AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಂತ ಖರ್ಚಿನಲ್ಲಿ ಗುಂಡಿ ಮುಚ್ಚಿದ ವ್ಯಕ್ತಿ, ಒಂದು ಗಂಟೆಯಲ್ಲಿ ಎಲ್ಲವನ್ನು ಹಾಳು ಮಾಡಿದ ನೀರಿನ ಟ್ಯಾಂಕರ್

ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬರು ಸ್ವಂತ ಖರ್ಚಿನಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಿದ ಒಂದು ಗಂಟೆಯೊಳಗೆ ನೀರಿನ ಟ್ಯಾಂಕರ್‌ ಹಾಳು ಮಾಡಿದೆ. ಈ ಘಟನೆ ಕುರಿತ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆ ವ್ಯಕ್ತಿಯ ಶ್ರಮ ವ್ಯರ್ಥವಾಗಿದೆ ಎಂದು ಹೇಳಿದ್ದಾರೆ. ಸಾರ್ವಜನಿಕರು ಆ ವ್ಯಕ್ತಿಯ ಕಾರ್ಯವನ್ನು ಶ್ಲಾಘಿಸಿದ್ದು, ಟ್ಯಾಂಕರ್ ಚಾಲಕನ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ವಂತ ಖರ್ಚಿನಲ್ಲಿ ಗುಂಡಿ ಮುಚ್ಚಿದ ವ್ಯಕ್ತಿ, ಒಂದು ಗಂಟೆಯಲ್ಲಿ ಎಲ್ಲವನ್ನು ಹಾಳು ಮಾಡಿದ ನೀರಿನ ಟ್ಯಾಂಕರ್
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Oct 22, 2025 | 11:52 AM

Share

ಬೆಂಗಳೂರ, ಅ.22: ಒಳ್ಳೆಯ ಕೆಲಸ ಮಾಡುವವರಿಗೆ ಸಪೋರ್ಟ್ (Bangalore pothole repair) ಮಾಡಬೇಕೇ ಹೊರತು ಕೆಟ್ಟದನ್ನು ಯಾರಿಗೂ ಬಯಸಬಾರದು, ಇಲ್ಲೊಂದು ಅಂಥಹದೇ ಪೋಸ್ಟ್​​ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಇಲ್ಲೊಬ್ಬ ವ್ಯಕ್ತಿ ತನ್ನ ಸ್ವಂತ ಖರ್ಚಿನಿಂದ ತಮ್ಮ ಏರಿಯಾದಲ್ಲಿ ಗುಂಡಿ ಬಿದ್ದಿದ್ದ ರಸ್ತೆಯನ್ನು ದುರಸ್ತಿ ಮಾಡಿದ್ದಾರೆ. ಆದರೆ ಗುಂಡಿ ಸರಿ ಮಾಡಿದ ಒಂದು ಗಂಟೆಯೊಳಗೆ ನೀರಿನ ಟ್ಯಾಂಕರ್ ಎಲ್ಲವನ್ನು ಹಾಳು ಮಾಡಿದೆ. ಇದೀಗ ಈ ಪೋಸ್ಟ್​​ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಸರ್ಕಾರ ಮಾಡಬೇಕಿದ್ದ ಕೆಲಸವನ್ನು ಈ ವ್ಯಕ್ತಿ ಮಾಡಿದ್ದಾರೆ, ಆದರೆ ಆ ಕೆಲಸಕ್ಕೆ ಫಲ ಸಿಗುವ ಮೊದಲೇ ಎಲ್ಲವೂ ಹಾಳಾಗಿದೆ. ಇದರ ಜತೆಗೆ ಗುಂಡಿ ಮುಚ್ಚಲು ಮಾಡಿದ ಖರ್ಚು ವ್ಯರ್ಥವಾಗಿದೆ ಎಂದು ಹೇಳಿದ್ದಾರೆ. ಹೊಸದಾಗಿ ಹಾಕಲಾದ ಸಿಮೆಂಟ್ ರಸ್ತೆ ಮೇಲೆ ನೀರಿನ ಟ್ಯಾಂಕರ್ ಹೋಗಿ ಎಲ್ಲವನ್ನು ಹಾಳಾಗಿದೆ ಎಂದು ಬೇಸರದಲ್ಲಿ ಪೋಸ್ಟ್​​​ ಮಾಡಿದ್ದಾರೆ.

ಬೆಂಗಳೂರಿನ ಜನ ಯಾವತ್ತೂ ಸರಿಯಾಗುವುದಿಲ್ಲ ಎಂದು ಪೋಸ್ಟ್​​​ನಲ್ಲಿ ಹೇಳಿಕೊಂಡಿದ್ದಾರೆ. ಈ ನಗರ ಎಂದಿಗೂ ಉತ್ತಮವಾಗುವುದಿಲ್ಲ ಎಂದು ಬೇಸರದಿಂದ ಈ ಪೋಸ್ಟ್​​​ಗೆ ಶೀರ್ಷಿಕೆ ನೀಡಿದ್ದಾರೆ. ಪೋಸ್ಟ್​​​ನಲ್ಲಿ ಘಟನೆಯ ಬಗ್ಗೆ ಹೀಗೆ ವಿವರಿಸಲಾಗಿದೆ, “ನನ್ನ ಬೀದಿಯಲ್ಲಿರುವ ರಸ್ತೆ ಗುಂಡಿಗಳನ್ನು ಸ್ವಂತ ಹಣದಿಂದ ಸರಿ ಮಾಡಲು ನಿರ್ಧಾರಿಸಿದೆ. ರಸ್ತೆ ದುರಸ್ಥಿಯಾದ ಒಂದು ಗಂಟೆಯೊಳಗೆ, ಒಂದು ನೀರಿನ ಟ್ಯಾಂಕರ್ ಎಲ್ಲವನ್ನು ಸಮುದ್ರ ಅಲೆಗಳಂತೆ ಕೊಚ್ಚಿಕೊಂಡು ಹೋಗಿದೆ. ಇಡೀ ಸಿಮೆಂಟಿನ​​​​​ ರಸ್ತೆ ಒಂದೇ ಘಳಿಗೆಯಲ್ಲಿ ಟ್ಯಾಂಕರ್​​ನ ಟ್ಯಾರ್​​​ನಲ್ಲಿ ಅಂಟಿಕೊಂಡು ಹೋಗಿದೆ. ಈ ಬಗ್ಗೆ ಟ್ಯಾಂಕರ್ ಚಾಲಕನನ್ನು ಪ್ರಶ್ನೆ ಮಾಡಿದ್ರೆ, ರಸ್ತೆ ಚೆನ್ನಾಗಿದ್ದಿದ್ದರೆ, ನಾನು ಸಿಮೆಂಟ್ ಮೇಲೆ ಹೋಗುತ್ತಿರಲಿಲ್ಲ ಎಂದು ಸಮರ್ಥಿಸಿಕೊಂಡಿದ್ದಾನೆ. ನೀವು ರಾತ್ರಿ ವೇಳೆ ರಸ್ತೆ ರಿಪೇರಿ ಮಾಡಬೇಕಾಗಿತ್ತು ಎಂದು ನನಗೆ ಗದರಿದ್ದಾನೆ” ಎಂದು ಈ ಪೋಸ್ಟ್​​ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಇದು ರಾಜ್ಯದ ದುಸ್ಥಿತಿ: ಹಳೆ ಸೋಫಾದಿಂದ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರಿನ ಜನ

ವೈರಲ್​​ ಪೋಸ್ಟ್​ ಇಲ್ಲಿದೆ ನೋಡಿ:

This city will never get better byu/chimichangas_69 inbangalore

ಚಾಲಕನ ಮಾತಿನಿಂದ ಬೇಸರಗೊಂಡು, ನನ್ನ ಶ್ರಮ ಮತ್ತು ಹಣ ಎಲ್ಲವೂ ವ್ಯರ್ಥ, ಇದರ ಜತೆಗೆ ಭಾನುವಾರ ನನಗೆ ರಜೆ ಇತ್ತು. ಅದು ಕೂಡ ಹಾಳು, ನೀವು ಯಾವ ಕಾರಣಕ್ಕೂ ಸರಿಯಾಗುವುದಿಲ್ಲ ಎಂದು ಹೇಳಿದ್ದಾರೆ. ಈ ಪೋಸ್ಟ್​​​ನ್ನು ರೆಡ್ಡಿಟ್​​ನಲ್ಲಿ ಹಂಚಿಕೊಂಡಿದ್ದು, ಹಲವು ಬಳಕೆದಾರರೂ ಈ ಬಗ್ಗೆ ಕಮೆಂಟ್​ ಮಾಡಿದ್ದಾರೆ. ಮೂರ್ಖರು ನಿಮ್ಮ ಕೆಲಸವನ್ನು ಎಂದಿಗೂ ಪ್ರಶಂಸಿಸುವುದಿಲ್ಲ. ಅವರು ಬಗ್ಗೆ ಯೋಚನೆ ಮಾಡಬೇಡಿ ಎಂದು ಒಬ್ಬ ಬಳಕೆದಾರ ಕಮೆಂಟ್​ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರ, ನೀವು ಒಳ್ಳೆಯ ವ್ಯಕ್ತಿ, ನಿಮ್ಮ ಈ ಶ್ರಮಕ್ಕೆ ಖಂಡಿತ ಫಲ ಸಿಗಬೇಕು. ನಿಮ್ಮಂತಹ ವ್ಯಕ್ತಿಗಳು ಸಿಗುವುದು ಕಷ್ಟ, ಹಾಗೆ ನಿಮ್ಮಂತೆ ಯೋಚನೆ ಮಾಡಲು ಸಾಧ್ಯವಿಲ್ಲ ಎಂದು ಕಮೆಂಟ್ ಮಾಡಿದ್ದಾರೆ. ಕ್ಷಮಿಸಿ ಗೆಳೆಯ, ನೀವು ಸರಿಯಾದ ಕೆಲಸ ಮಾಡಿದ್ದೀರಿ. ದುರದೃಷ್ಟವಶಾತ್ ನಗರದಲ್ಲಿ ತುಂಬಾ ಮೂರ್ಖರಿದ್ದಾರೆ. ನಿಮ್ಮ ಕೆಲಸಕ್ಕೆ ನನ್ನ ಗೌರವ ಇದೆ ಎಂದು ಮತ್ತೊಬ್ಬ ಬಳಕೆದಾರ ಹೇಳಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ