AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್; ಪಿಂಕ್ ಲೈನ್ ಮೆಟ್ರೋಗೆ ಬಂತು ಇನ್ನೊಂದು ರೈಲು

ಬೆಂಗಳೂರು ನಮ್ಮ ಮೆಟ್ರೋದ ಪಿಂಕ್ ಲೈನ್ ಯೋಜನೆಯು ಮಹತ್ವದ ಹಂತ ತಲುಪಿದೆ. ಎರಡನೇ ರೈಲು ಕೊತ್ತನೂರು ಡಿಪೋಗೆ ಯಶಸ್ವಿಯಾಗಿ ಆಗಮಿಸಿದ್ದು, ಏಪ್ರಿಲ್‌ನಲ್ಲಿ ಕಾಳೇನ ಅಗ್ರಹಾರದಿಂದ ತಾವರೆಕೆರೆಯವರೆಗೆ ಮೆಟ್ರೋ ಸಂಚಾರ ಆರಂಭವಾಗುವ ಸಾಧ್ಯತೆಯಿದೆ. ಇದು ದಕ್ಷಿಣ ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುತ್ತದೆ. ವರ್ಷದ ಅಂತ್ಯಕ್ಕೆ ಸಂಪೂರ್ಣ 21.26 ಕಿ.ಮೀ. ಪಿಂಕ್ ಲೈನ್ ಉದ್ಘಾಟಿಸಲು BMRCL ತಯಾರಿಸಲಾಗಿದೆ.

Namma Metro: ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್; ಪಿಂಕ್ ಲೈನ್ ಮೆಟ್ರೋಗೆ ಬಂತು ಇನ್ನೊಂದು ರೈಲು
ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್; ಪಿಂಕ್ ಲೈನ್ ಮೆಟ್ರೋಗೆ ಬಂತು ಇನ್ನೊಂದು ರೈಲು
ಕಿರಣ್​ ಸೂರ್ಯ
| Edited By: |

Updated on:Feb 04, 2026 | 8:49 AM

Share

ಬೆಂಗಳೂರು, ಫೆಬ್ರುವರಿ 04: ಬೆಂಗಳೂರಿಗರಿಗೆ ನಮ್ಮ ಮೆಟ್ರೋ ದಿಂದ ಮತ್ತೊಂದು ಸಿಹಿ ಸುದ್ದಿ ಲಭಿಸಿದೆ. ನಗರದ ಬಹುನಿರೀಕ್ಷಿತ ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಎರಡನೇ ರೈಲು ಯಶಸ್ವಿಯಾಗಿ ಆಗಮಿಸಿದ್ದು, ಅದರ ಬೋಗಿಗಳು ಕೊತ್ತನೂರು ಡಿಪೋಗೆ ತಲುಪಿವೆ. ಇದರಿಂದ ಪಿಂಕ್ ಲೈನ್ ಯೋಜನೆ ಇನ್ನೊಂದು ಮಹತ್ವದ ಹಂತ ತಲುಪಿದೆ ಎಂದು BMRCL ಅಧಿಕಾರಿಗಳು ತಿಳಿಸಿದ್ದಾರೆ.

ಏಪ್ರಿಲ್​ನಲ್ಲಿ ಸಂಚಾರ ಆರಂಭ

ಒಟ್ಟು 21.26 ಕಿಲೋಮೀಟರ್ ಉದ್ದದ ಈ ಪಿಂಕ್ ಲೈನ್ ಮಾರ್ಗದಲ್ಲಿ 7.5 ಕಿಲೋಮೀಟರ್ ಎಲಿವೇಟೆಡ್ ವಿಭಾಗವಿದ್ದು, ಈ ಭಾಗದಲ್ಲಿ ಈಗಾಗಲೇ ಪರೀಕ್ಷಾ ಕಾರ್ಯಗಳು ಆರಂಭವಾಗಿವೆ. ಎಲಿವೇಟೆಡ್ ಮಾರ್ಗದಲ್ಲಿ ಒಟ್ಟು ಆರು ಸ್ಟೇಷನ್‌ಗಳು ನಿರ್ಮಾಣವಾಗುತ್ತಿದ್ದು, ಪ್ರಯಾಣಿಕರ ಸುರಕ್ಷತೆ ಮತ್ತು ರೈಲಿನ ತಾಂತ್ರಿಕ ಗುಣಮಟ್ಟ ಪರಿಶೀಲನೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

ಮೊದಲ ಹಂತದಲ್ಲಿ ಕಾಳೇನ ಅಗ್ರಹಾರದಿಂದ ತಾವರೆಕೆರೆಯವರೆಗೆ ಮೆಟ್ರೋ ಸಂಚಾರ ಆರಂಭಿಸಲು ಬಿಎಂಆರ್‌ಸಿಎಲ್ ಸಿದ್ಧತೆ ನಡೆಸುತ್ತಿದೆ. ಈ ಮಾರ್ಗವನ್ನು ಏಪ್ರಿಲ್ ತಿಂಗಳಲ್ಲಿ ಸಾರ್ವಜನಿಕ ಸೇವೆಗೆ ತೆರೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಇದರಿಂದ ದಕ್ಷಿಣ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ.

ಉಳಿದ 13.76 ಕಿಲೋಮೀಟರ್ ಅಂಡರ್‌ಗ್ರೌಂಡ್ ಮಾರ್ಗದ ಕಾಮಗಾರಿ ಪ್ರಗತಿಯಲ್ಲಿದ್ದು, ಎಲ್ಲಾ ಕೆಲಸಗಳು ಪೂರ್ಣಗೊಂಡ ಬಳಿಕ ವರ್ಷದ ಅಂತ್ಯಕ್ಕೆ ಸಂಪೂರ್ಣ ಪಿಂಕ್ ಲೈನ್ ಉದ್ಘಾಟಿಸುವ ಉದ್ದೇಶ ಬಿಎಂಆರ್‌ಸಿಎಲ್ ಹೊಂದಿದೆ. ಶೀಘ್ರದಲ್ಲೇ ಹೊಸ ರೈಲುಗಳ ಜೋಡಣೆ ಬಳಿಕ ಟ್ರ್ಯಾಕ್ ಪರೀಕ್ಷೆ ಆರಂಭವಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:45 am, Wed, 4 February 26

Follow Us
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ