Bengaluru Rain: ಬೆಂಗಳೂರು ನಗರದ ಹಲವೆಡೆ ಬಿರುಗಾಳಿ ಸಹಿತ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Bangalore Weather Today: ಆನೇಕಲ್​ನಲ್ಲಿಯೂ ಗಾಳಿ ಸಹಿತ, ಗುಡುಗು ಮಳೆ ಕಂಡುಬಂದಿದೆ. ಎಲೆಕ್ಟ್ರಾನಿಕ್ ಸಿಟಿ, ಹೆಬ್ಬಗೋಡಿ, ಚಂದಾಪುರದಲ್ಲಿ ಗಾಳಿ ಮಳೆ ಸುರಿದಿದೆ. ಬಿಸಿಲ ಧಗೆಗೆ ಮಳೆರಾಯ ತಂಪೆರದಿದ್ದಾನೆ. ಅನೀರಿಕ್ಷಿತ ಮಳೆಯಿಂದಾಗಿ ವಾಹನ ಸವಾರರಿಗೆ ಕಿರಿಕಿರಿ ಉಂಟಾಗಿದೆ.

Bengaluru Rain: ಬೆಂಗಳೂರು ನಗರದ ಹಲವೆಡೆ ಬಿರುಗಾಳಿ ಸಹಿತ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Apr 13, 2022 | 6:48 PM

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ನಗರದ ಸುತ್ತಮುತ್ತ ಬಿರುಗಾಳಿ ಸಹಿತ ಮಳೆ ಸುರಿದಿದೆ. ತಕ್ಷಣಕ್ಕೆ ಸುರಿದ ಬಿರುಗಾಳಿ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ ಉಂಟಾಗಿದೆ. ಶಾಂತಿನಗರ, ಕೋರಮಂಗಲ, ಆಡುಗೋಡಿ, ಮೆಜೆಸ್ಟಿಕ್, ಜೆ.ಸಿ. ನಗರ, ಜೆ.ಪಿ. ನಗರ ಸೇರಿದಂತೆ ಹಲವೆಡೆ ಮಳೆ ಸುರಿದಿದೆ. ತಾಪಮಾನ ಏರಿಕೆ ಹಿನ್ನೆಲೆ ಬೇಸತ್ತಿದ್ದ ಜನರು ಬೆಂಗಳೂರಿನಲ್ಲಿ ಮಳೆ ಕಂಡು ಸಂತಸಗೊಂಡಿದ್ದಾರೆ. ಆದರೆ, ಜೋರಾಗಿ ಸುರಿಯುತ್ತಿರುವ ಗಾಳಿ, ಮಳೆಗೆ ವಾಹನ ಸವಾರರು ಅಸ್ತವ್ಯಸ್ತರಾಗಿದ್ದಾರೆ. ಕೆಲವೆಡೆ ರಸ್ತೆಯಲ್ಲೇ ನೀರು ಹರಿಯುತ್ತಿರುವುದರಿಂದ ತೊಂದರೆ ಉಂಟಾಗಿದೆ.

ಆನೇಕಲ್​ನಲ್ಲಿಯೂ ಗಾಳಿ ಸಹಿತ, ಗುಡುಗು ಮಳೆ ಕಂಡುಬಂದಿದೆ. ಎಲೆಕ್ಟ್ರಾನಿಕ್ ಸಿಟಿ, ಹೆಬ್ಬಗೋಡಿ, ಚಂದಾಪುರದಲ್ಲಿ ಗಾಳಿ ಮಳೆ ಸುರಿದಿದೆ. ಬಿಸಿಲ ಧಗೆಗೆ ಮಳೆರಾಯ ತಂಪೆರದಿದ್ದಾನೆ. ಅನೀರಿಕ್ಷಿತ ಮಳೆಯಿಂದಾಗಿ ವಾಹನ ಸವಾರರಿಗೆ ಕಿರಿಕಿರಿ ಉಂಟಾಗಿದೆ. ಅತ್ತಿಗುಪ್ಪೆ ವಾರ್ಡ್ 132ರ ಅತ್ತಿಗುಪ್ಪೆ ಮೆಟ್ರೋ ಸ್ಟೇಷನ್ ಬಳಿ ಧಾರಾಕಾರ ಮಳೆಗೆ ಬೃಹತ್ ಮರವೊಂದು ಉರುಳಿ ಬಿದ್ದಿದೆ. ಮರವನ್ನು ಅರಣ್ಯ ಸಿಬ್ಬಂದಿಗಳು ಹಾಗೂ ಟ್ರಾಫಿಕ್ ಪೋಲಿಸರ ಸಹಾಯದೊಂದಿಗೆ ತೆರವುಗೊಳಿಸಲಾಗಿದೆ.

Tree Fell Down Bengaluru

ಬೆಂಗಳೂರು ಸುತ್ತಮುತ್ತ ಮಾತ್ರವಲ್ಲದೆ ಮಂಡ್ಯ ಜಿಲ್ಲೆಯಲ್ಲಿ ಕೂಡ ಧಾರಾಕಾರ ಮಳೆ ಸುರಿದಿದೆ. ಕಳೆದ ಅರ್ಧ ಗಂಟೆಯಿಂದ ಜಿಲ್ಲೆಯ ಹಲವೆಡೆ ಸುರಿಯುತ್ತಿರುವ ಮಳೆಗೆ ಜನರು ಸಂತಸಗೊಂಡಿದ್ದಾರೆ. ಬಿಸಿಲು, ತಾಪಮಾನ ಹೆಚ್ಚಳದಿಂದ ಬಿಸಿಯಾಗಿದ್ದ ಭೂಮಿಗೆ ಮಳೆರಾಯ ತಂಪೆರದಿದ್ದಾನೆ. ಮಳೆಯಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಆದರೆ, ದಿಢೀರ್ ಮಳೆಯಿಂದ ದ್ವಿಚಕ್ರ ವಾಹನ ಸವಾರರು ಪರದಾಟ ಪಟ್ಟಿದ್ದಾರೆ.

ಚಾಮರಾಜನಗರದಲ್ಲಿ ಧಾರಕಾರ ಮಳೆ ಸುರಿದು ಜಿಲ್ಲಾಡಳಿತ ಭವನದ ರಸ್ತೆ ಕೆರೆಯಂತಾಗಿದೆ. ಸತತ ಎರಡು ಗಂಟೆಗಳ ಮಳೆ ಸುರಿದಿದೆ. ಚಾಮರಾಜನಗರದ ಬಿ ರಾಚಯ್ಯ ಜೋಡಿ ರಸ್ತೆ ನೀರಿನಿಂದ ಆವೃತ್ತಿಯಾಗಿದೆ. ಒಳಚರಂಡಿ ಅವ್ಯವಸ್ಥೆಯಿಂದ ರಸ್ತೆಗೆ ಮಳೆ ನೀರು ಹರಿಯುತ್ತಿದೆ. ಜೋಡಿ ರಸ್ತೆಯಲ್ಲಿ‌ ಚಲಿಸಲು ವಾಹನ ಸವಾರರು ಹೈರಾಣಾಗಿದ್ದಾರೆ. ಜಿಲ್ಲಾಡಳಿತ ಭವನದ ರಸ್ತೆಯಲ್ಲಿ ಕೊಳಚೆ ನೀರು ಹರಿಯುತ್ತಿದೆ. ಕೆಎಸ್​ಆರ್​​ಟಿಸಿ ಬಸ್ ನಿಲ್ದಾಣದಲ್ಲೂ ಮಳೆ ನೀರು ತುಂಬಿ ಹರಿದಿದೆ.

ಸಿಡಿಲು ಬಡಿದು ಇಬ್ಬರು ಯುವಕರ ದುರ್ಮರಣವನ್ನಪ್ಪಿದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಬಸವನಪುರ ಗ್ರಾಮದ ಬಳಿ ಭಾರೀ ಮಳೆಯಿಂದ ರಕ್ಷಣೆಗಾಗಿ ಗ್ರಾಮದ ಬಸ್ ತಂಗುದಾಣದ ಕಟ್ಟಡದಲ್ಲಿ ನಿಂತಿದ್ದ ಯುವಕರು ಮೃತಪಟ್ಟಿದ್ದಾರೆ. ಬಸವನಪುರದ ಉದಯ್ ಕುಮಾರ್ (24) ಸೂಸಲಗೆರೆ ಗ್ರಾಮದ ದರ್ಶನ್ (19) ಮೃತ ಯುವಕರು. ಮಳೆಯಿಂದ ರಕ್ಷಣೆಗಾಗಿ ನಿಂತಿದ್ದಾಗ ಸಿಡಿಲು ಬಡಿದು ಯುಕರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನುಗ್ಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇನ್ನೆರಡು ದಿನ ಚದುರಿದ ಮಳೆ; ಕೇರಳದಲ್ಲಿ ಹಳದಿ ಅಲರ್ಟ್​ ಘೋಷಣೆ

ಇದನ್ನೂ ಓದಿ: Bengaluru Crime: ಗೆಳತಿಯ ಅಣ್ಣನಿಂದ ಬೆಂಗಳೂರಿನ ಬಾಲಕಿ ಮೇಲೆ ಅತ್ಯಾಚಾರ; ವಿಡಿಯೋ ಮಾಡಿಕೊಂಡು ಬ್ಲಾಕ್​ಮೇಲ್

Published On - 5:02 pm, Wed, 13 April 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್