AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಸಾವು ಪ್ರಕರಣ: ಬಿಬಿಎಂಪಿ ಅಧಿಕಾರಿಗಳ ವಿರುದ್ಧ ದೂರು ದಾಖಲು

ಕೆ.ಆರ್​.ಸರ್ಕಲ್ ಅಂಡರ್ ಪಾಸ್​​ನಲ್ಲಿ ಮಳೆ ನೀರಿಗೆ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಹಲಸೂರು ಗೇಟ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಸಾವು ಪ್ರಕರಣ: ಬಿಬಿಎಂಪಿ ಅಧಿಕಾರಿಗಳ ವಿರುದ್ಧ ದೂರು ದಾಖಲು
ಹಲಸೂರು ಗೇಟ್ ಪೊಲೀಸ್​ ಠಾಣೆ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:May 22, 2023 | 7:32 AM

Share

ಬೆಂಗಳೂರು: ಕೆ.ಆರ್​.ಸರ್ಕಲ್ (KR Cricle) ಅಂಡರ್ ಪಾಸ್​​ನಲ್ಲಿ ಮಳೆ ನೀರಿಗೆ ಇನ್ಫೋಸಿಸ್ (Infosys) ಉದ್ಯೋಗಿ ಭಾನುರೇಖಾ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ (BBMP) ಅಧಿಕಾರಿಗಳ ವಿರುದ್ಧ ಹಲಸೂರು ಗೇಟ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಂಡರ್​ಪಾಸ್​ನಲ್ಲಿ ನೀರು ತುಂಬಿದೆ. ನೀರು ಹೊರ ಹೋಗಲು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲವೆಂದು ಯುವತಿ ಸಹೋದರ ಸಂದೀಪ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಹಿನ್ನೆಲೆ ಐಪಿಸಿ ಸೆಕ್ಷನ್ 304ಎ ಅಡಿಯಲ್ಲಿ ಅಸಹಜ ಸಾವು ಎಂದು ಎಫ್​​ಐಆರ್​​ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕೆ.ಆರ್​.ಸರ್ಕಲ್ ಅಂಡರ್ ಪಾಸ್​​ನಲ್ಲಿ ಸಿಲುಕಿ ಯುವತಿ ಸಾವು

ಭಾನುವಾರ (ಮೇ.21) ರಜಾ ದಿನ ಹಿನ್ನೆಲೆ ಬೆಂಗಳೂರಿನ ಇನ್ಫೋಸಿಸ್​ನ ಉದ್ಯೋಗಿ ಯುವತಿ ಭಾನುರೇಖಾ (22) ಆಂಧ್ರಪ್ರದೇಶದಲ್ಲಿದ್ದ ಕುಟುಂಬಕ್ಕೆ ಬೆಂಗಳೂರು ತೋರಿಸಲು ಕರೆಯಿಸಿಕೊಂಡಿದ್ದರು. ಹೀಗೆ  ಕಬ್ಬನ್ ಪಾರ್ಕ್ ವೀಕ್ಷಣೆ ವೇಳೆ ಮಳೆ ಆರಂಭವಾದ ಹಿನ್ನೆಲೆ ಮನೆಗೆ ವಾಪಸ್ ತೆರಳುತ್ತಿದ್ದರು. ಈ ವೇಳೆ ಕೆಆರ್ ಸರ್ಕಲ್​ ಬಳಿ ಭಾರೀ ಮಳೆಗೆ ಅಂಡರ್​ಪಾಸ್​ನಲ್ಲಿ ನೀರು ತುಂಬಿತ್ತು. ಆದರೆ ಅಂಡರ್​ಪಾಸ್​ನ ಮಟ್ಟ ತಿಳಿಯದೇ ಕಾರು ಚಾಲಕ ನೀರಿನಲ್ಲಿ ಕಾರು ಚಲಾಯಿಸಿದ್ದು, ಮಧ್ಯ ಭಾಗಗಕ್ಕೆ ತಲುಪುತ್ತಿದ್ದಂತೆ ಕಾರು ಮುಳುಗಡೆಯಾಗಿತ್ತು. ಚಾಲಕ ಕಾರನ್ನು ಹಿಂದಕ್ಕೆ ಕೊಂಡೊಯ್ಯಲು ಯತ್ನಿಸಿದರೂ ಸಾಧ್ಯವಾಗದೆ ಕಾರು ಮುಳುಗಡೆಯಾಗಿತ್ತು.

ಇದನ್ನೂ ಓದಿ: ಕೆಲವೇ ಗಂಟೆ ಸುರಿದ ಮಳೆಗೆ ಬೆಂಗಳೂರು ತತ್ತರ; ಎಲ್ಲೆಲ್ಲಿ ಎಷ್ಟು ಪ್ರಮಾಣ ಮಳೆ ಸುರಿದಿದೆ? ಇಲ್ಲಿದೆ ವಿವರ

ಕೂಡಲೇ ಎಚ್ಚೆತ್ತ ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯಕ್ಕೆ ದಾವಿಸಿದ್ದರು. ಘಟನೆ ಬಗ್ಗೆ ಮಾಹಿತಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಕೂಡ ದೌಡಾಯಿಸಿ ಹರಸಾಹಸಪಟ್ಟು ಆರು ಮಂದಿಯನ್ನು ರಕ್ಷಣೆ ಮಾಡಿದ್ದಾರೆ. ಆದರೆ ಈ ವೇಳೆಗಾಗಲೆ ಮಹಿಳೆ ತೀವ್ರ ಅಸ್ವಸ್ಥಗೊಂಡಿದ್ದರು. ಕೂಡಲೆ ಅವರನ್ನು ಹತ್ತಿರದ ಸೆಂಟ್​ ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಆಸ್ಪತ್ರೆ ಸಿಬ್ಬಂದಿ ಆರಂಭದಲ್ಲಿ ಚಿಕಿತ್ಸೆ ನೀಡಲು ನಿರಾಕರಿಸಿದ್ದು, ಸುಮಾರು ಅರ್ಧಗಂಟೆಗಳ ಕಾಲ ಯುವತಿಯನ್ನು ಹೊರಗೆ ಇರಿಸಲಾಗಿತ್ತು. ಪತ್ರಕರ್ತರು ಹಾಗೂ ಸ್ಥಳೀಯರು ತರಾಟೆಗೆ ತೆಗೆದುಕೊಂಡ ನಂತರ ವೈದ್ಯರು ಯುವತಿಯನ್ನು ಆಸ್ಪತ್ರೆಯೊಳಗೆ ಸೇರಿಸಿಕೊಂಡು ಚಿಕಿತ್ಸೆ ನೀಡಲು ಆರಂಭಿಸಿದ್ದರು. ಆದರೆ, ಅಷ್ಟರಾಗಲೇ ಯುವತಿಯ ಜೀವ ಹೋಗಿತ್ತು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:18 am, Mon, 22 May 23

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್