ಬಲವಂತದ ಬಂದ್​ಗೆ ಇಲ್ಲ ಅವಕಾಶ, ನಾಳೆ ಮಧ್ಯರಾತ್ರಿ ವರೆಗೆ ನಿಷೇಧಾಜ್ಞೆ; ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಮಾಹಿತಿ

Bangalore Bandh; ಸಾಕಷ್ಟು ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಸಿವಿಲ್ ಪೊಲೀಸರೊಂದಿಗೆ ಸಿಐಡಿ, ಐಎಸ್​​​ಡಿ ಅಧಿಕಾರಿಗಳೂ ಕರ್ತವ್ಯ ನಿರ್ವಹಿಸಲಿದ್ದಾರೆ. ನಗರದಲ್ಲಿ ಒಟ್ಟು ನೂರು ಪ್ಲಟೂನ್​​ಗಳು (ತುಕಡಿ) ನಿಯೋಜನೆಯಾಗಲಿವೆ. ಕೆಎಸ್​​ಆರ್​ಪಿಯ ಅರವತ್ತು ತುಕಡಿ, ಸಿಎಆರ್ ನಲವತ್ತು ತುಕಡಿ ನಿಯೋಜನೆ ಮಾಡಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ತಿಳಿಸಿದ್ದಾರೆ.

ಬಲವಂತದ ಬಂದ್​ಗೆ ಇಲ್ಲ ಅವಕಾಶ, ನಾಳೆ ಮಧ್ಯರಾತ್ರಿ ವರೆಗೆ ನಿಷೇಧಾಜ್ಞೆ; ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಮಾಹಿತಿ
ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ
Follow us
Prajwal Kumar NY
| Updated By: Ganapathi Sharma

Updated on:Sep 25, 2023 | 6:37 PM

ಬೆಂಗಳೂರು, ಸೆಪ್ಟೆಂಬರ್ 25: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಮಂಗಳವಾರ ಬೆಂಗಳೂರು ಬಂದ್​ಗೆ (Bangalore Bandh) ಕರೆ ನೀಡಿವೆ. ಬಂದ್​ ವಿಚಾರವಾಗಿ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ (B Dayananda) ಮಾಹಿತಿ ನೀಡಿದ್ದು, ಬಲವಂತದ ಬಂದ್​ಗೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಜತೆಗೆ, ಸೋಮವಾರ ಮಧ್ಯರಾತ್ರಿಯಿಂದ ಮಂಗಳವಾರ ಮಧ್ಯರಾತ್ರಿ ವರೆಗೆ ಬೆಂಗಳೂರು ನಗರದಾದ್ಯಂತ ಸೆಕ್ಷನ್ 144ರ ಅಡಿ ನಿಷೇಧಾಜ್ಞೆ ಹೇರಲಾಗಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಭದ್ರತೆಗಾಗಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗುತ್ತದೆ. 60 ಕೆಎಸ್​ಆರ್​ಪಿ, 40 ಸಿಎಆರ್ ತುಕಡಿ ನಿಯೋಜನೆ ಮಾಡುತ್ತೇವೆ. ಅಗತ್ಯವಿದ್ದಲ್ಲಿ ತಮಿಳುನಾಡು ಸಾರಿಗೆ ಬಸ್​ಗಳಿಗೆ ಭದ್ರತೆ ಒದಗಿಸುತ್ತೇವೆ. ಪೊಲೀಸರು, ಕೆಎಸ್​ಆರ್​ಪಿ ಸಿಬ್ಬಂದಿ, ಸ್ಥಳೀಯ ಅಧಿಕಾರಿಗಳು, ಹೊಯ್ಸಳ ಪೊಲೀಸರು ಎಲ್ಲರು ಇರಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಒತ್ತಾಯಪೂರ್ವಕವಾಗಿ ಬಂದ್ ಮಾಡಲು ಅವಕಾಶ ಇಲ್ಲ. ಸಾರ್ವಜನಿಕರು ತಾವೇಗಿಯೇ ಬಂದ್ ಮಾಡಿದರೆ ತೊಂದರೆ ಇಲ್ಲ. ಆದರೆ, ಬಲವಂತವಾಗಿ ಮಾಡುವಂತೆ ಇಲ್ಲ ಎಂದು ಬಿ ದಯಾನಂದ ತಿಳಿಸಿದ್ದಾರೆ.

ಸಾಕಷ್ಟು ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಸಿವಿಲ್ ಪೊಲೀಸರೊಂದಿಗೆ ಸಿಐಡಿ, ಐಎಸ್​​​ಡಿ ಅಧಿಕಾರಿಗಳೂ ಕರ್ತವ್ಯ ನಿರ್ವಹಿಸಲಿದ್ದಾರೆ. ನಗರದಲ್ಲಿ ಒಟ್ಟು ನೂರು ಪ್ಲಟೂನ್​​ಗಳು (ತುಕಡಿ) ನಿಯೋಜನೆಯಾಗಲಿವೆ. ಕೆಎಸ್​​ಆರ್​ಪಿಯ ಅರವತ್ತು ತುಕಡಿ, ಸಿಎಆರ್ ನಲವತ್ತು ತುಕಡಿ ನಿಯೋಜನೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ನಾಳೆ ಬೆಂಗಳೂರು ಬಂದ್: ರ‍್ಯಾಲಿ, ಮೆರವಣಿಗೆಗಿಲ್ಲ ಅವಕಾಶ: ಹೈಕೋರ್ಟ್

ತಮಿಳುನಾಡಿನ ಸಾರಿಗೆ ಸಂಸ್ಥೆ ಹಾಗೂ ಇತರ ಸಾರಿಗೆ ಸಂಸ್ಥೆಗಳು ತಾವಾಗಿಯೇ ನಿರ್ಧಾರ ತೆಗೆದುಕೊಳ್ಳಬೇಕು. ಅವಶ್ಯಕತೆ ಇದ್ದಲಿ ಭದ್ರತೆ ನೀಡಲಿದ್ದೇವೆ. ನಾಳೆ ಪ್ರತಿಭಟನೆ ಹಾಗೂ ಮೆರವಣಿಗೆಗೆ ಅವಕಾಶ ಇಲ್ಲ. ನಗರದಲ್ಲಿ ನಾಳೆ ಒಟ್ಟು ಹತ್ತು ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಟೌನ್​ಹಾಲ್​ನಿಂದ ಫ್ರೀಡಂಪಾರ್ಕ್​ವರೆಗೆ ಱಲಿಗೆ ಅವಕಾಶ ಕೇಳಿದ್ದಾರೆ. ಬಂದ್ ಸಮಯದಲ್ಲಿ ಏನೇ ಅಹಿತಕರ ಘಟನೆ ಸಂಭವಿಸಿದರೆ ಬಂದ್​ಗೆ ಕರೆ ಕೊಟ್ಟವರೇ ಹೊಣೆ ಎಂಬುದಾಗಿ ಹೈಕೋರ್ಟ್ ಸಹ ಹೇಳಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:14 pm, Mon, 25 September 23

Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ