
ಬೆಂಗಳೂರು, ನ.20: ತುರ್ತು ದುರಸ್ತಿ ಮತ್ತು ನಿರ್ವಹಣಾ ಕಾರ್ಯಗಳು ನಡೆಯುತ್ತಿರುವ ಕಾರಣ ಬೆಂಗಳೂರಿನ ಹಲವು ಭಾಗಗಳಲ್ಲಿ ನವೆಂಬರ್ 23 ರವರೆಗೆ ವಿದ್ಯುತ್ ಕಡಿತಗೊಳ್ಳಲಿದೆ (Bangalore Power Cut) ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಹೇಳಿದೆ. ಇದೀಗ ಈ ಬಗ್ಗೆ ಜನರ ಗಮನಕ್ಕೆ ತರಲು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಲಿಮಿಟೆಡ್ (ಕೆಪಿಟಿಸಿಎಲ್) ಸೋಲದೇವನಹಳ್ಳಿ ಉಪ ಕೇಂದ್ರದಲ್ಲಿ ತುರ್ತು ದುರಸ್ತಿ ಮತ್ತು ನಿರ್ವಹಣಾ ಕಾರ್ಯ ನಡೆಯಲಿದೆ. ಈ ಕಾರಣದಿಂದಾಗಿ, ಜಾಲಹಳ್ಳಿ ವಿಭಾಗದ ಎನ್ -9 ಉಪ ವಿಭಾಗದ ವ್ಯಾಪ್ತಿಯ ಅನೇಕ ಪ್ರದೇಶಗಳಲ್ಲಿ ನವೆಂಬರ್ 23 ರವರೆಗೆ ಪ್ರತಿದಿನ ಬೆಳಿಗ್ಗೆ 10:30 ರಿಂದ ರಾತ್ರಿ 8:30 ರವರೆಗೆ ವಿದ್ಯುತ್ ಕಡಿತಗೊಳ್ಳಲಿದೆ ಎಂದು ಹೇಳಿದೆ.
ತರಬನಹಳ್ಳಿ, ಹುರುಳಿಚಿಕ್ಕನಹಳ್ಳಿ, ಟಿಬಿ ಕ್ರಾಸ್, ಹರ್ಷನಘಟ್ಟ, ಬಿಳಿಜಾಜಿ, ದ್ವಾರಕಾನಗರ, ಚಿಕ್ಕಬಾಣಾವರ, ಮಾರುತಿ ನಗರ, ಗಣಪತಿ ನಗರ, ಶಾಂತಿನಗರ, ಬ್ರದರ್ಸ್ ಕಾಲೋನಿ, ಕೃಷ್ಣಾ ಕಾಲೇಜು ರಸ್ತೆ, ರಾಘವೇಂದ್ರ ಲೇಔಟ್, ಸಾಸುವೆಘಟ್ಟ, ಶಿವಕುಮಾರ ಸ್ವಾಮಿಜಿಹಳ್ಳಿ, ಗುಜಪ್ಪ ಸ್ವಾಮೀಜಿ ಲೇಔಟ್, ಶಿವಕುಮಾರ ಸ್ವಾಮೀಜಿ ಲೇಔಟ್, ದ್ಯಾವಕುಮಾರ ಸ್ವಾಮೀಜಿ ಲೇಔಟ್‌ನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ತೋಟಗೆರೆ ಬಸವಣ್ಣ ದೇವಸ್ಥಾನ ಪ್ರದೇಶ, ಹೊಸಹಳ್ಳಿ ಪಾಳ್ಯ, ಸಿಡಿಪಿಒ ಸಮೀಪ, ಡ್ಯಾನಿಶ್ ಫಾರ್ಮ್, ಕೆಎಂಎಫ್ ಪ್ರದೇಶ, ಪಶುಸಂಗೋಪನಾ ಪ್ರದೇಶ, ಗುಣಿ ಅಗ್ರಹಾರ, ಸೋಮಶೀತಿಹಳ್ಳಿ, ಗಾಣಿಗರಹಳ್ಳಿ, ಪೈಪ್‌ಲೈನ್ ರಸ್ತೆ, ಮತ್ತು ಕೆರೆಗುಡ್ಡಹಳ್ಳಿ. ಈ ಪ್ರದೇಶದಲ್ಲಿ ಇಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಹೆಚ್ಚುವರಿಯಾಗಿ, ಹುರುಳಿಚಿಕ್ಕನಹಳ್ಳಿ, ಕೆಟಿಪುರ, ಐಐಎಚ್‌ಆರ್, ಐವರಕೊಂಡಪುರ, ಸೀಟಕೆಂಪನಹಳ್ಳಿ, ಲಿಂಗನಹಳ್ಳಿ, ಮಾದಪ್ಪನಹಳ್ಳಿ, ಕಾಳೇನಹಳ್ಳಿ ಶಿವಕೋಟೆ ಗ್ರಾಮ, ಮಾವಳ್ಳಿಪುರ, ಕೊಂಡಶೆಟ್ಟಿಹಳ್ಳಿ, ಕುರುಬರಹಳ್ಳಿ, ಕುರುಬರಹಳ್ಳಿ ಪಾಕೇಗೌಡನಪಾಳ್ಯ, ಕುರುಬರಹಳ್ಳಿ, ಪಾಕೇಗೌಡನಪಾಳ್ಯ, ಎ. ಅಚ್ಯುತ ನಗರ, ಸೋಲದೇವನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಇದನ್ನೂ ಓದಿ : ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ, ಬೆಂಗಳೂರಿನ ಎಲ್ಲಾ ಕ್ಯಾಬ್ಗಳಲ್ಲಿ 112 ತುರ್ತು ಸಹಾಯವಾಣಿ ಸ್ಟಿಕ್ಕರ್ ಅಂಟಿಸಲು ಸೂಚನೆ
ನವೆಂಬರ್ 21 ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ಕಡಿತಗೊಳ್ಳಲಿದೆ. ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಅಡ್ದೇವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರ, ಕೆಎಂಎಫ್, ಇಟಗಲ್‌ಪುರ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಳು, ಸೊಣ್ಣೇನಹಳ್ಳಿ, ಲಾಯೌಟ್ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.
ಬೆಂಗಳೂರಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ