AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain; ಬೆಂಗಳೂರು ನಗರದ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆ, ಸಾರ್ವಜನಿಕರ ಪರದಾಟ

ಬೆಂಗಳೂರು ಮಳೆ; ಮಳೆಯಿಂದಾಗಿ ರಸ್ತೆಗಳು ಜಾಲಾವೃತಗೊಂಡಿದ್ದು, ಬೈಕ್ ಸವಾರರು ನೀರು ತುಂಬಿದ ರಸ್ತೆಗಳಲ್ಲಿ ಸಂಚರಿಸಲು ಹರಸಾಹಸ ಪಡುತ್ತಿದ್ದಾರೆ. ಸಂಜೆಯ ಮಳೆಯಿಂದಾಗಿ ದ್ವಿಚಕ್ರ ವಾಹನ ಸಾವರಿಗೆ ಸಮಸ್ಯೆಯಾಗಿದ್ದು, ಗಾಳಿ ಸಹಿತ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ಹರಿಯುತ್ತಿದೆ. 

Bengaluru Rain; ಬೆಂಗಳೂರು ನಗರದ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆ, ಸಾರ್ವಜನಿಕರ ಪರದಾಟ
ಬೆಂಗಳೂರು ನಗರದ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆ
TV9 Web
| Edited By: |

Updated on:May 03, 2022 | 7:46 PM

Share

ಬೆಂಗಳೂರು: ರಾಜ್ಯ ರಾಜ್ಯಧಾನಿಯಲ್ಲಿ ಇಂದು ನಗರದ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಶುರುವಾಗಿದ್ದು, ಶಾಂತಿನಗರ, ಕಾರ್ಪೋರೇಷನ್, ಮೈಸೂರು ರೋಡ್, ವಿಧಾನಸೌಧ, ಶಿವಾಜಿನಗರ, ಕಾಡುಗೋಡಿ, ಹೆಬ್ಬಾಳ, ಕೋರಮಂಗಲ ಸೇರಿದಂತೆ ಹಲವೆಡೆ ಧಾರಾಕಾರ ಮಳೆ ಆಗುತ್ತಿದ್ದು, ಮಳೆಯಿಂದ ಬೈಕ್ ಸವಾರರು ಮತ್ತು ರಸ್ತೆ ಬದಿ ವ್ಯಾಪಾರಿಗಳು ಪರದಾಡುವಂತ್ತಾಗಿದೆ. ಹಲವೆಡೆ ಮಳೆಯಿಂದಾಗಿ ಟ್ರಾಫಿಕ್​ ಜಾಮ್​ ಉಂಟಾಗಿ ಸವಾರರು ಪರದಾಡುತ್ತಿದ್ದಾರೆ. ಮಳೆಯಿಂದಾಗಿ ರಸ್ತೆಗಳು ಜಾಲಾವೃತಗೊಂಡಿದ್ದು, ಬೈಕ್ ಸವಾರರು ನೀರು ತುಂಬಿದ ರಸ್ತೆಗಳಲ್ಲಿ ಸಂಚರಿಸಲು ಹರಸಾಹಸ ಪಡುತ್ತಿದ್ದಾರೆ. ಸಂಜೆಯ ಮಳೆಯಿಂದಾಗಿ ದ್ವಿಚಕ್ರ ವಾಹನ ಸಾವರಿಗೆ ಸಮಸ್ಯೆಯಾಗಿದ್ದು, ಗಾಳಿ ಸಹಿತ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ಹರಿಯುತ್ತಿದೆ.

ಕರ್ನಾಟಕದಾದ್ಯಂತ ಇಂದು ಗುಡುಗು ಸಹಿತ ಮಳೆ ಸಾಧ್ಯತೆ; ಮೇ 5ರಿಂದ ಇನ್ನೂ ಹೆಚ್ಚಲಿದೆ ವರುಣನ ಅಬ್ಬರ

ಕರ್ನಾಟಕದಲ್ಲಿ ಮಳೆಯ (Rain in Karnataka) ಆರ್ಭಟ ಹೆಚ್ಚಾಗುತ್ತಿದೆ. ಮುಂದಿನ ತಿಂಗಳಿನಿಂದ ಮಾನ್ಸೂನ್ (Monsoon) ಶುರುವಾಗುವ ಹಿನ್ನೆಲೆಯಲ್ಲಿ ಈಗಾಗಲೇ ಬೆಂಗಳೂರು, ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ಕರ್ನಾಟಕದ ಹಲವೆಡೆ 2 ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಇನ್ನೆರಡು ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ಕೊಟ್ಟಿದೆ. ಕರ್ನಾಟಕದಾದ್ಯಂತ ಹಲವೆಡೆ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಮೇ 5ರ ನಂತರ ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವಡೆ ಸಾಧಾರಣ ಮಳೆಯಾದರೆ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಮೇ 5ರಿಂದ ಕರಾವಳಿ ಹಾಗೂ ಉತ್ತರ ಒಳನಾಡಿಗಿಂತ ದಕ್ಷಿಣ ಒಳನಾಡಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ. ಭಾನುವಾರ ಬೆಂಗಳೂರಿನಲ್ಲಿ ಸುರಿದ ಆಲಿಕಲ್ಲು, ಗುಡುಗು, ಮಿಂಚು ಸಹಿತ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿತ್ತು. ಮೇ 5ರಿಂದ ಬೆಂಗಳೂರಿನಲ್ಲಿ ಮತ್ತೆ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ.

ಕರ್ನಾಟಕ ಮಾತ್ರವಲ್ಲದೆ ಇಂದು ಅಸ್ಸಾಂ ಮತ್ತು ಮೇಘಾಲಯ ಮತ್ತು ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ ಮತ್ತು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಗುಡುಗು ಸಹಿತ ವ್ಯಾಪಕ ಮಳೆ ಅಥವಾ ಹಿಮ ಬೀಳುವ ಸಾಧ್ಯತೆ ಇದೆ

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ, ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:00 pm, Tue, 3 May 22

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ