Bangalore power cut: ಇಂದು, ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಪವರ್ ಕಟ್

Bangalore power outage: ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಬೆಸ್ಕಾಂ ನಿರ್ವಹಣಾ ಕಾಮಗಾರಿ ಹಾಗೂ ಲೈನ್​ಗಳ ದುರಸ್ತಿ ಕಾರ್ಯ ಚುರುಕುಗೊಳಿಸಿದೆ. ಪರಿಣಾಮವಾಗಿ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಇಂದು ಮತ್ತು ನಾಳೆ (ನವೆಂಬರ್ 29, 30ರಂದು) ಎಲ್ಲೆಲ್ಲಿ ಪವರ್ ಕಟ್ ಇರಲಿದೆ ಎಂಬ ಮಾಹಿತಿ ಇಲ್ಲಿದೆ.

Bangalore power cut: ಇಂದು, ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಪವರ್ ಕಟ್
ಇಂದು, ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಪವರ್ ಕಟ್
Follow us
Ganapathi Sharma
|

Updated on: Nov 29, 2024 | 10:50 AM

ಬೆಂಗಳೂರು, ನವೆಂಬರ್ 29: ತುರ್ತು ನಿರ್ವಹಣಾ ಕಾಮಗಾರಿಯ ಕಾರಣ ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಇಂದು (ನವೆಂಬರ್ 29) ಹಾಗೂ ನಾಳೆ (ನವೆಂಬರ್ 30) ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಬೆಂಗಳೂರು ಪೂರ್ವ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ನವೆಂಬರ್ 28ರಂದು ವಿದ್ಯುತ್ ಕಡಿತ ಮಾಡಲಾಗಿತ್ತು.

ನಾಳೆ ಎಲ್ಲೆಲ್ಲಿ ಪವರ್ ಕಟ್?

ವಿಶ್ವಪ್ರಿಯ ಲೇಔಟ್, ಬೇಗೂರು ಕೊಪ್ಪ ರಸ್ತೆ, ದೇವರಚಿಕ್ಕನಹಳ್ಳಿ, ಅಕ್ಷಯ ನಗರ, ತೇಜಸ್ವಿನಿ ನಗರ, ಹಿರಾ ನಂದಿನಿ ಅಪಾರ್ಟ್‌ಮೆಂಟ್ ಸೇರಿದಂತೆ ಸುತ್ತಮುತ್ತಲ ಕೆಲವು ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆವರೆಗೆ ಪವರ್ ಕಟ್ ಇರಲಿದೆ. ಬಾಗ್ಮನೆ ಟೆಕ್ ಪಾರ್ಕ್, ಜಿ.ಎಂ.ಪಾಳ್ಯ, ಕೃಷ್ಣಪ್ಪ ಗಾರ್ಡನ್ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಇಂದು ಎಲ್ಲೆಲ್ಲಿ ಪವರ್ ಕಟ್?

ಕೊಟ್ಟೂರು ರಸ್ತೆ, ಕೆಎಚ್‌ ಬಿ ಕಾಲೊನಿ, ಎಪಿಎಂಸಿ ಮಾರ್ಗದಲ್ಲಿನ.29 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಾಶ್ ಪತ್ತೇನೂ‌ರ್ ತಿಳಿಸಿದ್ದಾರೆ. ವಿದ್ಯುತ್ ಬಳಕೆದಾರರು ಸಹಕರಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಈ ರೈಲುಗಳು ಭಾಗಶಃ ರದ್ದು, ತಿರುಪತಿ-ಹುಬ್ಬಳ್ಳಿ ರೈಲು ಸಂಖ್ಯೆ ಬದಲು; ಇಲ್ಲಿದೆ ವಿವರ

ತುಮಕೂರಿನಲ್ಲಿಯೂ ಪವರ್ ಕಟ್

ನವೆಂಬರ್ 30ರಂದು ಬೆಸ್ಕಾಂ ಕ್ಯಾತ್ಸಂದ್ರ ಉಪ ವಿಭಾಗ ವ್ಯಾಪ್ತಿಯಲ್ಲಿ ಕಾಮಗಾರಿ ಕೈಗೊಂಡಿದ್ದು, ಹೊಳಕಲ್ಲು, ನರುಗನಹಳ್ಳಿ, ಪಂಡಿತನಹಳ್ಳಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ಮಾರ್ಗದಲ್ಲಿ ನ.29 ಹಾಗೂ ನ. 30ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್