AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಹೂವಿನ ಹಾರ ಹಾಕಿ ಗಣಹೋಮ; ವಿಡಿಯೋ ವೈರಲ್

Pothole: ಭಾರತಿನಗರ ರೆಸಿಡೆಂಟ್ಸ್ ಫೋರಮ್ ಎಂಬ ನಾಗರೀಕ ಸಂಘಟನೆ, ಕಾಂಪಬೆಲ್ ರಸ್ತೆಯ ಗುಂಡಿಯೊಂದಕ್ಕೆ ಗಣಹೋಮ ಮಾಡಿಸಿದ್ದು, ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಹೂವಿನ ಹಾರ ಹಾಕಿ ಗಣಹೋಮ; ವಿಡಿಯೋ ವೈರಲ್
ರಸ್ತೆ ಗುಂಡಿಗೆ ಹೂವಿನ ಹಾರ ಹಾಕಿ ಗಣಹೋಮ
TV9 Web
| Edited By: sandhya thejappa|

Updated on:Nov 30, 2021 | 2:42 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಾಹನ ಸವಾರರು ಜೀವವನ್ನು ಕೈಯಲ್ಲಿ ಹಿಡಿದು ಓಡಾಡುತ್ತಾರೆ. ರಸ್ತೆ ಮೇಲೆ ಸಂಚಾರ ಮಾಡುವಾಗ ಏನ್ ಆಗುತ್ತೋ ಏನೋ ಎಂಬ ಭಯದಲ್ಲಿರುತ್ತಾರೆ. ಇದಕ್ಕೆ ಕಾರಣ ರಸ್ತೆಗಳ ಮೇಲಿರುವ ಗುಂಡಿಗಳು. ಹಲವು ಬಾರಿ ಬೆಂಗಳೂರಿನ ಜನರು ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಪ್ರಯೋಜನ ಆಗದಿದ್ದಾಗ ಗುಂಡಿಗಳಲ್ಲಿ ನಾಟಿ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಇನ್ನು ಕೆಲವರು ಪ್ರಾಣ ರಕ್ಷಣೆಗೆ ತಾವೇ ಹೋಗಿ ಗುಂಡಿಗಳನ್ನು ಮುಚ್ಚಿದ್ದಾರೆ. ಆದರೆ ಇದೀಗ ರಸ್ತೆ ಗುಂಡಿಗಳಲ್ಲಿ ಗಣಹೋಮ ಮಾಡಿ ನಾಗರಿಕ ಸಂಘಟನೆ ವಿಭಿನ್ನವಾಗಿ ಪ್ರತಿಭಟನೆ ನಡೆಸಿದೆ.

ಭಾರತಿನಗರ ರೆಸಿಡೆಂಟ್ಸ್ ಫೋರಮ್ ಎಂಬ ನಾಗರಿಕ ಸಂಘಟನೆ, ಕಾಂಪಬೆಲ್ ರಸ್ತೆಯ ಗುಂಡಿಯೊಂದಕ್ಕೆ ಗಣಹೋಮ ಮಾಡಿಸಿದ್ದು, ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಬೆಂಗಳೂರಿನಲ್ಲಿ ಒಂದೇ ಒಂದು ರಸ್ತೆ ಕೂಡ ಗುಂಡಿಗಳಿಂದ ಮುಕ್ತವಾಗಿಲ್ಲ. ಬಿಬಿಎಂಪಿ ಗಾಢ ನಿದ್ರೆಯಲ್ಲಿರುವುದರಿಂದ ನಮ್ಮನ್ನು ನಾವೇ ರಕ್ಷಿಸಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ. ಬೆಂಗಳೂರಿನಲ್ಲಿ ಗುಂಡಿಗಳು ಅನೇಕ ಜೀವಗಳನ್ನು ಬಲಿ ಪಡೆದಿವೆ. ಆದರೆ ಸರ್ಕಾರ ಮಾತ್ರ ಈ ಬಗ್ಗೆ ಗಮನ ಹರಿಸುತ್ತಿಲ್ಲ. ಹೀಗಾಗಿ ಪ್ರಾಣಾಪಾಯದಿಂದ ಪಾರಾಗಲು ಗುಂಡಿಯಲ್ಲಿ ಹೋಮ ಮಾಡಿದ್ದೇವೆ ಅಂತ ಭಾರತಿನಗರ ರೆಸಿಡೆಂಟ್ಸ್ ಫೋರಮ್ ತಿಳಿಸಿದೆ.

ಕಾಂಪಬೆಲ್ ರಸ್ತೆ ಗುಂಡಿಗೆ ಇಂದು (ನ.30) 11 ಗಂಟೆ ಸುಮಾರಿಗೆ ಗಣಹೋಮ ಸಲ್ಲಿಸಿದ್ದಾರೆ. ಈ ಬಗ್ಗೆ ಟಿವಿ9 ಕನ್ನಡ ಡಿಜಿಟಲ್​ಗೆ ಪ್ರತಿಕ್ರಿಯೆ ನೀಡಿರುವ ಭಾರತಿನಗರ ರೆಸಿಡೆಂಟ್ಸ್ ಫೋರಮ್ ಪ್ರಧಾನ ಕಾರ್ಯದರ್ಶಿ ಎನ್ ಎಸ್ ರವಿ, ಪ್ರತಿದಿನ ಬೈಕ್ ಸವಾರರು ಸ್ಕಿಡ್ ಆಗಿ ಬೀಳುತ್ತಿದ್ದಾರೆ. ಜೀವ ಕಳೆದುಕೊಳ್ಳುತ್ತಿದ್ದಾರೆ. ಓಡಾಡಲು ಆಗದೇ ಪರದಾಡುವಂತಾಗಿದೆ. ಹೀಗಾಗಿ ರಸ್ತೆಗಳು ಗುಂಡಿಗಳಿಂದ ಮುಕ್ತಿ ಪಡೆಯುವವರೆಗೂ ಪ್ರತಿಭಟನೆ ಮುಂದುವರೆಸುತ್ತೇವೆ ಅಂತ ತಿಳಿಸಿದ್ದಾರೆ.

ನೀರಿನಿಂದ ತುಂಬಿದ್ದ ಕಾಂಪಬೆಲ್ ರಸ್ತೆಯ ಗುಂಡಿಗೆ ಹೂವು ಹಾಕಿ ಗಣಹೋಮ ಮಾಡಿದ್ದಾರೆ. ಪುರೋಹಿತರು ರಸ್ತೆಯಲ್ಲಿ ಕುಳಿತು ವೇದ ಮಂತ್ರ ಪಠಿಸಿ ಪೂಜೆ ನೆರವೇರಿಸಿದ್ದಾರೆ.

ಇದನ್ನೂ ಓದಿ

ಸುಲಿಗೆ ಪ್ರಕರಣದಲ್ಲಿ ಪರಮ್ ಬೀರ್ ಸಿಂಗ್ ವಿರುದ್ಧದ ಜಾಮೀನು ರಹಿತ ವಾರಂಟ್ ರದ್ದು ಮಾಡಿದ ಮ್ಯಾಜಿಸ್ಟ್ರೇಟ್ ಕೋರ್ಟ್

ಸಂಸತ್​ನಲ್ಲಿ ದೇವೇಗೌಡರ ಕೈ ಹಿಡಿದು ಕೂರಿಸಿ, ಆತಿಥ್ಯ ನೀಡಿದ ಪ್ರಧಾನಿ ನರೇಂದ್ರ ಮೋದಿ

Published On - 2:32 pm, Tue, 30 November 21

Follow Us
TV9 Web
TV9 Web

TV9 Kannada

Read More
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು