆರೋಪಿಗಳ ಮನೆಯಲ್ಲಿ ತಪಾಸಣೆ ಮಾಡಲಾಗಿದೆ. 1630 ಬಾರ್ ಆ್ಯಂಡ್​ ರೆಸ್ಟೊರೆಂಟ್​ಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ರೌಡಿಗಳನ್ನು ಕರೆಸಿ ವಿಚಾರಣೆ ಮಾಡಲಾಗಿದೆ. ಎಂಒಬಿ (ಅಪರಾಧ ಹಿನ್ನಲೆಯುಳ್ಳವರು) ಅನ್ನೂ ವಿಚಾರಣೆ ಮಾಡಲಾಗಿದೆ ಎಂದು ತಿಳಸಿದ್ದಾರೆ. ವಿಸಾ ಅವಧಿ ಮುಗಿದರೂ ಕೆಲವು ವಿದೇಶಿಗರು ಇಲ್ಲೇ ವಾಸವಾಗಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. 29 ಮಂದಿ ವಿದೇಶಿಗರನ್ನು ಎಫ್​ಆರ್​ಆರ್​ಒ (ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ) ಮುಂದೆ ಹಾಜರು ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

6 ಕೋಟಿ ರೂ.ಮೌಲ್ಯದ ಮಾದಕ ವಸ್ತು ಜಪ್ತಿ

ಬೆಂಗಳೂರು ಪೊಲೀಸರು ಮತ್ತು ಸಿಸಿಬಿ ಅಧಿಕಾರಿಗಳು ಮಾದಕ ವಸ್ತು ಸಾಗಟ ಜಾಲ ಪತ್ತೆ ಹಚ್ಚಿದ್ದರು. ಪ್ರತ್ಯೇಕ ಪ್ರಕರಣದಲ್ಲಿ ಪೊಲೀಸರು ಮತ್ತು ಸಿಸಿಬಿ ಅಧಿಕಾರಿಗಳು ಒಟ್ಟು 6 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಿದ್ದರು. ​

ಇದನ್ನೂ ಓದಿ: ಅಂಚೆ ಇಲಾಖೆ ಮೂಲಕ ಬೆಂಗಳೂರಿಗೆ ಬರ್ತಾಯಿದೆ ವಿದೇಶಿ ಡ್ರಗ್ಸ್​: 21 ಕೋಟಿ ರೂ ಮೌಲ್ಯದ ಡ್ರಗ್ಸ್ ವಶಕ್ಕೆ 

ಹೊಸ ವರ್ಷಾಚರಣೆಗೆ ಕ್ವಿಂಟಾಲ್​​ಗಟ್ಟಲೆ ಗಾಂಜಾ ಸಪ್ಲೆ ಮಾಡುತ್ತಿದ್ದ ಆರೋಪಿಗಳನ್ನು ಬೆಂಗಳೂರಿನ ಗೋವಿಂದಪುರ ಠಾಣೆ ಪೊಲೀಸರು ಬಂಧಿಸಿದ್ದರು. ಪೊಲೀಸರು ಆರೋಪಿಗಳಿಂದ 3.25 ಕೋಟಿ ರೂ. ಮೌಲ್ಯದ 318 ಕೆಜಿ ಗಾಂಜಾ ಜಪ್ತಿ ಮಾಡಿದ್ದರು.

3 ಕೋಟಿ ಮೌಲ್ಯದ ಸಿಂಥೆಟಿಕ್​ ಡ್ರಗ್ಸ್ ಜಪ್ತಿ

ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಇಬ್ಬರು ವಿದೇಶಿ ಡ್ರಗ್​ ಪೆಡ್ಲರ್​ಗಳನ್ನು ಬಂಧಿಸಿದ್ದರು. ಬಂಧಿತರ ಬಳಿಯಿದ್ದ 3 ಕೋಟಿ ಮೌಲ್ಯದ ಸಿಂಥೆಟಿಕ್​ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ಹೊಸ ವರ್ಷಾಚರಣೆಗೆಂದು ಆರೋಪಿಗಳು ಸೋಲದೇವನಹಳ್ಳಿ ಬಳಿ ಡ್ರಗ್ಸ್ ಸಂಗ್ರಹಿಸಿದ್ದರು.

ಈ ವಿಚಾರ ತಿಳಿದ ಸಿಸಿಬಿ ಅಧಿಕಾರಿಗಳು ಡ್ರಗ್ಸ್​ ಸಂಗ್ರಹಿಸಿಟ್ಟಿದ್ದ ಮನೆ ಮೇಲೆ ದಾಳಿ ಮಾಡಿದರು. ದಾಳಿ ವೇಳೆ, 1 ಕೆಜಿ 520 ಗ್ರಾಂ ಎಂಡಿಎಂಎ ಕ್ರಿಸ್ಟಲ್, 202 ಗ್ರಾಂ ಕೊಕೇನ್, 12 ಗ್ರಾಂ ಎಂಡಿಎಂಎ ಎಕ್ಸೆಟೆಸಿ ಪಿಲ್ಸ್ ಪತ್ತೆಯಾಗಿವೆ. ಕೂಡಲೆ ಸಿಸಿಬಿ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿ, ಮಾದಕ ವಸ್ತು ಜಪ್ತಿ ಮಾಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:13 pm, Tue, 3 December 24

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ