Bangalore Rain: ಮತ್ತೆ ರಾಜಧಾನಿಗೆ ಎಂಟ್ರಿ ಕೊಟ್ಟ ವರುಣ -ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಮಳೆ ಸಾಧ್ಯತೆ
Bengaluru Karnataka Weather: ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮಳೆ ಸಾಧ್ಯತೆಯಿದೆ.
ಬೆಂಗಳೂರು: ನಗರದಲ್ಲಿ ಮಳೆರಾಯನ ಆರ್ಭಟ ಶುರುವಾಗಿದ್ದು, (Bangalore Rain) ಮತ್ತೆ ರಾಜಧಾನಿಗೆ ವರುಣ ಎಂಟ್ರಿ ಕೊಟ್ಟಿದ್ದಾನೆ. ಮೊನ್ನೆಯಷ್ಟೇ ನಗರದಲ್ಲಿ ಮಳೆ ಸುರಿದಿದ್ದು, ಇಂದು ಮತ್ತೆ ಬೆಂಗಳೂರಿನಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ನಗರದ ಜೆ.ಪಿ ನಗರ, ರಾಮಕೃಷ್ಣ ಆಶ್ರಮ, ಲಾಲ್ ಬಾಗ್, ಮಾವಳ್ಳಿ, ಜೆಸಿ ರೋಡ್ ಹಾಗೂ ಟೌನ್ ಹಾಲ್, ಕಾರ್ಪೋರೇಷನ್, ಮೈಸೂರ್ ಬ್ಯಾಂಕ್ ಸರ್ಕಲ್, ಮಾರ್ಕೆಟ್, ವಿಲ್ಸನ್ಗಾರ್ಡನ್, ಕೋರಮಂಗಲ, ಕೆ.ಆರ್.ಮಾರ್ಕೆಟ್, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಸುತ್ತಮುತ್ತ ಜೋರು ಮಳೆಯಾಗಿದೆ. ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ಹರಿಯುತ್ತಿದ್ದು, ವಾಹನ ಸವಾರರು ಪರದಾಡುವಂತ್ತಾಗಿದೆ. ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮಳೆ ಸಾಧ್ಯತೆಯಿದೆ. ಜೊತೆಗೆ ನೈಋತ್ಯ ಮುಂಗಾರು ದುರ್ಬಲವಾಗಿರುವ ಹಿನ್ನೆಲೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ.
ಮಳೆಯಿಂದ ರೈತರ ಮೊಗದಲ್ಲಿ ಸಂತಸ
ಕೋಲಾರದಲ್ಲಿ ಇದ್ದಕ್ಕಿದ್ದಂತೆ ಮಳೆ ಶುರುವಾಗಿದ್ದು, ನಗರ ಸೇರಿದಂತೆ ಹಲವೆಡೆ ಸುಮಾರು ಅರ್ದ ಗಂಟೆಯಿಂದ ಜೋರು ಮಳೆಯಾಗಿದೆ. ಕಳೆದ ಹದಿನೈದು ದಿನಗಳಿಂದ ಬಿಡುವುಕೊಟ್ಟಿದ್ದ ಮಳೆ ಮತ್ತೆ ಅಬ್ಬರಿಸುತ್ತಿದೆ. ಕಳೆದ ಒಂದು ತಿಂಗಳ ಹಿಂದೆ ಅಬ್ಬರಿಸಿ ಬೊಬ್ಬೆರೆದಿದ್ದ ಮಳೆರಾಯ, ನವರಾತ್ರಿ ಆರಂಭಕ್ಕೆ ಮಳೆರಾಯ ಸಿಂಚನವಾಗಿದೆ. ರಾಯಚೂರು ಜಿಲ್ಲೆಯಲ್ಲೂ ಕಳೆದ ಒಂದು ಗಂಟೆಯಿಂದ ಬಾರೀ ಮಳೆ ಸುರಿಯುತ್ತಿದೆ. ಕಳೆದ 15 ದಿನಗಳಿಂದ ವರುಣ ಬಿಡುವು ಕೊಟ್ಟಿದ್ದ. ಇಂದು ಬಾರೀ ಮಳೆಯಿಂದ ರೈತರ ಮೊಗದಲ್ಲಿ ಸಂತಸ ಉಂಟಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 2:48 pm, Mon, 26 September 22