
ಬೆಂಗಳೂರು, ಡಿಸೆಂಬರ್ 25: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ವ್ಯಾಪ್ತಿಯಲ್ಲಿ ಇಂದು (ಡಿಸೆಂಬರ್ 26, 2025) ವಿದ್ಯುತ್ ವ್ಯತ್ಯಯ (Power Cut) ಉಂಟಾಗಲಿದೆ. 66/11 ಕೆವಿ ಕಗ್ಗೇನಹಳ್ಳಿ ಸಬ್ಸ್ಟೇಷನ್ ಕೇಬಲ್ ನಿರ್ವಹಣಾ ಕಾರ್ಯ ಹಿನ್ನೆಲೆಯಲ್ಲಿ ಈ ವಿದ್ಯುತ್ ವ್ಯತ್ಯಯ ಸಂಭವಿಸಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಜತೆಗೆ, ಎಕ್ಸ್ ಸಂದೇಶದ ಮೂಲಕವೂ ಮಾಹಿತಿ ನೀಡಿದೆ.
ಬೆಸ್ಕಾಂ ಪ್ರಕಟಣೆಯಲ್ಲಿ ನೀಡಿದ ಮಾಹಿತಿ ಪ್ರಕಾರ, ಡಿಸೆಂಬರ್ 26ರಂದು ಬೆಳಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ. ಕಗ್ಗೇನಹಳ್ಳಿ ಸಬ್ಸ್ಟೇಷನ್ನ 9-7 ಫೀಡರ್ ವ್ಯಾಪ್ತಿಯಲ್ಲಿ ಕೇಬಲ್ ನಿರ್ವಹಣಾ ಕಾರ್ಯ ಕೈಗೊಳ್ಳಲಾಗುತ್ತಿರುವುದರಿಂದ ಈ ಅವಧಿಯಲ್ಲಿ ವಿದ್ಯುತ್ ಪೂರೈಕೆ ಇರದು.
ವಿದ್ಯುತ್ ವ್ಯತ್ಯಯಕ್ಕೆ ಒಳಪಡುವ ಪ್ರದೇಶಗಳಲ್ಲಿ ನಾರ್ಥ್ ಗೇಟ್ 1, 2, 3, ಎಂಬಾಸಿ, ಫೀಲಿಪ್ಸ್ ಕಂಪನಿ, ದ್ವಾರಕನಗರ, ಬಾಬಾನಗರ, ಕಗ್ಗೇನಹಳ್ಳಿ ಸುತ್ತಮುತ್ತಲ ಪ್ರದೇಶಗಳು, ಬಾಗಲೂರು ಕ್ರಾಸ್, ಮಟ್ಟು ಬಾಗಲೂರು ಮುಖ್ಯ ರಸ್ತೆ, ಮಣಿಪಾಲ ಕಾಲೇಜು, BSF, PDMS, ಬಾಗಲೂರು ಕ್ರಾಸ್ ವಿನಾಯಕನಗರ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳು ಸೇರಿವೆ.
ಇದನ್ನೂ ಓದಿ: Viral: ಪವರ್ ಕಟ್ ನೆಪ ಹೇಳಿ ಕಚೇರಿ ಕೆಲಸದಿಂದ ತಪ್ಪಿಸಿಕೊಂಡ ಉದ್ಯೋಗಿಯನ್ನು ತರಾಟೆಗೆ ತೆಗೆದುಕೊಂಡ ಮ್ಯಾನೇಜರ್
ನಿರ್ವಹಣಾ ಕಾರ್ಯ ಪೂರ್ಣಗೊಂಡ ನಂತರ ವಿದ್ಯುತ್ ಸರಬರಾಜು ಪುನಃ ಆರಂಭಿಸಲಾಗುತ್ತದೆ ಎಂದು ಬೆಸ್ಕಾಂ ತಿಳಿಸಿದೆ. ಸಾರ್ವಜನಿಕರು ಅಗತ್ಯ ಮುಂಜಾಗ್ರತೆ ವಹಿಸಿ ಸಹಕರಿಸುವಂತೆ ಬೆಸ್ಕಾಂ ಅಧಿಕಾರಿಗಳು ಮನವಿ ಮಾಡಿದ್ದಾರೆ.
Published On - 2:37 pm, Thu, 25 December 25