AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿಂದು ಪವರ್ ಕಟ್: ಬೆಸ್ಕಾಂ ನೀಡಿದ ವಿವರ ಇಲ್ಲಿದೆ

ಬೆಂಗಳೂರು ಪವರ್ ಕಟ್: ದೀಪಾವಳಿ ಸಿದ್ಧತೆಯಲ್ಲಿರುವ ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ದುರಸ್ತಿ, ನಿರ್ವಹಣೆ ಕಾಮಗಾರಿಯ ಕಾರಣ ಕೆಲವು ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದ್ದು, ಆ ಬಗ್ಗೆ ಮಾಹಿತಿ ನೀಡಿದೆ. ಪವರ್ ಕಟ್ ಇರುವ ಪ್ರದೇಶಗಳ ವಿವರ ಇಲ್ಲಿದೆ.

Bangalore Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿಂದು ಪವರ್ ಕಟ್: ಬೆಸ್ಕಾಂ ನೀಡಿದ ವಿವರ ಇಲ್ಲಿದೆ
ಪವರ್ ಕಟ್
ಗಣಪತಿ ಶರ್ಮಾ
|

Updated on: Oct 30, 2024 | 6:56 AM

Share

ಬೆಂಗಳೂರು, ಅಕ್ಟೋಬರ್ 30: ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಇಂದು (ಅಕ್ಟೋಬರ್ 30) ವಿದ್ಯುತ್ ಕಡಿತ ಇರಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಬೆಸ್ಕಾಂ ತಿಳಿಸಿದೆ. ಈ ಕುರಿತು ಬೆಸ್ಕಾಂ ಅಧಿಕೃತ ಎಕ್ಸ್​ ಖಾತೆಯಲ್ಲಿ ಸಂದೇಶ ಹಂಚಿಕೊಳ್ಳಲಾಗಿದೆ. ದುರಸ್ತಿ, ನಿರ್ವಹಣೆ ಇತ್ಯಾದಿ ಕಾರಣಗಳಿಂದ ವಿದ್ಯುತ್ ಕಡಿತಗೊಳಿಸಲಾಗುತ್ತಿದೆ ಎಂದು ಬೆಸ್ಕಾಂ ತಿಳಿಸಿದೆ.

ಬೆಂಗಳೂರಿನ ಯಾವೆಲ್ಲ ಪ್ರದೇಶಗಳಲ್ಲಿ ವಿದ್ಯುತ್ ಕಡಿತ?

ಕೆಪಿಟಿಸಿಎಲ್ ಪೂರ್ವಾಂಕರ ಪಾಮ್ ಬೀಚ್ ಸ್ಟೇಷನ್​ನಲ್ಲಿ ತುರ್ತುನಿರ್ವಹಣಾ ಕೆಲಸ ಇರುವುದರಿಂದ ನಗರದ ಕೆಲವು ಸ್ಥಳಗಳಲ್ಲಿ ಬುಧವಾರ ಬೆಳಗ್ಗೆಯಿಂದ ಮಧ್ಯಾಹ್ನ ವರೆಗೆ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಹೇಳಿದೆ. ಹಳೇಹಳ್ಳಿ, ಮಾರ್ಗೊಂಡನಹಳ್ಳಿ, ಗವಿಗುಡಿ, ಕಲ್ಕೆರೆ ರಸ್ತೆ, ಬೈರತಿ ಗ್ರಾಮ, ಕನಕಶ್ರೀ ಲೇಔಟ್, ವಿದ್ಯಾನಗರ, ಕೆಆರ್‌ಸಿಟಿ ಬಸ್ ನಿಲ್ದಾಣ, ಬೈರತಿ, ಗುಬ್ಬಿ ಅಡ್ಡರಸ್ತೆ, ಬೈರತಿ ಬಂಡೆ, ಕ್ಯಾಲಸನಹಳ್ಳಿ, ಪೂರ್ವಾಂಕರ ಆಪಾರ್ಟ್‌ ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ.

ಎಷ್ಟು ಗಂಟೆಗೆ ಪವರ್ ಕಟ್?

ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3.30 ರವರೆಗೆ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಅನಾನುಕೂಲಕ್ಕಾಗಿ ವಿಷಾದಿಸಲಾಗುತ್ತಿದೆ ಎಂದು ಬೆಸ್ಕಾಂ ಹೇಳಿದೆ.

ಇದನ್ನೂ ಓದಿ: ಬಿಜೆಪಿ ಶಾಸಕರಿರುವ ಜಯನಗರ ಕ್ಷೇತ್ರಕ್ಕೆ ಅನುದಾನ ಕೊಡದಿರುವುದಕ್ಕೆ ಕಾರಣ ಕೊಟ್ಟ ಡಿಕೆಶಿ

ಅಕ್ಟೋಬರ್ 29ರಂದು ಬೆಸ್ಕಾಂ ವ್ಯಾಪ್ತಿಯಲ್ಲಿ ಬರುವ ಚಿತ್ರದುರ್ಗ ಜಿಲ್ಲೆಯ ವಿವಿಧೆಡೆ ವಿದ್ಯುತ್ ಕಡಿತ ಮಾಡಲಾಗಿತ್ತು. ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 66/11 ಕೆವಿ ಚಿತ್ರದುರ್ಗದಲ್ಲಿ ಕೇಬಲ್ ಡಕ್ಟ್ ಮತ್ತು ಕೇಬಲ್ ಮರು ವ್ಯವಸ್ಥೆಯ ರಚನೆ ಕಾರ್ಯ ಕೈಗೆತ್ತಿಕೊಂಡಿರುವುದರಿಂದ ಪವರ್ ಕಟ್ ಮಾಡಲಾಗಿತ್ತು. ಚಿತ್ರದುರ್ಗ, ಪಂಡರಹಳ್ಳಿ, ಹಿರೆಗುಂಟನೂರು, ವಿಜಾಪುರ, ಭರಮಸಾಗರ, ಸಿರಿಗೆರೆ, ಮಾಡನಾಯಕನಹಳ್ಳಿ, ತುರುವನೂರು, ಎಚ್.ಡಿ.ಪುರ, ಚಿತ್ರಹಳ್ಳಿ, ಬಾಲೇನಹಳ್ಳಿ, ಹೊಳಲ್ಕೆರೆ ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ಕಡೆಗಳಲ್ಲಿ ಮಂಗಳವಾರ ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ಕಡಿತಗೊಳಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು