Bangalore Rain: ರಾಜಧಾನಿ ಬೆಂಗಳೂರಿನಲ್ಲಿ ಮಳೆರಾಯನ ಆರ್ಭಟ; ವಾಹನ ಸವಾರರ ಪರದಾಟ
Karnataka Weather Forecast: ಬೆಂಗಳೂರಿನ ಸುತ್ತಮುತ್ತ ಕಳೆದ ಒಂದು ಗಂಟೆಯಿಂದ ಮಳೆ ಸುರಿಯುತ್ತಿದ್ದು ವಾಹನ ಸವಾರರು ಪರದಾಡುತ್ತಿದ್ದಾರೆ.
ಬೆಂಗಳೂರು: ಬಿಸಿಲಿನಿಂದ ಹೈರಾಣಾದ ಜನರಿಗೆ ವರುಣ ತಂಪೆರೆದಿದ್ದಾನೆ(Bengaluru Rain). ಇಂದು ಬೆಂಗಳೂರಿನ ಹಲವು ಕಡೆ ಭಾರೀ ಮಳೆಯಾಗಿದೆ. ಶಾಂತಿನಗರ, ಶಿವಾಜಿನಗರ, ಕೆ.ಆರ್.ವೃತ್ತ, ಮೆಜೆಸ್ಟಿಕ್, ಮಲ್ಲೇಶ್ವರಂ, ಕೆಆರ್ ಮಾರ್ಕೆಟ್, ಕಾರ್ಪೊರೇಷನ್ ಸರ್ಕಲ್, ರಿಚ್ ಮಂಡ್ ಸರ್ಕಲ್, ಸುಮನಹಳ್ಳಿ ಜಂಕ್ಷನ್ ಸೇರಿದಂತೆ ಹಲವೆಡೆ ಕಳೆದ ಒಂದು ಗಂಟೆಯಿಂದ ಮಳೆಯಾಗುತ್ತಿದೆ. ಇನ್ನು ದಿಢೀರ್ ಮಳೆಯಿಂದ ಕೆಲವರು ಖುಷಿ ಪಟ್ಟರೆ, ವಾಹನ ಸವಾರರು ಪರದಾಡುವಂತಾಗಿದೆ. ಬೆಂಗಳೂರಿನಲ್ಲಿ ಇಂದು ಸಂಜೆ, ರಾತ್ರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೊತೆಗೆ ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ(Narendra Modi) ಬೆಂಗಳೂರಿಗೆ ಆಗಮಿಸಲಿದ್ದು ಮೋದಿ ರೋಡ್ ಶೋಗೆ ವರುಣರಾಯ ಅಡ್ಡಿಪಡಿಸುವ ಸಾಧ್ಯತೆ ಇದೆ.
ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
12.40 PM Update:
Heavy showers in Gottigere.
Overhead development. Overall steering seems to be from South to North.#Bangalorerains #bengalururains #KarnatakaRains pic.twitter.com/uH02qnbJ4a
— Namma Weather (@namma_vjy) April 29, 2023
ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ(Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ಶಿವಮೊಗ್ಗ, ರಾಮನಗರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮತ್ತು ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಸುಬ್ರಹ್ಮಣ್ಯ, ಭಾಗಮಂಡಲ, ಶೃಂಗೇರಿ, ಬಾಳೆಹೊನ್ನೂರು, ಉಪ್ಪಿನಂಗಡಿ, ಸುಳ್ಯ, ಹಾರಂಗಿ, ನಿಡಿಗೆ, ಮಾಣಿ, ತ್ಯಾಗರ್ತಿ, ಕಳಸ, ಅಜ್ಜಂಪುರ, ಹಾಸನದಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ರಾತ್ರಿ ವೇಳೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 1:31 pm, Sat, 29 April 23