AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Rain: ಕೊನೆಗೂ ಬೆಂಗಳೂರಿನ ಕೆಲವೆಡೆ ತುಂತುರು ಮಳೆ, ಹಲವೆಡೆ ಮೋಡ ಕವಿದ ವಾತಾವರಣ

Bengaluru Weather Update: ಬಿರು ಬಿಸಿಲಿಗೆ ಬೆವತು ಸಾಕಪ್ಪಾ ಸಾಕು ಈ ಸೆಕೆ ಎನ್ನುತ್ತಿರುವ ಬೆಂಗಳೂರಿಗರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಬೆಂಗಳೂರು ನಗರದ ಕೆಲವು ಕಡೆಗಳಲ್ಲಿ ತುಂತೂರು ಮಳೆಯಾಗಿದೆ. ಇನ್ನು ಉಳಿದೆಡೆ ಮೋಡಕವಿದ ವಾತಾವರಣವಿದ್ದು, ಕೂಲ್​ ಕೂಲವ ವಾತಾವರಣ ಇದೆ. ಈ ಹಿನ್ನೆಲೆಯಲ್ಲಿ ಜನರು ಮಳೆಯಾಗುವ ಆಶಾಭಾವನೆಯಲ್ಲಿದ್ದಾರೆ.

Bangalore Rain: ಕೊನೆಗೂ ಬೆಂಗಳೂರಿನ ಕೆಲವೆಡೆ ತುಂತುರು ಮಳೆ, ಹಲವೆಡೆ ಮೋಡ ಕವಿದ ವಾತಾವರಣ
ಪ್ರಾತಿನಿಧಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on:Apr 19, 2024 | 8:32 PM

Share

ಬೆಂಗಳೂರು, (ಏಪ್ರಿಲ್ 19): ಬಿರು ಬಿಸಿಲಿನಿಂದ ಪರಿತಪಿಸುತ್ತಿದ್ದ ಇಡೀ ಕರುನಾಡಿಗೆ ಮಳೆರಾಯ (Rain in karnataka) ತಂಪೆರೆದಿದ್ದಾನೆ. ಕಳೆದ ನಾಲ್ಕೈದು ದಿನಗಳಿಂದ ರಾಜ್ಯದ ವಿವಿದೆಡೆ ಮಳೆಯಾಗುತ್ತಿದೆ. ಇದರಿಂದ ಸಾರ್ವಜನಿಕರು ಸಂತಸಗೊಂಡಿದ್ದಾರೆ. ಇನ್ನು ಬೆಂಗಳೂರಿಗರಿಗೂ ಸಹ ಮಳೆ ಸಿಂಚನ ಗೈದಿದೆ. ಹೌದು… ಸುಮಾರು ನಾಲ್ಕೈದು ತಿಂಗಳ ಬಳಿಕ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ  ವರ್ಷದ ಮೊದಲ ಮಳೆಯಾಗಿದೆ. ಇಂದು (ಏಪ್ರಿಲ್ 19) ನಗರದ ಯಲಹಂಕ, ಕೆಂಗೇರಿ ಸೇರಿದಂತೆ ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗಿದೆ ಎಂದು ವರದಿಯಾಗಿದೆ. ಈ ಮೂಲಕ ಬಿಸಿಲಿನಿಂದ ಕಂಗೆಟ್ಟಿದ್ದ ಬೆಂಗಳೂರಿಗೆ ಮಳೆ ಕೊಂಚ ತಂಪೆರೆದಿದೆ. ಇನ್ನು ಉಳಿದ ಕಡೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆಯಾಗಬಹುದೆಂಬ ನಿರೀಕ್ಷೆಯಲ್ಲಿ ಜನರು ಇದ್ದಾರೆ.

ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ಇನ್ನು ಇಂದು ಕೂಡ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇದರ ಜೊತೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮೇನಲ್ಲಿ ಬೆಂಗಳೂರಿನಲ್ಲಿ ಮಳೆ

ನಗರದಲ್ಲಿ ಅಲ್ಲಲ್ಲಿ ತುಂತೂರು ಮನೆ ಆಗಿದೆ. ಆದರೆ, ಬಟ್ಟೆ ತೊಯ್ಯದಷ್ಟು ಮಳೆಯಾಗಿದೆ. ಇನ್ನು  ಜೋರಾಗಿ ಮಳೆ ಬರಬೇಕಂದರೆ ಮೇ ವರೆಗೂ ಕಾಯಬೇಕೆಂದು ಹವಾಮಾನ ವರದಿ ತಿಳಿಸಿದೆ. ಏಪ್ರಿಲ್ ನಲ್ಲಿ (april) ಮಳೆಯಾಗುವ ನಿರೀಕ್ಷೆ ಇತ್ತು. ಆದರೆ ಇದೀಗ ಭಾರತೀಯ ಹವಾಮಾನ ಇಲಾಖೆಯು  ಏಪ್ರಿಲ್‌ನಲ್ಲಿ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗುವುದಿಲ್ಲ (Weather Report) ಎಂದು ಹೇಳಿದೆ.

ಬೆಂಗಳೂರಿನಲ್ಲಿ ಶುಷ್ಕ ಸ್ಪೆಲ್‌ಗಳು ಸುಮಾರು 100- 120 ದಿನಗಳವರೆಗೆ ಇರುತ್ತದೆ. ಆದರೆ ಇದು ಸಾಮಾನ್ಯಕ್ಕಿಂತ ಹೆಚ್ಚು ದೀರ್ಘವಾಗಿದೆ. ಆರಂಭದಲ್ಲಿ ಭಾರತೀಯ ಹವಾಮಾನ ಇಲಾಖೆಯು ವಾರದೊಳಗೆ ಬೆಂಗಳೂರಿಗೆ ಮಳೆಯಾಗುವ ಮುನ್ಸೂಚನೆ ನೀಡಿತು. ಆದರೆ ಇತ್ತೀಚಿನ ವರದಿ ವರದಿ ಪ್ರಕಾರ ತೀವ್ರವಾದ ಶಾಖದ ಕಾರಣದಿಂದ ಶೀಘ್ರದಲ್ಲಿ ಮಳೆಯಾಗುವುದು ಸಾಧ್ಯತೆಗಳು ಕಡಿಮೆ ಇದೆ ಎನ್ನಲಾಗಿದೆ. ಮಳೆ ಇವತ್ತು ಬರುತ್ತೆ, ನಾಳೆ ಬರುತ್ತೆ, ಮುಂದಿನ ವಾರ ಬರುತ್ತೆ ಎಂದು ಜನರು ಈಗಾಗಲೇ ಮೂರು ತಿಂಗಳು ಕಳೆದಿದ್ದಾರೆ. ಇನ್ನೇನು ಏಪ್ರಿಲ್ ತಿಂಗಳು ಮುಗಿಯಲು ಹನ್ನೊಂದು ದಿನಗಳು ಮಾತ್ರ ಬಾಕಿ ಇವೆ. ಆ ಬಳಿಕ ಮೇನಲ್ಲಿ ಮಳೆ ನಿರೀಕ್ಷೆ ಮಾಡಬಹುದಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 6:10 pm, Fri, 19 April 24

Follow Us
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನೇಪಾಳ ಪ್ರವಾಹ: ಸಾವಿನ ದವಡೆಯಿಂದ ಪಾರಾಗಿ 54 ಕನ್ನಡಿಗರು ವಾಪಸ್​​
ನೇಪಾಳ ಪ್ರವಾಹ: ಸಾವಿನ ದವಡೆಯಿಂದ ಪಾರಾಗಿ 54 ಕನ್ನಡಿಗರು ವಾಪಸ್​​
ಇಂದು ಈ ರಾಶಿಯವರು ವ್ಯಾಪಾರ, ವ್ಯವಹಾರಗಳಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ವ್ಯಾಪಾರ, ವ್ಯವಹಾರಗಳಲ್ಲಿ ಜಾಗೃತರಾಗಿರಿ
'ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ'; ಮೋಹನ್ ಭಾಗವತ್
'ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ'; ಮೋಹನ್ ಭಾಗವತ್