ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2ರಿಂದ ಅಂತಾರಾಷ್ಟ್ರೀಯ ವಿಮಾನ ಹಾರಾಟಕ್ಕೆ ದಿನಗಣನೆ

| Updated By: Ganapathi Sharma

Updated on: Aug 21, 2023 | 5:38 PM

Bengaluru Airport T2; 2023 ರ ಆಗಸ್ಟ್ 31, ರಂದು ಬೆಳಿಗ್ಗೆ 10:45 ರಿಂದ ಎಲ್ಲಾ ನಿಗದಿತ ಅಂತರರಾಷ್ಟ್ರೀಯ ವಿಮಾನಗಳು ಟರ್ಮಿನಲ್ 2 ಗೆ ಆಗಮಿಸುತ್ತವೆ ಮತ್ತು ನಿರ್ಗಮಿಸುತ್ತವೆ ಎಂದು ತಿಳಿಸಲು ನಾವು ಸಂತೋಷಪಡುತ್ತೇವೆ ಎಂದು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್ ಅಥವಾ ಟ್ವಿಟರ್​​ನಲ್ಲಿ ಪೋಸ್ಟ್ ಮಾಡಿದೆ.

ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2ರಿಂದ ಅಂತಾರಾಷ್ಟ್ರೀಯ ವಿಮಾನ ಹಾರಾಟಕ್ಕೆ ದಿನಗಣನೆ
ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2
Follow us on

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಟರ್ಮಿನಲ್ 2 ಆಗಸ್ಟ್ 31 ರಿಂದ ಕಾರ್ಯಾಚರಣೆ ಆರಂಭಿಸಲಿದೆ. ಅಂದು ಬೆಳಿಗ್ಗೆ ಅಂತರರಾಷ್ಟ್ರೀಯ ವಿಮಾನಗಳ ಆಗಮನ, ನಿರ್ಗಮನ ಶುರುವಾಗಲಿದೆ ಎಂದು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (BIAL) ಸೋಮವಾರ ತಿಳಿಸಿದೆ. ಟರ್ಮಿನಲ್ 2 ರಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಬೆಳಗ್ಗೆ 10:45 ಕ್ಕೆ ಪ್ರಾರಂಭವಾಗಲಿದೆ. 2023 ರ ಆಗಸ್ಟ್ 31, ರಂದು ಬೆಳಿಗ್ಗೆ 10:45 ರಿಂದ ಎಲ್ಲಾ ನಿಗದಿತ ಅಂತರರಾಷ್ಟ್ರೀಯ ವಿಮಾನಗಳು ಟರ್ಮಿನಲ್ 2 ಗೆ ಆಗಮಿಸುತ್ತವೆ ಮತ್ತು ನಿರ್ಗಮಿಸುತ್ತವೆ ಎಂದು ತಿಳಿಸಲು ನಾವು ಸಂತೋಷಪಡುತ್ತೇವೆ ಎಂದು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್ ಅಥವಾ ಟ್ವಿಟರ್​​ನಲ್ಲಿ ಪೋಸ್ಟ್ ಮಾಡಿದೆ.

ಸಹಾಯಕ್ಕಾಗಿ ದಯವಿಟ್ಟು ನಮ್ಮ ಗ್ರಾಹಕ ಸಹಾಯವಾಣಿ ಕೇಂದ್ರವನ್ನು +91-8884998888 (WhatsApp ಮಾತ್ರ) ಮತ್ತು 080-22012001/080-66785555 ಸಂಖ್ಯೆಗಳ ಮೂಲಕ ಸಂಪರ್ಕಿಸಿ. ವಿಮಾನಗಳ ಕುರಿತ ಮಾಹಿತಿಗಾಗಿ ಬಿಎಲ್​ಆರ್ ಪಲ್ಸ್ ಅನ್ನು ಡೌನ್‌ಲೋಡ್ ಮಾಡಿ. ಈ ಮೂಲಕ ಸರತಿ ಸಾಲು, ಕಾಯುವಿಕೆ ಅವಧಿ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದು ಎಂದು ಟ್ವೀಟ್ ಉಲ್ಲೇಖಿಸಿದೆ.

ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2 ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು 2022 ರ ನವೆಂಬರ್​​ನಲ್ಲಿ ಉದ್ಘಾಟಿಸಿದರು. ಟರ್ಮಿನಲ್‌ನಲ್ಲಿ ದೇಶೀಯ ಕಾರ್ಯಾಚರಣೆಗಳು 2023 ರ ಜನವರಿ 15 ರಂದು ಪ್ರಾರಂಭವಾಗಿದೆ.

ಟರ್ಮಿನಲ್ 2ರ ಅಂತಾರಾಷ್ಟ್ರೀಯ ಕಾರ್ಯಾಚರಣೆ ಬಗ್ಗೆ ಬೆಂಗಳೂರು ವಿಮಾನ ನಿಲ್ದಾಣ ಆಡಳಿತದಿಂದ ಟ್ವೀಟ್


ಇದನ್ನೂ ಓದಿ: ಕೆಐಎಬಿ: ಕೆಂಪೇಗೌಡ ಏರ್​​ಪೋರ್ಟ್​​​ನಲ್ಲಿ 3 ದಿನಗಳ ಕಾಲ ಹೈಟೆಕ್ ತಂತ್ರಜ್ಞಾನದ ಪ್ರದರ್ಶನ, ಪ್ರಯಾಣಿಕರ ಸುರಕ್ಷತೆಗಾಗಿ ಅತ್ಯಾಧುನಿಕ ಸಲಕರಣೆಗಳ ಶೋ!

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರ 1ನೇ ಹಂತದ ಯೋಜನೆ 5,000 ಕೋಟಿ ರೂಪಾಯಿ ವೆಚ್ಚದಲ್ಲಿ ಸಾಕಾರಗೊಂಡಿದೆ. ಇದು 2,55,000 ಚದರ ಮೀಟರ್‌ ವ್ಯಾಪ್ತಿಯಲ್ಲಿದೆ. 2ನೇ ಹಂತದ ಕಾಮಗಾರಿ ಮುಗಿದ ನಂತರ, ಟರ್ಮಿನಲ್ 20 ಮಿಲಿಯನ್​​ಗಿಂತಲೂ ಹೆಚ್ಚು ವಿಮಾನ ಪ್ರಯಾಣಿಕರನ್ನು ನಿರ್ವಹಿಸಲಿದೆ ಎನ್ನಲಾಗಿದೆ.

ಟರ್ಮಿನಲ್ 2 ರ ಕಾಮಗಾರಿ 2018 ರಲ್ಲಿ ಪ್ರಾರಂಭವಾಗಿತ್ತು. ವಿವಿಧ ಜಾತಿಯ ಸಸ್ಯಗಳು ಮತ್ತು ಮರಗಳಿಂದ ಸುತ್ತುವರಿದಿರುವ ಈ ಟರ್ಮಿನಲ್ ಅನ್ನು ಟರ್ಮಿನಲ್ ಇನ್​ ದಿ ಗಾರ್ಡನ್ ಎಂದು ಕರೆಯಲಾಗುತ್ತಿದೆ. ಈ ಟರ್ಮಿನಲ್​​​ನಲ್ಲಿ 180 ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಜಾತಿಯ ಸಸ್ಯಗಳಿವೆ. 3,600 ಕ್ಕೂ ಹೆಚ್ಚು ಸಸ್ಯ ಪ್ರಭೇದಗಳು, ಬಿದಿರು, 620 ಸ್ಥಳೀಯ ಸಸ್ಯಗಳು, 7,700 ಕಸಿ ಮರಗಳು, 96 ಕಮಲ ಮತ್ತು ಇನ್ನೂ ಹೆಚ್ಚಿನ ಸಸ್ಯಗಳಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ