ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್​ ಬೆದರಿಕೆ ಪ್ರಕರಣ: ಸಿಕ್ಕಿಬಿದ್ದ ಅಪ್ರಾಪ್ತ ವಿದ್ಯಾರ್ಥಿ, ಚುರುಕುಗೊಂಡ ತನಿಖೆ

ರಾಜಾಜಿನಗರದ ಎನ್​ಪಿಎಸ್ ಶಾಲೆಗೆ ನಿನ್ನೆ(ಜ.6) ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಇದೀಗ ಬೇರೆ ಶಾಲೆಯ ಅಪ್ರಾಪ್ತ ವಿದ್ಯಾರ್ಥಿಯಿಂದ ಸಂದೇಶ ರವಾನೆಯಾಗಿರುವುದು ಬೆಳಕಿಗೆ ಬಂದಿದೆ.

ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್​ ಬೆದರಿಕೆ ಪ್ರಕರಣ: ಸಿಕ್ಕಿಬಿದ್ದ ಅಪ್ರಾಪ್ತ ವಿದ್ಯಾರ್ಥಿ, ಚುರುಕುಗೊಂಡ ತನಿಖೆ
ಎನ್​ಪಿಎಸ್ ಸ್ಕೂಲ್​
Edited By: ಕಿರಣ್ ಹನುಮಂತ್​ ಮಾದಾರ್

Updated on: Jan 07, 2023 | 12:33 PM

ಬೆಂಗಳೂರು: ರಾಜಾಜಿನಗರದ ಎನ್​ಪಿಎಸ್ ಶಾಲೆಗೆ ನಿನ್ನೆ(ಜ.6) ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು, ಇದರಿಂದ ಆತಂಕಗೊಂಡ ಶಾಲಾ ಆಡಳಿತ ಮಂಡಳಿ ಕೂಡಲೇ ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದೀಗ ಬೇರೆ ಶಾಲೆಯ ವಿದ್ಯಾರ್ಥಿ ಗೂಗಲ್​ ಮೂಲಕ ಎನ್​ಎಎಫ್​ಎಲ್​ ಶಾಲೆಯ ಐಡಿಯನ್ನ ಪಡೆದು ಇ-ಮೇಲ್ ಮೂಲಕ​ ಬೆದರಿಕೆ ಸಂದೇಶ ರವಾನಿಸಿರುವ ಅಂಶ ಪತ್ತೆಯಾಗಿದೆ. ಯಾಕೆ ಬೆದರಿಕೆ ಸಂದೇಶ ಕಳುಹಿಸಿದ್ದ ಎಂಬುದರ ಬಗ್ಗೆ ಬಸವೇಶ್ವರನಗರ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಶಾಲೆ ಆವರಣದಲ್ಲಿ 4 ಜಿಲೆಟಿನ್ ಕಡ್ಡಿ ಇಟ್ಟಿರುವುದಾಗಿ ಇ-ಮೇಲ್ ಮಾಡಿದ್ದ ವಿದ್ಯಾರ್ಥಿ, ಬೆಳಗ್ಗೆ 11.30 ಕ್ಕೆ ಮೇಲ್ ನೋಡಿದ ಶಾಲೆ ಸಿಬ್ಬಂದಿ‌, ತಕ್ಷಣ ಬಸವೇಶ್ವರನಗರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅಲ್ಲದೇ ಬಾಂಬ್ ಪತ್ತೆ ದಳ, ಶ್ವಾನ ದಳದಿಂದ ಶಾಲೆಯಲ್ಲಿ ಪರಿಶೀಲನೆ ನಡೆಸಿ, ತಪಾಸಣೆ ನಂತರ ಹುಸಿ ಬೆದರಿಕೆ ಇ-ಮೇಲ್​ ಎಂಬುದು ದೃಢವಾಗಿದ್ದು, ಈ ಬಗ್ಗೆ ಪಶ್ಚಿಮ ವಿಭಾಗ ಪೊಲೀಸರು ತನಿಖೆ ಮುಂದುವರಿಸಿದ್ದರು.

ಇದನ್ನೂ ಓದಿ:Bomb Threat ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್​ ಬೆದರಿಕೆ: ಸ್ಥಳಕ್ಕೆ ಬಾಂಬ್ ಪತ್ತೆ, ಶ್ವಾನ ದಳ ದೌಡು, ಮಕ್ಕಳು ಸುರಕ್ಷಿತ ಸ್ಥಳಕ್ಕೆ

ಬೆಂಗಳೂರಿನಲ್ಲಿ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಬಂದಿರುವುದು ಇದೇ ಮೊದಲಲ್ಲ. ಈ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಮಾಲೀಕತ್ವದ ಬೆಂಗಳೂರಿನ ಆರ್‌ಆರ್ ನಗರದ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್‌ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಬಳಿಕ ಪೊಲೀಸರ ತನಿಖೆ ವೇಳೆ ಅದೇ ಸ್ಕೂಲ್ ನ 10ನೇ ತರಗತಿ ವಿದ್ಯಾರ್ಥಿ ಬೆದರಿಕೆ ಮೇಲ್ ಕಳುಹಿಸಿದ್ದ ಎಂಬುದು ಗೊತ್ತಾಗಿತ್ತು. ಮೇಲ್ ಬಂದ ಐಪಿ ಅಡ್ರೆಸ್ ಜಾಡು ಹಿಡಿದು ವಿದ್ಯಾರ್ಥಿಯ ಕಿಡಿಗೇಡಿತನವನ್ನು ಪೊಲೀಸರು ಪತ್ತೆ ಮಾಡಿದ್ದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ ಮಾಡಿ

TV9 Web

TV9 Kannada

Read More
Loading...
Unable to load recommendations.
Follow Us