AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಪಿಜಿಗಳಿಗೆ ಜಿಬಿಎ ಶಾಕ್! 500ಕ್ಕೂ ಹೆಚ್ಚು ಪಿಜಿಗಳಿಗೆ ನೋಟಿಸ್

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಪಿಜಿಗಳ ಕಳಪೆ ಕಾರ್ಯನಿರ್ವಹಣೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಕಡಿವಾಣ ಹಾಕಿದೆ. ಮೂಲಭೂತ ನಿಯಮಗಳನ್ನು ಉಲ್ಲಂಘಿಸಿದ 8 ಅಸುರಕ್ಷಿತ ಪಿಜಿಗಳಿಗೆ ಬೀಗ ಜಡಿಯಲಾಗಿದ್ದು, 574 ಪಿಜಿಗಳಿಗೆ ನೋಟಿಸ್ ನೀಡಲಾಗಿದೆ. ಒಟ್ಟು 3.09 ಲಕ್ಷ ರೂ. ದಂಡ ವಿಧಿಸಲಾಗಿದೆ. ಪಿಜಿ ಮಾಲೀಕರು ನಿಯಮ ಪಾಲಿಸದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

ಬೆಂಗಳೂರಿನ ಪಿಜಿಗಳಿಗೆ ಜಿಬಿಎ ಶಾಕ್! 500ಕ್ಕೂ ಹೆಚ್ಚು ಪಿಜಿಗಳಿಗೆ ನೋಟಿಸ್
ಬೆಂಗಳೂರಿನ ಪಿಜಿಗಳಿಗೆ ಜಿಬಿಎ ಶಾಕ್! 574 ಪಿಜಿಗಳಿಗೆ ನೋಟಿಸ್
ಭಾವನಾ ಹೆಗಡೆ
|

Updated on: Feb 02, 2026 | 1:36 PM

Share

ಬೆಂಗಳೂರು, ಫೆಬ್ರುವರಿ 02: ನಗರದಲ್ಲಿ ವಿವಿಧ ರಾಜ್ಯಗಳಿಂದ ಉದ್ಯೋಗ, ಶಿಕ್ಷಣ ಸೇರಿದಂತೆ ಹಲವು ಕಾರಣಗಳಿಂದ ವಾಸವಾಗಿರುವ ಜನರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಪೇಯಿಂಗ್ ಗೆಸ್ಟ್ (Bengaluru PG) ವಸತಿಗೃಹಗಳ ಸಂಖ್ಯೆಯೂ ಅಪಾರವಾಗಿ ಹೆಚ್ಚಾಗಿದೆ. ಆದರೆ ಅನೇಕ ಪಿಜಿಗಳು ಮೂಲಭೂತ ನಿಯಮಗಳನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಅಸುರಕ್ಷಿತ ಪಿಜಿಗಳ ವಿರುದ್ಧ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಅಧಿಕಾರಿಗಳು ಕಟ್ಟುನಿಟ್ಟಿನ ಕಾರ್ಯಾಚರಣೆಗೆ ಮುಂದಾಗಿದ್ದಾರೆ.

ಈಗಾಗಲೇ 8 ಪಿಜಿಗಳಿಗೆ ಬೀಗ!

ಜನವರಿ ತಿಂಗಳಲ್ಲೇ ಶಾಂತಿನಗರ, ಸಿ.ವಿ.ರಾಮನ್‌ನಗರ, ಗಾಂಧಿನಗರ, ಶಿವಾಜಿನಗರ, ಚಾಮರಾಜಪೇಟೆ ಹಾಗೂ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ ತಪಾಸಣೆ ನಡೆಸಿದ ಆರೋಗ್ಯಾಧಿಕಾರಿಗಳು 574 ಪಿಜಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಅಡುಗೆ ಕೋಣೆ ಶುಚಿತ್ವ, ಶುದ್ಧ ಕುಡಿಯುವ ನೀರು, ಸುರಕ್ಷತಾ ಕ್ರಮಗಳನ್ನು ಪಾಲಿಸದೇ ಇದ್ದ 8 ಪಿಜಿಗಳಿಗೆ ಬೀಗ ಹಾಕಲಾಗಿದ್ದು, ಇತರೆ ನಿಯಮ ಉಲ್ಲಂಘನೆಗಳಿಗೆ ಒಟ್ಟೂ 3.09 ಲಕ್ಷ ರೂ. ದಂಡ ವಿಧಿಸಲಾಗಿದೆ.

ಪಿಜಿ ಮಾಲೀಕರಿಗೆ ಅಧಿಕಾರಿಗಖ ಖಡಕ್ ವಾರ್ನಿಂಗ್

ಪಿಜಿ ಮಾಲೀಕರ ಸಂಘದ ಅಧ್ಯಕ್ಷ ಅರುಣ್ ಕುಮಾರ್ ಮಾತನಾಡಿ, ಏಕಾಏಕಿ ನಡೆಯುತ್ತಿರುವ ಕಾರ್ಯಾಚರಣೆಯಿಂದ ಮಾಲೀಕರು ಕಳವಳಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಇತ್ತ ವಿಲ್ಸನ್ ಗಾರ್ಡನ್‌ನ ಪಿಜಿ ಮಾಲೀಕ ಶರಣೇಶ್ ಪ್ರತಿಕ್ರಿಯಿಸಿ, ನಿಯಮ ಪಾಲನೆ ಜೊತೆಗೆ ಅಧಿಕಾರಿಗಳಿಗೆ ಸಹಕರಿಸುವುದು ನಮ್ಮ ಜವಾಬ್ದಾರಿ ಎಂದು ಹೇಳಿದ್ದಾರೆ. ಪರಿಶೀಲನೆಗೆ ಒಳಪಟ್ಟ ಎಲ್ಲಾ ಪಿಜಿಗಳಿಗೆ ಎಚ್ಚರಿಕೆ ನೀಡಲಾಗಿದ್ದು, ನ್ಯೂನ್ಯತೆ ಸರಿಪಡಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಪಿಜಿಗಳಿಗೆ ಬೀಗ ಬೀಳುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

ಲಕ್ಷ್ಮಿ ನರಸಿಂಹ , ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ