Bangalore Rains: ಭಾರೀ ಮಳೆ, ಕಟ್ಟೆಚ್ಚರ ವಹಿಸಲು ಪಾಲಿಕೆ ಅಧಿಕಾರಿಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಬಿಬಿಎಂಪಿ ಅಧಿಕಾರಿಗಳು, ಎಂಜಿನಿಯರ್ಗಳಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bangalore Rains) ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಬಿಬಿಎಂಪಿ ಅಧಿಕಾರಿಗಳು, ಎಂಜಿನಿಯರ್ಗಳಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸೂಚನೆ ನೀಡಿದ್ದಾರೆ. ಮಳೆ ಅನಾಹುತ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಒಂದೊಮ್ಮೆ ಅನಾಹುತಗಳ ಬಗ್ಗೆ ವರದಿಯಾದರೆ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಇದಕ್ಕಾಗಿ ವಾರ್ ರೂಮ್ ಮೂಲಕ ಕಟ್ಟೆಚ್ಚರ ವಹಿಸಬೇಕು. ಸಂಭವನೀಯ ಮಳೆ ಅನಾಹುತಗಳ ಬಗ್ಗೆಯೂ ನಿಗಾ ವಹಿಸಬೇಕು. ಎಲ್ಲೇ ಏನೇ ಅನಾಹುತವಾದರೂ ಸಮಾರೋಪಾದಿಯಲ್ಲಿ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರು ನಾಗರಿಕರಿಗೆ ತೊಂದರೆ ಆಗದಂತೆ ಪೊಲೀಸ್, ಬೆಸ್ಕಾಂ, ಜಲ ಮಂಡಳಿ ಮತ್ತಿತರ ಇಲಾಖೆಗಳ ಜತೆ ಪರಸ್ಪರ ಸಮನ್ವಯ, ಸಹಕಾರ ಸಾಧಿಸಬೇಕು ಎಂದು ಅವರು ಪಾಲಿಕೆ ಹಿರಿಯ ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡಿದ್ದಾರೆ.
ಮತ್ತಷ್ಟು ಓದಿ: Bengaluru Rain: ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ, ಜೆಸಿ ರಸ್ತೆ, ಕಾರ್ಪೊರೇಷನ್ ವೃತ್ತದಲ್ಲಿ ಟ್ರಾಫಿಕ್ ಜಾಮ್
ನಗರದ ಹಲವೆಡೆ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಮಂಗಳವಾರವೂ ನಗರದಾದ್ಯಂತ ಮಧ್ಯಾಹ್ನದಿಂದಲೇ ಭಾರೀ ಮಳೆ ಸುರಿದಿದೆ. ಜೆಸಿ ರಸ್ತೆ, ಕಾರ್ಪೊರೇಷನ್ ವೃತ್ತ, ಶಾಂತಿನಗರ, ಜಯನಗರ, ಕೆಆರ್ ಮಾರುಕಟ್ಟೆ, ವಿಜಯನಗರ, ಮೆಜೆಸ್ಟಿಕ್, ಬನಶಂಕರಿ, ಜೆಪಿನಗರ, ರಾಜಾಜಿನಗರ ಸೇರಿದಂತೆ ಹಲವೆಡೆ ಮಳೆ ಸುರಿದಿದೆ.
ಕಳೆದ ಭಾನುವಾರ ನಗರದಲ್ಲಿ ಸುರಿದಿದ್ದ ಭಾರೀ ಮಳೆಗೆ ಕೆಆರ್ ಸರ್ಕಲ್ ಅಂಡರ್ ಪಾಸ್ನಲ್ಲಿ ಕಾರು ಮುಳುಗಿ ಹೈದರಾಬಾದ್ ಮೂಲದ ಯುವತಿ ಮೃತಪಟ್ಟಿದ್ದರು.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ