ಹೊಸ ವರ್ಷಾಚರಣೆ: ಲಾಡ್ಜ್, ರೆಸ್ಟೋರೆಂಟ್ ಮೇಲೆ ಪೊಲೀಸ್​ ಕಣ್ಣು, ಹಲವರ ವಿಚಾರಣೆ

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಮುನ್ನ ಪೊಲೀಸರು ದೊಡ್ಡ ಪ್ರಮಾಣದಲ್ಲಿ ದಾಳಿ ನಡೆಸಿದ್ದಾರೆ.380ಕ್ಕೂ ಹೆಚ್ಚು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ ಮತ್ತು 1630 ಬಾರ್ ಮತ್ತು ರೆಸ್ಟೋರೆಂಟ್‌ಗಳನ್ನು ಪರಿಶೀಲಿಸಲಾಗಿದೆ. ವೀಸಾ ಅವಧಿ ಮುಗಿದರೂ ಇಲ್ಲಿಯೇ ವಾಸವಾಗಿರುವ ವಿದೇಶಿಯರ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತಿದೆ.

ಹೊಸ ವರ್ಷಾಚರಣೆ: ಲಾಡ್ಜ್, ರೆಸ್ಟೋರೆಂಟ್ ಮೇಲೆ ಪೊಲೀಸ್​ ಕಣ್ಣು, ಹಲವರ ವಿಚಾರಣೆ
ಬಿ ದಯಾನಂದ್
Edited By: ವಿವೇಕ ಬಿರಾದಾರ

Updated on: Dec 03, 2024 | 4:38 PM

ಬೆಂಗಳೂರು, ಡಿಸೆಂಬರ್​ 03: ಹೊಸ ವರ್ಷವನ್ನು (New Year) ಸ್ವಾಗತಿಸಲು ಜನರು ಸಜ್ಜಾಗುತ್ತಿದ್ದಾರೆ. ಬೆಂಗಳೂರಿನ (Bengaluru) ಬ್ರಿಗೇಡ್​ ರೋಡ್​, ಎಂಜಿ ರೋಡ್​ಗಳಲ್ಲಿನ ಪಬ್​ಗಳಲ್ಲಿ ಪಾರ್ಟಿ ಜೋರಾಗಿರುತ್ತದೆ. ಈ ವಿಚಾರವಾಗಿ ನಗರ ಪೊಲೀಸ್​ ಆಯುಕ್ತ ಬಿ ದಯಾನಂದ್​ ಮಾತನಾಡಿ, ಲಾಡ್ಜ್, ರೆಸ್ಟೋರೆಂಟ್​ಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಮಾದಕ ವಸ್ತುಗಳ ಮಾರಾಟದ ಬಗ್ಗೆ ಕಣ್ಣು ಇಡಲಾಗಿದೆ. ಡ್ರಗ್​ ಕೇಸ್​ನಲ್ಲಿ 380 ಆರೋಪಿಗಳನ್ನು ಕರೆಸಿ ವಿಚಾರಣೆ ನಡೆಸಲಾಗಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆರೋಪಿಗಳ ಮನೆಯಲ್ಲಿ ತಪಾಸಣೆ ಮಾಡಲಾಗಿದೆ. 1630 ಬಾರ್ ಆ್ಯಂಡ್​ ರೆಸ್ಟೊರೆಂಟ್​ಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ರೌಡಿಗಳನ್ನು ಕರೆಸಿ ವಿಚಾರಣೆ ಮಾಡಲಾಗಿದೆ. ಎಂಒಬಿ (ಅಪರಾಧ ಹಿನ್ನಲೆಯುಳ್ಳವರು) ಅನ್ನೂ ವಿಚಾರಣೆ ಮಾಡಲಾಗಿದೆ ಎಂದು ತಿಳಸಿದ್ದಾರೆ.
ವಿಸಾ ಅವಧಿ ಮುಗಿದರೂ ಕೆಲವು ವಿದೇಶಿಗರು ಇಲ್ಲೇ ವಾಸವಾಗಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. 29 ಮಂದಿ ವಿದೇಶಿಗರನ್ನು ಎಫ್​ಆರ್​ಆರ್​ಒ (ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ) ಮುಂದೆ ಹಾಜರು ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

6 ಕೋಟಿ ರೂ.ಮೌಲ್ಯದ ಮಾದಕ ವಸ್ತು ಜಪ್ತಿ

ಬೆಂಗಳೂರು ಪೊಲೀಸರು ಮತ್ತು ಸಿಸಿಬಿ ಅಧಿಕಾರಿಗಳು ಮಾದಕ ವಸ್ತು ಸಾಗಟ ಜಾಲ ಪತ್ತೆ ಹಚ್ಚಿದ್ದರು. ಪ್ರತ್ಯೇಕ ಪ್ರಕರಣದಲ್ಲಿ ಪೊಲೀಸರು ಮತ್ತು ಸಿಸಿಬಿ ಅಧಿಕಾರಿಗಳು ಒಟ್ಟು 6 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಿದ್ದರು. ​

ಇದನ್ನೂ ಓದಿ: ಅಂಚೆ ಇಲಾಖೆ ಮೂಲಕ ಬೆಂಗಳೂರಿಗೆ ಬರ್ತಾಯಿದೆ ವಿದೇಶಿ ಡ್ರಗ್ಸ್​: 21 ಕೋಟಿ ರೂ ಮೌಲ್ಯದ ಡ್ರಗ್ಸ್ ವಶಕ್ಕೆ 

ಹೊಸ ವರ್ಷಾಚರಣೆಗೆ ಕ್ವಿಂಟಾಲ್​​ಗಟ್ಟಲೆ ಗಾಂಜಾ ಸಪ್ಲೆ ಮಾಡುತ್ತಿದ್ದ ಆರೋಪಿಗಳನ್ನು ಬೆಂಗಳೂರಿನ ಗೋವಿಂದಪುರ ಠಾಣೆ ಪೊಲೀಸರು ಬಂಧಿಸಿದ್ದರು. ಪೊಲೀಸರು ಆರೋಪಿಗಳಿಂದ 3.25 ಕೋಟಿ ರೂ. ಮೌಲ್ಯದ 318 ಕೆಜಿ ಗಾಂಜಾ ಜಪ್ತಿ ಮಾಡಿದ್ದರು.

3 ಕೋಟಿ ಮೌಲ್ಯದ ಸಿಂಥೆಟಿಕ್​ ಡ್ರಗ್ಸ್ ಜಪ್ತಿ

ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಇಬ್ಬರು ವಿದೇಶಿ ಡ್ರಗ್​ ಪೆಡ್ಲರ್​ಗಳನ್ನು ಬಂಧಿಸಿದ್ದರು. ಬಂಧಿತರ ಬಳಿಯಿದ್ದ 3 ಕೋಟಿ ಮೌಲ್ಯದ ಸಿಂಥೆಟಿಕ್​ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ಹೊಸ ವರ್ಷಾಚರಣೆಗೆಂದು ಆರೋಪಿಗಳು ಸೋಲದೇವನಹಳ್ಳಿ ಬಳಿ ಡ್ರಗ್ಸ್ ಸಂಗ್ರಹಿಸಿದ್ದರು.

ಈ ವಿಚಾರ ತಿಳಿದ ಸಿಸಿಬಿ ಅಧಿಕಾರಿಗಳು ಡ್ರಗ್ಸ್​ ಸಂಗ್ರಹಿಸಿಟ್ಟಿದ್ದ ಮನೆ ಮೇಲೆ ದಾಳಿ ಮಾಡಿದರು. ದಾಳಿ ವೇಳೆ, 1 ಕೆಜಿ 520 ಗ್ರಾಂ ಎಂಡಿಎಂಎ ಕ್ರಿಸ್ಟಲ್, 202 ಗ್ರಾಂ ಕೊಕೇನ್, 12 ಗ್ರಾಂ ಎಂಡಿಎಂಎ ಎಕ್ಸೆಟೆಸಿ ಪಿಲ್ಸ್ ಪತ್ತೆಯಾಗಿವೆ. ಕೂಡಲೆ ಸಿಸಿಬಿ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿ, ಮಾದಕ ವಸ್ತು ಜಪ್ತಿ ಮಾಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:13 pm, Tue, 3 December 24

ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More
Loading...
Unable to load recommendations.
Follow Us