ಇಂದು ಬೆಳ್ಳಂ ಬೆಳಗ್ಗೆಯೇ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ಗೆ ಇಬ್ಬರು ಬಲಿ, ತಿಂಗಳಲ್ಲಿ ಇದು ಆರನೇ ಬಲಿ
ಇಂದು ಬೆಳಗ್ಗೆಯೇ ಹುಳಿಮಾವು ವ್ಯಾಪ್ತಿಯಲ್ಲಿ ಓರ್ವ ಮಹಿಳೆ ಹಾಗೂ ವಿಜಯನಗರದಲ್ಲಿ ಓರ್ವ ವ್ಯಕ್ತಿ ಬಿಎಂಟಿಸಿಗೆ ಬಲಿಯಾಗಿದ್ದಾರೆ. ಹುಳಿಮಾವು ಸಂಚಾರಿ ಠಾಣಾ ವ್ಯಾಪ್ತಿಯ ಅರಕೆರೆಯ ಸಾಯಿ ಗಾರ್ಮೆಂಟ್ಸ್ ಬಳಿ ರಸ್ತೆ ದಾಟುವಾಗ ಮಹಿಳೆಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ವೀಣಾ ಎಂಬ ಮಹಿಳೆ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.
ಬೆಂಗಳೂರು, ಅ.29: ಕಿಲ್ಲರ್ ಬಿಎಂಟಿಸಿ ಬಸ್ಗೆ (BMTC Bus) ಇಂದು ಎರಡು ಜೀವ ಬಲಿಯಾಗಿದೆ. ಅಕ್ಟೋಬರ್ ತಿಂಗಳಲ್ಲೇ 6 ಜನ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಪ್ರಾಣ ಬಿಟ್ಟಿದ್ದಾರೆ (Death). ಹುಳಿಮಾವು ಸಂಚಾರಿ ಠಾಣಾ ವ್ಯಾಪ್ತಿಯ ಅರಕೆರೆಯ ಸಾಯಿ ಗಾರ್ಮೆಂಟ್ಸ್ ಬಳಿ ರಸ್ತೆ ದಾಟುವಾಗ ಮಹಿಳೆಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ವೀಣಾ ಎಂಬ ಮಹಿಳೆ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಸ್ಥಳಕ್ಕೆ ಹುಳಿಮಾವು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಮತ್ತೊಂದೆಡೆ ವಿಜಯನಗರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಬಿಎಂಟಿಸಿ ಸಿಲುಕು ವ್ಯಕ್ತಿ ಪ್ರಾಣ ಕಳೆದುಕೊಂಡಿದ್ದಾರೆ.
ಇಂದು ಬೆಳಗ್ಗೆಯೇ ಹುಳಿಮಾವು ವ್ಯಾಪ್ತಿಯಲ್ಲಿ ಓರ್ವ ಮಹಿಳೆ ಹಾಗೂ ವಿಜಯನಗರದಲ್ಲಿ ಓರ್ವ ವ್ಯಕ್ತಿ ಬಿಎಂಟಿಸಿಗೆ ಬಲಿಯಾಗಿದ್ದಾರೆ. ವಿಜಯನಗರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೋವಿಂದರಾಜನಗರ ಬೈ ಟು ಕಾಫಿ ಮುಂಭಾಗ ಕುಮಾರ್ (45) ಎಂಬುವವರು ಬಿಎಂಟಿಸಿ ಬಸ್ ಅಪಘಾತದಲ್ಲಿ ಬಲಿಯಾಗಿದ್ದಾರೆ. ಸ್ಥಳಕ್ಕೆ ವಿಜಯನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಕ್ಟೋಬರ್ 22ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಬಿನ್ನಮಂಗಲದಲ್ಲಿ ಬಿಎಂಟಿಸಿ ಬಸ್ ಹರಿದು 32 ವರ್ಷದ ಮಧು ಅನ್ನೋರು ಮೃತ ಪಟ್ಟಿದ್ದರು. ಕೆಲಸ ಮುಗಿಸಿ ಮನೆಗೆ ಹೋಗ್ತಿದ್ದ ವೇಳೆ, ಹಿಂದೆಯಿಂದ ಬಂದ ಬಿಎಂಟಿಸಿ ಬಸ್, ಬೈಕ್ಗೆ ಡಿಕ್ಕಿಯಾಗಿತ್ತು. ಡಿಕ್ಕಿ ಹೊಡೆದ ರಭಸಕ್ಕೆ ನಡು ಮಧು ರಸ್ತೆ ಮೇಲೆ ಬಿದ್ದಿದ್ದರು. ಆಗ ಬೈಕ್ ಸವಾರನ ಮೇಲೆ ಬಸ್ ಹರಿದಿತ್ತು. ಮುಖದ ಮೇಲೆಯೇ ಬಸ್ ಚಕ್ರ ಹರಿದಿದ್ರಿಂದ ಬೈಕ್ ಸವಾರ ಸ್ಥಳದಲ್ಲೇ ಜೀವ ಬಿಟ್ಟಿದ್ದ. ಬಿಎಂಟಿಸಿ ಬಸ್ ಚಾಲಕನನ್ನು ನೆಲಮಂಗಲ ಪೊಲೀಸರು ವಶಕ್ಕೆ ಪಡೆದಿದ್ದರು.
BMTC ಬಸ್ ಹರಿದು ಇಂಜಿನಿಯರ್ ವಿದ್ಯಾರ್ಥಿ ಸಾವು
ಇನ್ನು ಅಕ್ಟೋಬರ್ 14ರಂದು ಯಶವಂತಪುರ ಗಾರೆಪ್ಪನ ಪಾಳ್ಯ ರಸ್ತೆ ಮಾರ್ಗವಾಗಿ ಹೋಗುತ್ತಿದ್ದ ಬಸ್ ಹೂವಿನ ಮಾರ್ಕೆಟ್ ಸಮೀಪ ಹಿಂಭಾಗದಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಗಂಗಾಧರ್ (21) ಎಂಬ ಯುವಕ ಪ್ರಾಣ ಕಳೆದುಕೊಂಡಿದ್ದ. ಹೆಚ್ಎಎಲ್ಗೆ ಇಂಟರ್ನಿಶಿಫ್ ಸರ್ಟಿಫಿಕೇಟ್ ತರಲು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಗಂಗಾಧರ್ಗೆ ಹೂವಿನ ಮಾರ್ಕೆಟ್ ಸಮೀಪ ಹಿಂಬಂದಿಯಿಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿತ್ತು. ಆಗ ಹಿಂಬದಿ ಚಕ್ರ ಹರಿದು ಗಂಗಾಧರ್ ಸ್ಥಳದಲ್ಲೇ ಮೃತಪಟ್ಟಿದ್ದ.
ಇದನ್ನೂ ಓದಿ:ಬೆಂಗಳೂರು: BMTC ಬಸ್ ಹರಿದು ಇಂಜಿನಿಯರ್ ವಿದ್ಯಾರ್ಥಿ ಸಾವು, 10 ದಿನಗಳಲ್ಲಿ ಬಿಎಂಟಿಸಿಗೆ ಮೂರನೇ ಬಲಿ
ತಿಂಗಳಲ್ಲಿ ಬಿಎಂಟಿಸಿಗೆ ಆರನೇ ಬಲಿ
ಅಂದಹಾಗೇ ಬಿಎಂಟಿಸಿ ಬಸ್ಗೆ ಸವಾರರ ಬಲಿಯಾಗಿರೋದು ಇದೇ ಮೊದಲೇನಲ್ಲ. ಈ ಹಿಂದೆಯೂ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ಗೆ ಅದೆಷ್ಟೋ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಅಕ್ಟೋಬರ್ 5 ರಂದು ಸಂಜೆ 5 ಗಂಟೆ ಸುಮಾರಿಗೆ ಓವರ್ ಟೇಕ್ ಮಾಡುವ ವೇಳೆ ಬಿಎಂಟಿಸಿಗೆ ಡಿಕ್ಕಿ ಹೊಡೆದ ಆ್ಯಕ್ಟೀವಾ ಬೈಕ್ ಚಾಲಕ ಭರತ್ ರೆಡ್ಡಿ (23) ಸ್ಥಳದಲ್ಲೇ ಸಾವನ್ನಪ್ಪಿದ್ದನು. ಅಕ್ಟೋಬರ್ 9 ರಂದು ಗಾರೇಪಾಳ್ಯ ಜಂಕ್ಷನ್ ಬಳಿ ಬಿಎಂಟಿಸಿ ಹರಿದು ಮೂರು ವರ್ಷದ ಮಗು ಬಲಿಯಾಗಿತ್ತು. ನಂತರ ಅಕ್ಟೋಬರ್ 14ರಂದು ಇಂಜಿನಿಯರ್ ವಿದ್ಯಾರ್ಥಿ, ಅಕ್ಟೋಬರ್ 22ರಂದು 32 ವರ್ಷದ ಮಧು ಅನ್ನೋರು ಬಳಿಯಾಗಿದ್ದರು. ಈಗ ಅಕ್ಟೋಬರ್ 29ರಂದು ವೀಣಾ ಹಾಗೂ ಕುಮಾರ್ ಎಂಬುವವರು ಬಿಎಂಟಿಸಿ ಬಸ್ಗೆ ಬಲಿಯಾಗಿದ್ದಾರೆ. ಅಧಿಕಾರಿಗಳು ಆದಷ್ಟು ಬೇಗ ಈ ಬಗ್ಗೆ ಗಮನ ಹರಿಸಿ ಸಾವು-ನೋವನ್ನು ಕಡಿಮೆ ಮಾಡುವ ಬಗ್ಗೆ ಕ್ರಮ ತೆಗೆದುಕೊಳ್ಳಬೇಕಿದೆ. ಇಲ್ಲದಿದ್ದರೆ ಮತ್ತಷ್ಟು ಅಮಾಯಕ ಜೀವಗಳು ಬಲಿಯಾಗಲಿವೆ.
ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 10:57 am, Sun, 29 October 23