AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Power Cut: ನವೆಂಬರ್ 23ರವರೆಗೆ ಬೆಂಗಳೂರಿನ ಈ ಭಾಗಗಳಲ್ಲಿ ವಿದ್ಯುತ್ ಕಡಿತ

ನವೆಂಬರ್ 23ರವರೆಗೆ ಬೆಂಗಳೂರಿನ ಹಲವು ಭಾಗಗಳಲ್ಲಿ ವಿದ್ಯುತ್ ಕಡಿತ ಆಗಲಿದೆ. ಸೋಲದೇವನಹಳ್ಳಿ ಉಪಕೇಂದ್ರದಲ್ಲಿ ಕೆಪಿಟಿಸಿಎಲ್‌ನ ತುರ್ತು ದುರಸ್ತಿ ಕಾರ್ಯದಿಂದಾಗಿ ಈ ವ್ಯತ್ಯಯ ಉಂಟಾಗಿದೆ. ಜಾಲಹಳ್ಳಿ ವಿಭಾಗದ ವ್ಯಾಪ್ತಿಯಲ್ಲಿರುವ ತರಬನಹಳ್ಳಿ, ಚಿಕ್ಕಬಾಣಾವರ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಪ್ರತಿದಿನ ಬೆಳಿಗ್ಗೆ 10:30 ರಿಂದ ರಾತ್ರಿ 8:30 ರವರೆಗೆ ವಿದ್ಯುತ್ ಇರುವುದಿಲ್ಲ. ಸಾರ್ವಜನಿಕರು ವೇಳಾಪಟ್ಟಿ ಪರಿಶೀಲಿಸಿ ಸಹಕರಿಸಲು ಕೋರಲಾಗಿದೆ.

Bangalore Power Cut: ನವೆಂಬರ್ 23ರವರೆಗೆ ಬೆಂಗಳೂರಿನ ಈ ಭಾಗಗಳಲ್ಲಿ ವಿದ್ಯುತ್ ಕಡಿತ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Nov 20, 2025 | 11:54 AM

Share

ಬೆಂಗಳೂರು, ನ.20: ತುರ್ತು ದುರಸ್ತಿ ಮತ್ತು ನಿರ್ವಹಣಾ ಕಾರ್ಯಗಳು ನಡೆಯುತ್ತಿರುವ ಕಾರಣ ಬೆಂಗಳೂರಿನ ಹಲವು ಭಾಗಗಳಲ್ಲಿ ನವೆಂಬರ್ 23 ರವರೆಗೆ ವಿದ್ಯುತ್ ಕಡಿತಗೊಳ್ಳಲಿದೆ (Bangalore Power Cut) ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಹೇಳಿದೆ. ಇದೀಗ ಈ ಬಗ್ಗೆ ಜನರ ಗಮನಕ್ಕೆ ತರಲು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಲಿಮಿಟೆಡ್ (ಕೆಪಿಟಿಸಿಎಲ್) ಸೋಲದೇವನಹಳ್ಳಿ ಉಪ ಕೇಂದ್ರದಲ್ಲಿ ತುರ್ತು ದುರಸ್ತಿ ಮತ್ತು ನಿರ್ವಹಣಾ ಕಾರ್ಯ ನಡೆಯಲಿದೆ. ಈ ಕಾರಣದಿಂದಾಗಿ, ಜಾಲಹಳ್ಳಿ ವಿಭಾಗದ ಎನ್ -9 ಉಪ ವಿಭಾಗದ ವ್ಯಾಪ್ತಿಯ ಅನೇಕ ಪ್ರದೇಶಗಳಲ್ಲಿ ನವೆಂಬರ್ 23 ರವರೆಗೆ ಪ್ರತಿದಿನ ಬೆಳಿಗ್ಗೆ 10:30 ರಿಂದ ರಾತ್ರಿ 8:30 ರವರೆಗೆ ವಿದ್ಯುತ್ ಕಡಿತಗೊಳ್ಳಲಿದೆ ಎಂದು ಹೇಳಿದೆ.

ಇಂದು ವಿದ್ಯುತ್ ವ್ಯತ್ಯಯ ಉಂಟಾಗಲಿರುವ ಪ್ರದೇಶಗಳು

ತರಬನಹಳ್ಳಿ, ಹುರುಳಿಚಿಕ್ಕನಹಳ್ಳಿ, ಟಿಬಿ ಕ್ರಾಸ್, ಹರ್ಷನಘಟ್ಟ, ಬಿಳಿಜಾಜಿ, ದ್ವಾರಕಾನಗರ, ಚಿಕ್ಕಬಾಣಾವರ, ಮಾರುತಿ ನಗರ, ಗಣಪತಿ ನಗರ, ಶಾಂತಿನಗರ, ಬ್ರದರ್ಸ್ ಕಾಲೋನಿ, ಕೃಷ್ಣಾ ಕಾಲೇಜು ರಸ್ತೆ, ರಾಘವೇಂದ್ರ ಲೇಔಟ್, ಸಾಸುವೆಘಟ್ಟ, ಶಿವಕುಮಾರ ಸ್ವಾಮಿಜಿಹಳ್ಳಿ, ಗುಜಪ್ಪ ಸ್ವಾಮೀಜಿ ಲೇಔಟ್, ಶಿವಕುಮಾರ ಸ್ವಾಮೀಜಿ ಲೇಔಟ್, ದ್ಯಾವಕುಮಾರ ಸ್ವಾಮೀಜಿ ಲೇಔಟ್‌ನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ತೋಟಗೆರೆ ಬಸವಣ್ಣ ದೇವಸ್ಥಾನ ಪ್ರದೇಶ, ಹೊಸಹಳ್ಳಿ ಪಾಳ್ಯ, ಸಿಡಿಪಿಒ ಸಮೀಪ, ಡ್ಯಾನಿಶ್ ಫಾರ್ಮ್, ಕೆಎಂಎಫ್ ಪ್ರದೇಶ, ಪಶುಸಂಗೋಪನಾ ಪ್ರದೇಶ, ಗುಣಿ ಅಗ್ರಹಾರ, ಸೋಮಶೀತಿಹಳ್ಳಿ, ಗಾಣಿಗರಹಳ್ಳಿ, ಪೈಪ್‌ಲೈನ್ ರಸ್ತೆ, ಮತ್ತು ಕೆರೆಗುಡ್ಡಹಳ್ಳಿ. ಈ ಪ್ರದೇಶದಲ್ಲಿ ಇಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಹೆಚ್ಚುವರಿಯಾಗಿ, ಹುರುಳಿಚಿಕ್ಕನಹಳ್ಳಿ, ಕೆಟಿಪುರ, ಐಐಎಚ್‌ಆರ್, ಐವರಕೊಂಡಪುರ, ಸೀಟಕೆಂಪನಹಳ್ಳಿ, ಲಿಂಗನಹಳ್ಳಿ, ಮಾದಪ್ಪನಹಳ್ಳಿ, ಕಾಳೇನಹಳ್ಳಿ ಶಿವಕೋಟೆ ಗ್ರಾಮ, ಮಾವಳ್ಳಿಪುರ, ಕೊಂಡಶೆಟ್ಟಿಹಳ್ಳಿ, ಕುರುಬರಹಳ್ಳಿ, ಕುರುಬರಹಳ್ಳಿ ಪಾಕೇಗೌಡನಪಾಳ್ಯ, ಕುರುಬರಹಳ್ಳಿ, ಪಾಕೇಗೌಡನಪಾಳ್ಯ, ಎ. ಅಚ್ಯುತ ನಗರ, ಸೋಲದೇವನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಇದನ್ನೂ ಓದಿ : ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ, ಬೆಂಗಳೂರಿನ ಎಲ್ಲಾ ಕ್ಯಾಬ್​ಗಳಲ್ಲಿ 112 ತುರ್ತು ಸಹಾಯವಾಣಿ ಸ್ಟಿಕ್ಕರ್​ ಅಂಟಿಸಲು ಸೂಚನೆ

ಬೆಂಗಳೂರಿನಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ನವೆಂಬರ್ 21 ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ಕಡಿತಗೊಳ್ಳಲಿದೆ. ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಅಡ್ದೇವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರ, ಕೆಎಂಎಫ್, ಇಟಗಲ್‌ಪುರ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಳು, ಸೊಣ್ಣೇನಹಳ್ಳಿ, ಲಾಯೌಟ್ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.

ಬೆಂಗಳೂರಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ