Bangalore Rains: ಭಾರೀ ಮಳೆ, ಕಟ್ಟೆಚ್ಚರ ವಹಿಸಲು ಪಾಲಿಕೆ ಅಧಿಕಾರಿಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಬಿಬಿಎಂಪಿ ಅಧಿಕಾರಿಗಳು, ಎಂಜಿನಿಯರ್​​ಗಳಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.

Bangalore Rains: ಭಾರೀ ಮಳೆ, ಕಟ್ಟೆಚ್ಚರ ವಹಿಸಲು ಪಾಲಿಕೆ ಅಧಿಕಾರಿಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ
ಅಧಿಕಾರಿಗಳ ಜತೆ ಡಿಕೆಶಿ ಸಭೆ

Updated on: May 30, 2023 | 8:59 PM

ಮುಖ್ಯಾಂಶಗಳು

  • ಬೆಂಗಳೂರಿನಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ
  • ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಡಿಕೆ ಶಿವಕುಮಾರ್ ಸೂಚನೆ
  • ಎಲ್ಲೇ ಏನೇ ಅನಾಹುತವಾದರೂ ಸಮಾರೋಪಾದಿಯಲ್ಲಿ ಪರಿಹಾರ ಕ್ರಮಕೈಗೊಳ್ಳಲು ನಿರ್ದೇಶನ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bangalore Rains) ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಬಿಬಿಎಂಪಿ ಅಧಿಕಾರಿಗಳು, ಎಂಜಿನಿಯರ್​​ಗಳಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸೂಚನೆ ನೀಡಿದ್ದಾರೆ. ಮಳೆ ಅನಾಹುತ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಒಂದೊಮ್ಮೆ ಅನಾಹುತಗಳ ಬಗ್ಗೆ ವರದಿಯಾದರೆ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಇದಕ್ಕಾಗಿ ವಾರ್ ರೂಮ್ ಮೂಲಕ ಕಟ್ಟೆಚ್ಚರ ವಹಿಸಬೇಕು. ಸಂಭವನೀಯ ಮಳೆ ಅನಾಹುತಗಳ ಬಗ್ಗೆಯೂ ನಿಗಾ ವಹಿಸಬೇಕು. ಎಲ್ಲೇ ಏನೇ ಅನಾಹುತವಾದರೂ ಸಮಾರೋಪಾದಿಯಲ್ಲಿ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು ನಾಗರಿಕರಿಗೆ ತೊಂದರೆ ಆಗದಂತೆ ಪೊಲೀಸ್, ಬೆಸ್ಕಾಂ, ಜಲ ಮಂಡಳಿ ಮತ್ತಿತರ ಇಲಾಖೆಗಳ ಜತೆ ಪರಸ್ಪರ ಸಮನ್ವಯ, ಸಹಕಾರ ಸಾಧಿಸಬೇಕು ಎಂದು ಅವರು ಪಾಲಿಕೆ ಹಿರಿಯ ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡಿದ್ದಾರೆ.

ಮತ್ತಷ್ಟು ಓದಿ: Bengaluru Rain: ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ, ಜೆಸಿ ರಸ್ತೆ, ಕಾರ್ಪೊರೇಷನ್ ವೃತ್ತದಲ್ಲಿ ಟ್ರಾಫಿಕ್ ಜಾಮ್

ನಗರದ ಹಲವೆಡೆ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಮಂಗಳವಾರವೂ ನಗರದಾದ್ಯಂತ ಮಧ್ಯಾಹ್ನದಿಂದಲೇ ಭಾರೀ ಮಳೆ ಸುರಿದಿದೆ. ಜೆಸಿ ರಸ್ತೆ, ಕಾರ್ಪೊರೇಷನ್ ವೃತ್ತ, ಶಾಂತಿನಗರ, ಜಯನಗರ, ಕೆಆರ್​ ಮಾರುಕಟ್ಟೆ, ವಿಜಯನಗರ, ಮೆಜೆಸ್ಟಿಕ್, ಬನಶಂಕರಿ, ಜೆಪಿನಗರ, ರಾಜಾಜಿನಗರ ಸೇರಿದಂತೆ ಹಲವೆಡೆ ಮಳೆ ಸುರಿದಿದೆ.

ಕಳೆದ ಭಾನುವಾರ ನಗರದಲ್ಲಿ ಸುರಿದಿದ್ದ ಭಾರೀ ಮಳೆಗೆ ಕೆಆರ್ ಸರ್ಕಲ್ ಅಂಡರ್​​ ಪಾಸ್​ನಲ್ಲಿ ಕಾರು ಮುಳುಗಿ ಹೈದರಾಬಾದ್ ಮೂಲದ ಯುವತಿ ಮೃತಪಟ್ಟಿದ್ದರು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us