AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರ್ಸ್​​ ನಿರ್ಲಕ್ಷ್ಯಕ್ಕೆ 6 ತಿಂಗಳ ಮಗುವಿನ ಬೆರಳೇ ತುಂಡು!: ಆಸ್ಪತ್ರೆ ವಿರುದ್ಧ ಕೇಸ್​​ ದಾಖಲು

ಬೆಂಗಳೂರಿನ ಇಂದಿರಾನಗರದ ಚಿನ್ಮಯ್ ಮಿಷನ್ ಆಸ್ಪತ್ರೆಯಲ್ಲಿ 6 ತಿಂಗಳ ಮಗುವಿನ ಬೆರಳನ್ನು ನರ್ಸ್ ನಿರ್ಲಕ್ಷ್ಯದಿಂದ ಕತ್ತರಿಸಿರುವ ಆರೋಪ ಕೇಳಿಬಂದಿದೆ. ಜ್ವರದಿಂದ ಬಳಲುತ್ತಿದ್ದ ಮಗುವಿಗೆ ಚಿಕಿತ್ಸೆ ನೀಡುತ್ತಿದ್ದಾಗ ಡ್ರೆಸ್ಸಿಂಗ್ ತೆಗೆಯುವಾಗ ಈ ಘಟನೆ ನಡೆದಿದೆ. ಪೋಷಕರು ವೈದ್ಯರು ಮತ್ತು ಆಸ್ಪತ್ರೆ ಸಿಬ್ಬಂದಿ ವಿರುದ್ಧ ದೂರು ದಾಖಲಿಸಿದ್ದಾರೆ. ಆಸ್ಪತ್ರೆಯು ಸತ್ಯ ಮರೆಮಾಚಲು ಯತ್ನಿಸುತ್ತಿದೆ ಎಂದು ಆರೋಪಿಸಲಾಗಿದೆ.

ನರ್ಸ್​​ ನಿರ್ಲಕ್ಷ್ಯಕ್ಕೆ  6 ತಿಂಗಳ ಮಗುವಿನ ಬೆರಳೇ ತುಂಡು!: ಆಸ್ಪತ್ರೆ ವಿರುದ್ಧ ಕೇಸ್​​ ದಾಖಲು
ಸಾಂದರ್ಭಿಕ ಚಿತ್ರImage Credit source: Google
ಪ್ರಸನ್ನ ಹೆಗಡೆ
|

Updated on:Feb 25, 2026 | 12:35 PM

Share

ಬೆಂಗಳೂರು, ಫೆಬ್ರವರಿ 25: ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ 6 ತಿಂಗಳ ಮಗುವಿನ ಬೆರಳನ್ನೇ ನರ್ಸ್​​ ಕತ್ತರಿಸಿರುವ ಘಟನೆ ಬೆಂಗಳೂರಿನ ಇಂದಿರಾ ನಗರದಲ್ಲಿ ನಡೆದಿದೆ. ಜ್ವರ ಮತ್ತು ಕಫದ ಹಿನ್ನೆಲೆ ಚಿನ್ಮಯ್ ಮಿಷನ್ ಆಸ್ಪತ್ರೆಗೆ ಮಗುವನ್ನು ಪೋಷಕರು ಫೇಬ್ರವರಿ 19ರಂದು ದಾಖಲಿಸಿದ್ದರು. ಅಲ್ಲಿಂದ ಫೆ.24ರ ವರೆಗೆ ಮಗುವಿಗೆ ನಿರಂತರ ಚಿಕಿತ್ಸೆ ನೀಡಲಾಗಿತ್ತು. ಆದರೆ ನಿನ್ನೆ ಡ್ರಿಪ್ಸ್​​ಗೆ ಹಾಕಿದ್ದ ಡ್ರೆಸ್ಸಿಂಗ್ ತೆಗೆಯುವ ಸಂದರ್ಭ ನಿರ್ಲಕ್ಷದ ಕಾರಣದಿಂದ ನರ್ಸ್ ಮಗುವಿನ ಎಡಗೈ ಕಿರುಬೆರೆಳಿನ ಅರ್ಧ ಬಾಗವನ್ನೇ ಕತ್ತರಿಸಿದ್ದಾರೆ. ಗಂಭೀರ ಗಾಯದಿಂದ ಎಳೆಯ ಕಂದಮ್ಮ ನರಳಾಡುತ್ತಿದ್ದು, ಈ ಬಗ್ಗೆ ಪೊಲೀಸ್​​ ದೂರು ದಾಖಲಾಗಿದೆ.

ದೂರಿನಲ್ಲಿ ಏನಿದೆ?

6 ತಿಂಗಳ ತಮ್ಮ ಗಂಡು ಮಗು ಜ್ವರ ಮತ್ತು ಶೀತದಿಂದ ಬಳಲುತ್ತಿದ್ದ ಹಿನ್ನೆಲೆ ಇಂದಿರಾನಗರದಲ್ಲಿರುವ ಚಿನ್ಮಯ ಮಿಷನ್ ಆಸ್ಪತ್ರೆಗೆ ಆತನನ್ನು ಕರೆತಂದು ವೈದ್ಯರನ್ನು ಸಂಪರ್ಕಿಸಿದ್ದೆವು. ಮಗುವಿಗೆ ತೀವ್ರ ಅನಾರೋಗ್ಯದ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲು ಅವರು ಸೂಚಿಸಿದ್ದರು. 5-6 ದಿನಗಳ ಚಿಕಿತ್ಸೆ ಬಳಿಕ ಫೆಬ್ರವರಿ 24ರಂದು ಮಗುವಿನ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆ ಡಿಸ್ಚಾರ್ಜ್​​ಗೆ ನಿರ್ಧರಿಸಲಾಗಿತ್ತು. ನಾವು ಬಿಲ್ಲಿಂಗ್​​ ಕೌಂಟರ್​​ಗೆ ಹಣ ಪಾವತಿ ಮಾಡಲು ಹೋಗಿದ್ದ ಸಂದರ್ಭ, ನರ್ಸ್​​ ನಿರ್ಲಕ್ಷ್ಯಕ್ಕೆ ಮಗುವಿನ ಎಡಗೈ ಕಿರು ಬೆರಳು ಕಟ್​​ ಆಗಿದೆ. ಹೀಗಾಗಿ ವೈದ್ಯರು, ಸಿಬ್ಬಂದಿ ಮತ್ತು ಆಸ್ಪತ್ರೆಯ ಆಡಳಿತ ಮಂಡಳಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಗುವಿನ ತಂದೆ ವಿಜಯ್​​ ಕುಮಾರ್​​ ಆಗ್ರಹಿಸಿದ್ದಾರೆ.

ಇದನ್ನೂ ಓದಿ:  ಕೌಟುಂಬಿಕ ಕಲಹಕ್ಕೆ ಯುವಕ ಬಲಿ; ಮಗನ ಸಾವಿನ ಸುದ್ದಿ ಕೇಳಿ ತಾಯಿಯೂ ಆತ್ಮಹತ್ಯೆಗೆ ಯತ್ನ!

ಸತ್ಯ ಮರೆಮಾಚಲು ಯತ್ನ?

ಘಟನೆ ಬಳಿಕ ತುರ್ತು ಚಿಕಿತ್ಸಾ ಘಟಕಕ್ಕೆ ಮಗುವನ್ನು ಕರೆದುಕೊಂಡು ಹೋಗಲಾಗಿದ್ದು, ಗಾಯಕ್ಕೆ ಡ್ರೆಸ್ಸಿಂಗ್​​ ಮಾಡಲಾಗಿದೆ. ಹೀಗಿದ್ದರೂ ಯಾವುದೇ ದೊಡ್ಡ ಗಾಯವಾಗಿಲ್ಲ. ಮಗು ಚಿಕ್ಕದಾಗಿರುವ ಕಾರಣ ಗಾಯ ಅದಾಗೇ ಗುಣವಾಗುತ್ತದೆ ಎಂದು ತಿಳಿಸಿದ್ದಾರೆ. ಆದರೆ ಘಟನೆಯಲ್ಲಿ ಮಗುವಿನ ಅರ್ಧ ಬೆರಳು ಕಟ್​​ ಆಗಿದೆ ಎಂದು ವಿಜಯ್​​ ಕುಮಾರ್​​ ದೂರಿದ್ದಾರೆ.

ವರದಿ: ಲಕ್ಷ್ಮೀ ನರಸಿಂಹ, ಟಿವಿ9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:34 pm, Wed, 25 February 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ