AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BESCOM Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ: ಬೆಸ್ಕಾಂ ಪ್ರಕಟಣೆ

ಬೆಂಗಳೂರಿನ ಹಲವು ಪ್ರಮುಖ ಭಾಗಗಳಲ್ಲಿ ನಾಳೆ ತ್ರೈಮಾಸಿಕ ದುರಸ್ತಿ ಹಾಗೂ ತುರ್ತು ನಿರ್ವಹಣಾ ಕಾಮಗಾರಿಯ ಹಿನ್ನೆಲೆಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ರಾಜನಕುಂಟೆ, ಕಾಡುಗೋಡಿ, ಚನ್ನಸಂದ್ರ ಹಾಗೂ ವೈಟ್‌ಫೀಲ್ಡ್ ಸುತ್ತಮುತ್ತ ಬೆಳಿಗ್ಗೆ 10:00 ರಿಂದ ಸಂಜೆ 4:00 ರವರೆಗೆ ಕರೆಂಟ್ ಕಟ್ ಇರಲಿದೆ. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಬೆಸ್ಕಾಂ (BESCOM) ಸೂಚಿಸಿದೆ.

BESCOM Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ: ಬೆಸ್ಕಾಂ ಪ್ರಕಟಣೆ
ಸಾಂದರ್ಭಿಕ ಚಿತ್ರImage Credit source: gettyimages.com
ಭಾವನಾ ಹೆಗಡೆ
|

Updated on: Aug 28, 2026 | 2:25 PM

Share

ಮುಖ್ಯಾಂಶಗಳು

  • ಬೆಂಗಳೂರಿನ ಹಲವು ಭಾಗಗಳಲ್ಲಿ ನಾಳೆ ಬೆಳಿಗ್ಗೆಯಿಂದ ಸಂಜೆವರೆಗೆ ವಿದ್ಯುತ್ ಪೂರೈಕೆ ಸ್ಥಗಿತ.
  • ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ಕಾಮಗಾರಿ ಹಿನ್ನೆಲೆಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ.
  • ರಾಜನಕುಂಟೆ, ಕಾಡುಗೋಡಿ ಹಾಗೂ ವೈಟ್‌ಫೀಲ್ಡ್ ಸುತ್ತಮುತ್ತಲಿನ ಗ್ರಾಹಕರಿಗೆ ಬೆಸ್ಕಾಂ ಮುನ್ನೆಚ್ಚರಿಕೆ ಸಂದೇಶ.

ಬೆಂಗಳೂರು, ಆಗಸ್ಟ್ 28: ನಗರದ ಹಲವು ಭಾಗಗಳಲ್ಲಿ ತ್ರೈಮಾಸಿಕ ನಿರ್ವಹಣೆ ಹಾಗೂ ತುರ್ತು ಕಾಮಗಾರಿಗಳ ಹಿನ್ನೆಲೆಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ನಾಳೆ (ಆ.29) ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM) ತನ್ನ ಅಧಿಕೃತ ಟ್ವಿಟರ್ (X) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರಮುಖ ಪ್ರದೇಶಗಳು

ಕೆಪಿಟಿಸಿಎಲ್ (KPTCL) ವತಿಯಿಂದ ಕೈಗೊಳ್ಳಲಾಗುತ್ತಿರುವ ಉಪಕೇಂದ್ರಗಳ ನಿರ್ವಹಣಾ ಕಾಮಗಾರಿಯಿಂದಾಗಿ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 4:00 ಗಂಟೆಯವರೆಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ. ರಾಜನಕುಂಟೆ ಹಾಗೂ ಕಾಡುಗೋಡಿ ಉಪಕೇಂದ್ರ ವ್ಯಾಪ್ತಿಯ ಪ್ರದೇಶಗಳಲ್ಲಿ ಪ್ರಮುಖವಾಗಿ ವಿದ್ಯುತ್ ಸ್ಥಗಿತಗೊಳ್ಳಲಿದೆ.

ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಮರಸಂದ್ರ, ಚೆಲ್ಲಹಳ್ಳಿ, ಇಟಗಲ್‌ಪುರ, ದಿಬ್ಬೂರು, ಕಾಕೋಲು, ಬೆಳ್ಳತೂರು, ಕಾಡುಗೋಡಿ, ಚನ್ನಸಂದ್ರ, ಇಮ್ಮಡಿಹಳ್ಳಿ, ಹಗಡೂರು, ಪ್ರಶಾಂತ್ ಲೇಔಟ್ ಹಾಗೂ ವೈಟ್‌ಫೀಲ್ಡ್ ಮುಖ್ಯರಸ್ತೆಯ ಸುತ್ತಮುತ್ತಲಿನ ನಿವಾಸಿಗಳು ಈ ಅವಧಿಯಲ್ಲಿ ವಿದ್ಯುತ್ ವ್ಯತ್ಯಯ ಎದುರಿಸಲಿದ್ದಾರೆ.

ಸಾರ್ವಜನಿಕರು ಹಾಗೂ ಗ್ರಾಹಕರು ತಮ್ಮ ದೈನಂದಿನ ಗೃಹ ಮತ್ತು ಕಚೇರಿ ಕೆಲಸಗಳನ್ನು ಮುಂಚಿತವಾಗಿಯೇ ಯೋಜಿಸಿಕೊಂಡು, ಬೆಸ್ಕಾಂ ಹಾಗೂ ಕೆಪಿಟಿಸಿಎಲ್ ಸಿಬ್ಬಂದಿಯೊಂದಿಗೆ ಸಹಕರಿಸಬೇಕಾಗಿ ವಿನಂತಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us