Bangalore Power Cut Today: ಬೆಂಗಳೂರಿನ ಈ ಪ್ರದೇಶಗಳಲ್ಲಿಂದು ಪವರ್ ಕಟ್; ಬೆಸ್ಕಾಂ ಮಾಹಿತಿ

ಬೆಂಗಳೂರು ಪವರ್ ಕಟ್: ಬೆಸ್ಕಾಂ ಇಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಘೋಷಿಸಿದೆ. ಹೆಣ್ಣೂರು ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನವೆಂಬರ್ 13 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 3:30 ರವರೆಗೆ ಪವರ್ ಕಟ್ ಇರಲಿದೆ. ಆವರ್ತಕ ನಿರ್ವಹಣೆ ಕಾರಣಕ್ಕೆ ವಿದ್ಯುತ್ ಕಡಿತ ಮಾಡಲಾಗುತ್ತಿದೆ ಎಂದು ಬೆಸ್ಕಾಂ ತಿಳಿಸಿದೆ.

Bangalore Power Cut Today: ಬೆಂಗಳೂರಿನ ಈ ಪ್ರದೇಶಗಳಲ್ಲಿಂದು ಪವರ್ ಕಟ್; ಬೆಸ್ಕಾಂ ಮಾಹಿತಿ
ಬೆಂಗಳೂರು ಪವರ್ ಕಟ್ (ಸಾಂದರ್ಭಿಕ ಚಿತ್ರ)
Follow us
ಗಣಪತಿ ಶರ್ಮ
|

Updated on: Nov 13, 2024 | 8:59 AM

ಬೆಂಗಳೂರು, ನವೆಂಬರ್ 13: ಬೆಂಗಳೂರು ನಗರದ ಹಲವೆಡೆ ಇಂದು (ಬುಧವಾರ, ನವೆಂಬರ್ 13) ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. 66/11 ಕೆವಿ ಹೆಣ್ಣೂರು ರಸ್ತೆ ಎಂಯುಎಸ್‌ಎಸ್‌ನಲ್ಲಿ ಆವರ್ತಕ ನಿರ್ವಹಣೆಗಾಗಿ ಕೆಲವು ಪ್ರದೇಶಗಳಲ್ಲಿ ಬುಧವಾರ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 3.30 ರ ನಡುವೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದ್ದು, ಪ್ರದೇಶಗಳ ವಿವರ ನೀಡಿದೆ.

ಹೆಣ್ಣೂರು ಬಂಡೆ, ಸಮುದ್ರಿಕಾ ಎನ್‌ಕ್ಲೇವ್, ಗ್ರೇಸ್ ಗಾರ್ಡನ್, ಕ್ರಿಸ್ತು ಜಯಂತಿ ಕಾಲೇಜು, ಕೆ ನಾರಾಯಣಪುರ, ಬಿಳಿಶಿವಾಲೆ, ಆಶಾ ಟೌನ್‌ಶಿಪ್, ಐಶ್ವರ್ಯ ಲೇಔಟ್, ಮಾರುತಿ ಟೌನ್‌ಶಿಪ್, ನಗರಗಿರಿ ಟೌನ್‌ಶಿಪ್, ಕೆ ನಾರಾಯಣಪುರ ಕ್ರಾಸ್, ಬಿಡಿಎಸ್ ಗಾರ್ಡನ್, ಕೊತ್ತನೂರು, ಪಟೇಲ್ ರಾಮಯ್ಯ ಲೇಔಟ್, ಆಂಜನಪ್ಪ ಜಿ. ಕ್ರಾಸ್, ಬೈರತಿ ಗ್ರಾಮ, ಎವರ್​ಗ್ರೀನ್ ಲೇಔಟ್, ಕನಕಶ್ರೀ ಲೇಔಟ್, ಗೆದ್ದಲಹಳ್ಳಿ, ಬ್ಲೆಸ್ಸಿಂಗ್ ಗಾರ್ಡನ್, ಮಂತ್ರಿ ಅಪಾರ್ಟ್‌ಮೆಂಟ್, ಹಿರೇಮಠ ಲೇಔಟ್, ಟ್ರಿನಿಟಿ ಫಾರ್ಚೂನ್, ಮೈಕಲ್ ಸ್ಕೂಲ್, ಬಿಎಚ್‌ಕೆ ಇಂಡಸ್ಟ್ರೀಸ್, ಜಾನಕಿರಾಮ್ ಲೇಔಟ್, ವಡ್ಡರಪಾಳ್ಯ, ಅನುಗ್ರಹ ಲೇಔಟ್, ದೋಡ್ಆರ್‌ಸಿ ವಿದ್ಯಾನಗರ, ಕಾವೇರಿ ಲೇಔಟ್, ಕಾವೇರಿ, ಅತ್ತೂರು ಕುವೆಂಪು ಲೇಔಟ್, ಸಂಗಮ್ ಎನ್‌ಕ್ಲೇವ್, ಬೈರತಿ ಬಂಡೆ, ನಕ್ಷತ್ರ ಲೇಔಟ್, ತಿಮ್ಮೇಗೌಡ ಲೇಔಟ್, ಆಂಧ್ರ ಕಾಲೋನಿ, ಮಂಜುನಾಥ ನಗರ, ಹೊರಮಾವು ಬಿಬಿಎಂಪಿ, ಅಗರ ಗ್ರಾಮ, ಪಟಾಲಮ್ಮ ದೇವಸ್ಥಾನ, ಎಕೆಆರ್ ಸ್ಕೂಲ್ ನ್ಯೂ ಮಿಲೇನಿಯಂ ಶಾಲೆ, ಲಕ್ಕಮ್ಮ ಲೇಔಟ್, ಪ್ರಕಾಶ್ ಗಾರ್ಡನ್, ಕ್ರಿಶ್ಚಿಯನ್ ಕಾಲೇಜು ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಇರಲಿದೆ.

ನಿರ್ವಹಣೆ ಹಾಗೂ ದುರಸ್ತಿ ಕಾರ್ಯ ನಿಮಿತ್ತ ಮಂಗಳವಾರ ಸಹ ನಗರದ ಅನೇಕ ಕಡೆಗಳಲ್ಲಿ ಪವರ್ ಕಟ್ ಮಾಡಲಾಗಿತ್ತು.

ಬೆಸ್ಕಾಂ ಗ್ರಾಹಕ ಸಂವಾದ

ಗ್ರಾಹಕರ ಕುಂದುಕೊರತೆಗಳನ್ನು ಆಲಿಸಲು ಮತ್ತು ಪರಿಹಾರ ಒದಗಿಸುವುದಕ್ಕಾಗಿ ನವೆಂಬರ್ 16ರಂದು ಎಲ್ಲಾ ಉಪವಿಭಾಗಗಳಲ್ಲಿ ಬೆಸ್ಕಾಂ ‘ಗ್ರಾಹಕ ಸಂವಾದ’ ಏರ್ಪಡಿಸಿದೆ. ಈ ವಿಚಾರವಾಗಿ ಟ್ವೀಟ್ ಮೂಲಕ ಬೆಸ್ಕಾಂ ಮಾಹಿತಿ ನೀಡಿದೆ.

ಇದನ್ನೂ ಓದಿ: ಮಲ್ಲೇಶ್ವರಂ ಕಡಲೆ ಪರಿಷೆಗೆ ದಿನಗಣನೆ: ಈ ಬಾರಿಯ ವಿಶೇಷವೇನು? ಇಲ್ಲಿದೆ ನೋಡಿ

‘ಬೆಸ್ಕಾಂನ ಎಲ್ಲಾ ಉಪವಿಭಾಗಗಳಲ್ಲಿ 2024ರ ನವೆಂಬರ್‌ 16 ರಂದು ಮಧ್ಯಾಹ್ನ 3:00 ರಿಂದ ಸಂಜೆ 5:30 ರವರೆಗೆ ನಡೆಯಲಿರುವ ಗ್ರಾಹಕ ಸಂವಾದ ಸಭೆಯಲ್ಲಿ ಪಾಲ್ಗೊಂಡು ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಬೆಸ್ಕಾಂನ ಅಧಿಕಾರಿಗಳೊಂದಿಗೆ ಮುಖಾಮುಖಿ ಚರ್ಚಿಸಿ ಪರಿಹಾರ ಪಡೆದುಕೊಳ್ಳಿ’ ಎಂದು ಬೆಸ್ಕಾಂ ಗ್ರಾಹಕರಿಗೆ ಮನವಿ ಮಾಡಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

4 ವರ್ಷಗಳ ಬಳಿಕ ವೈಟ್​ಹೌಸ್​ನಲ್ಲಿ ಡೊನಾಲ್ಡ್ ಟ್ರಂಪ್-ಜೋ ಬೈಡೆನ್ ಭೇಟಿ
4 ವರ್ಷಗಳ ಬಳಿಕ ವೈಟ್​ಹೌಸ್​ನಲ್ಲಿ ಡೊನಾಲ್ಡ್ ಟ್ರಂಪ್-ಜೋ ಬೈಡೆನ್ ಭೇಟಿ
ರಿಲ್ಯಾಕ್ಸ್ ಮೂಡ್​ನಲ್ಲಿರುವ ಕಾಡಾನೆ ಹಿಂಡಿನ ದೃಶ್ಯ ಡ್ರೋನ್​ನಲ್ಲಿ ಸೆರೆ​
ರಿಲ್ಯಾಕ್ಸ್ ಮೂಡ್​ನಲ್ಲಿರುವ ಕಾಡಾನೆ ಹಿಂಡಿನ ದೃಶ್ಯ ಡ್ರೋನ್​ನಲ್ಲಿ ಸೆರೆ​
ನನ್ನನ್ನು ಕೆಳಗಿಳಿಸುವ ಪ್ರಯತ್ನಗಳಿಗೆ ಜನರೇ ಉತ್ತರ ನೀಡಬೇಕು: ಸಿದ್ದರಾಮಯ್ಯ
ನನ್ನನ್ನು ಕೆಳಗಿಳಿಸುವ ಪ್ರಯತ್ನಗಳಿಗೆ ಜನರೇ ಉತ್ತರ ನೀಡಬೇಕು: ಸಿದ್ದರಾಮಯ್ಯ
ಜೋಡಿ ಬದಲಾಯಿಸಲು ಅನುಷಾ ರೈಗೆ ಆಫರ್​ ನೀಡಿದ ಬಿಗ್ ಬಾಸ್; ಕಾದಿದೆ ಟ್ವಿಸ್ಟ್
ಜೋಡಿ ಬದಲಾಯಿಸಲು ಅನುಷಾ ರೈಗೆ ಆಫರ್​ ನೀಡಿದ ಬಿಗ್ ಬಾಸ್; ಕಾದಿದೆ ಟ್ವಿಸ್ಟ್
ಕಾಮಗಾರಿಗಳಲ್ಲಿ ಮೀಸಲಾತಿಯ ಬಗ್ಗೆ ಸಿಎಂ ಸ್ಪಷ್ಟನೆ ನೀಡಿದ್ದಾರೆ: ಖರ್ಗೆ
ಕಾಮಗಾರಿಗಳಲ್ಲಿ ಮೀಸಲಾತಿಯ ಬಗ್ಗೆ ಸಿಎಂ ಸ್ಪಷ್ಟನೆ ನೀಡಿದ್ದಾರೆ: ಖರ್ಗೆ
ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುವಾಗಲೇ ಹೃದಯಾಘಾತದಿಂದ ಸಾವು!
ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುವಾಗಲೇ ಹೃದಯಾಘಾತದಿಂದ ಸಾವು!
ಮೈಸೂರಿನ ಎಲ್ಲ ಕಾರ್ಯಕ್ರಮಗಳಲ್ಲಿ ತಂದೆಯನ್ನು ಹಿಂಬಾಲಿಸುತ್ತಿರುವ ಯತೀಂದ್ರ
ಮೈಸೂರಿನ ಎಲ್ಲ ಕಾರ್ಯಕ್ರಮಗಳಲ್ಲಿ ತಂದೆಯನ್ನು ಹಿಂಬಾಲಿಸುತ್ತಿರುವ ಯತೀಂದ್ರ
ಮುಳ್ಳಯ್ಯನಗಿರಿಯಲ್ಲಿ ಎಣ್ಣೆ ಪಾರ್ಟಿ ಮಾಡಿ ಪ್ರವಾಸಿಗರ ಹುಚ್ಚಾಟ
ಮುಳ್ಳಯ್ಯನಗಿರಿಯಲ್ಲಿ ಎಣ್ಣೆ ಪಾರ್ಟಿ ಮಾಡಿ ಪ್ರವಾಸಿಗರ ಹುಚ್ಚಾಟ
ಎಂಟನೇ ತರಗತಿವರೆಗೆ ಓದಿರುವ ಮಗ ಗ್ಯಾರೇಜಲ್ಲಿ ಕೆಲಸ ಮಾಡುತ್ತಾನೆ: ತಾಯಿ
ಎಂಟನೇ ತರಗತಿವರೆಗೆ ಓದಿರುವ ಮಗ ಗ್ಯಾರೇಜಲ್ಲಿ ಕೆಲಸ ಮಾಡುತ್ತಾನೆ: ತಾಯಿ
ಸಂಡೂರಿನ ಸಿದ್ದಾಪುರದಲ್ಲಿ ಪ್ರಜಾಪ್ರಭುತ್ವದ ಹಬ್ಬ, ಊರಹಬ್ಬ ಒಟ್ಟಿಗೆ ಬಂದಿವೆ
ಸಂಡೂರಿನ ಸಿದ್ದಾಪುರದಲ್ಲಿ ಪ್ರಜಾಪ್ರಭುತ್ವದ ಹಬ್ಬ, ಊರಹಬ್ಬ ಒಟ್ಟಿಗೆ ಬಂದಿವೆ