
ಬೆಂಗಳೂರು, ಆಗಸ್ಟ್ 28: ನಗರದ ಹಲವು ಭಾಗಗಳಲ್ಲಿ ತ್ರೈಮಾಸಿಕ ನಿರ್ವಹಣೆ ಹಾಗೂ ತುರ್ತು ಕಾಮಗಾರಿಗಳ ಹಿನ್ನೆಲೆಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ನಾಳೆ (ಆ.29) ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM) ತನ್ನ ಅಧಿಕೃತ ಟ್ವಿಟರ್ (X) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.
ಕೆಪಿಟಿಸಿಎಲ್ (KPTCL) ವತಿಯಿಂದ ಕೈಗೊಳ್ಳಲಾಗುತ್ತಿರುವ ಉಪಕೇಂದ್ರಗಳ ನಿರ್ವಹಣಾ ಕಾಮಗಾರಿಯಿಂದಾಗಿ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 4:00 ಗಂಟೆಯವರೆಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ. ರಾಜನಕುಂಟೆ ಹಾಗೂ ಕಾಡುಗೋಡಿ ಉಪಕೇಂದ್ರ ವ್ಯಾಪ್ತಿಯ ಪ್ರದೇಶಗಳಲ್ಲಿ ಪ್ರಮುಖವಾಗಿ ವಿದ್ಯುತ್ ಸ್ಥಗಿತಗೊಳ್ಳಲಿದೆ.
ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯದ ವಿವರ
ಆಗಸ್ಟ್ 29, 2026#Bescom #Poweroutage pic.twitter.com/DXboYEXsic
— Namma BESCOM | ನಮ್ಮ ಬೆಸ್ಕಾಂ (@NammaBESCOM) August 28, 2026
ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಮರಸಂದ್ರ, ಚೆಲ್ಲಹಳ್ಳಿ, ಇಟಗಲ್‌ಪುರ, ದಿಬ್ಬೂರು, ಕಾಕೋಲು, ಬೆಳ್ಳತೂರು, ಕಾಡುಗೋಡಿ, ಚನ್ನಸಂದ್ರ, ಇಮ್ಮಡಿಹಳ್ಳಿ, ಹಗಡೂರು, ಪ್ರಶಾಂತ್ ಲೇಔಟ್ ಹಾಗೂ ವೈಟ್‌ಫೀಲ್ಡ್ ಮುಖ್ಯರಸ್ತೆಯ ಸುತ್ತಮುತ್ತಲಿನ ನಿವಾಸಿಗಳು ಈ ಅವಧಿಯಲ್ಲಿ ವಿದ್ಯುತ್ ವ್ಯತ್ಯಯ ಎದುರಿಸಲಿದ್ದಾರೆ.
ಸಾರ್ವಜನಿಕರು ಹಾಗೂ ಗ್ರಾಹಕರು ತಮ್ಮ ದೈನಂದಿನ ಗೃಹ ಮತ್ತು ಕಚೇರಿ ಕೆಲಸಗಳನ್ನು ಮುಂಚಿತವಾಗಿಯೇ ಯೋಜಿಸಿಕೊಂಡು, ಬೆಸ್ಕಾಂ ಹಾಗೂ ಕೆಪಿಟಿಸಿಎಲ್ ಸಿಬ್ಬಂದಿಯೊಂದಿಗೆ ಸಹಕರಿಸಬೇಕಾಗಿ ವಿನಂತಿಸಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ