Bangalore Rain: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಮಳೆಯ ದರ್ಶನ: ನಗರದ ಹಲವೆಡೆ ಸತತ ಮಳೆ

| Updated By: ಗಂಗಾಧರ​ ಬ. ಸಾಬೋಜಿ

Updated on: Aug 26, 2022 | 7:37 AM

ಕೆ.ಆರ್​ ಮಾರ್ಕೇಟ್, ಕಾರ್ಪೊರೇಷನ್, ಶಾಂತಿನಗರ, ಜಯ ನಗರ, ವಿಜಯನಗರ, ಮಲ್ಲೇಶ್ವರಂ, ಯಶವಂತಪುರ, ರಾಜಾಜಿ ನಗರ, ಎಂ.ಜಿ ರಸ್ತೆ, ಕಬ್ಬನ್ ಪಾರ್ಕ್ ಸೇರಿದಂತೆ ನಗರದ ಹಲವೆಡೆ ಮಳೆ ಶುರುವಾಗಿದೆ.

Bangalore Rain: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಮಳೆಯ ದರ್ಶನ: ನಗರದ ಹಲವೆಡೆ ಸತತ ಮಳೆ
ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಮಳೆ
Follow us on

ಬೆಂಗಳೂರು: ಮಳೆರಾಯ ಬೆಳ್ಳಂಬೆಳಗ್ಗೆ ನಗರದ ಜನತೆಗೆ ದರ್ಶನ ನೀಡಿದ್ದು, ಉದ್ಯಾನ ನಗರಿಯಲ್ಲಿ ಸತತ ಜಿಟಿ ಜಿಟಿ ಮಳೆಯಾಗುತ್ತಿದೆ. ಕೆ.ಆರ್​ ಮಾರ್ಕೇಟ್, ಕಾರ್ಪೊರೇಷನ್, ಶಾಂತಿನಗರ, ಜಯ ನಗರ, ವಿಜಯನಗರ, ಮಲ್ಲೇಶ್ವರಂ, ಯಶವಂತಪುರ, ರಾಜಾಜಿ ನಗರ, ಎಂ.ಜಿ ರಸ್ತೆ, ಕಬ್ಬನ್ ಪಾರ್ಕ್ ಸೇರಿದಂತೆ ನಗರದ ಹಲವೆಡೆ ಮಳೆ ಶುರುವಾಗಿದೆ. ಹೀಗಾಗಿ ಮಳೆಯಿಂದಾಗಿ ಜನರು, ಬೈಕ್​ ಸವಾರರು ಪರದಾಡುವಂತ್ತಾಗಿದ್ದು, ಮಳೆಗೆ ಹಿಡಿಶಾಪ ಹಾಕುತ್ತಿದ್ದಾರೆ. ಇಂದು ಬೆಳ್ಳಗೆಯಿಂದಲೇ ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆ ಆರಂಭವಾಗಿದ್ದು, ಸತತ ಸುರಿಯುತ್ತಿರುವ ಮಳೆಯಿಂದಾಗಿ ಆಫೀಸು, ಅಂಗಡಿಗಳಿಗೆ ಹೋಗುವ ಬೈಕ್ ಸವಾರರು ಪರದಾಡುವಂತ್ತಾಗಿದೆ.

ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಕಳೆದ 5 ದಿನಗಳಿಂದ ಕರ್ನಾಟಕದಲ್ಲಿ ಚದುರಿದಂತೆ ಮಳೆಯಾಗುತ್ತಿದೆ. ಇನ್ನು ಒಂದು ವಾರ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ. ಇಂದಿನಿಂದ ಆಗಸ್ಟ್​ 31ರವರೆಗೂ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ.

ನೀರಿನ ರಭಸಕ್ಕೆ ಕೊಚ್ಚಿಹೋದ 15 ಸಾವಿರ ಕೋಳಿಗಳು

ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದ್ದು, ಕೆರೆಕೋಡಿ ಬಿದ್ದು ಕೋಳಿಫಾರಂಗೆ ಕೆರೆ ನೀರು ನುಗ್ಗಿರುವಂತಹ ಘಟನೆ ಚೋಳಶೆಟ್ಟಿಹಳ್ಳಿಯ ನಾಯನಕೆರೆನಲ್ಲಿ ನಡೆದಿದೆ. ಎನ್.ಲಕ್ಷ್ಮೀನಾರಾಯಣರೆಡ್ಡಿ ಎಂಬುವವರಿಗೆ ಕೋಳಿಫಾರಂ ಸೇರಿದ್ದು, ನೀರಿನ ರಭಸಕ್ಕೆ 15 ಸಾವಿರ ಕೋಳಿಗಳು ಕೊಚ್ಚಿಹೋಗಿವೆ.

ಇದನ್ನೂ ಓದಿ: Karnataka Rain: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಆ. 31ರವರೆಗೂ ಭಾರೀ ಮಳೆ

ಇಂದು ಯಾವ ರಾಜ್ಯಗಳಲ್ಲಿ ಮಳೆ?:

ಮುಂದಿನ ಮೂರು ದಿನಗಳ ಕಾಲ ಒಡಿಶಾ, ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ, ಉತ್ತರ ಪ್ರದೇಶ, ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ ಸೇರಿದಂತೆ ಹಲವು ರಾಜ್ಯಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಗುಜರಾತ್, ಮಧ್ಯಪ್ರದೇಶ, ಉತ್ತರ ಪ್ರದೇಶ, ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಕೇರಳ, ತಮಿಳುನಾಡು, ರಾಜಸ್ಥಾನ ಸೇರಿದಂತೆ 17 ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 7:04 am, Fri, 26 August 22