Bangalore Rains: ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ, ಅಂಡರ್​ಪಾಸ್​​ಗಳಲ್ಲಿ ಸಂಚರಿಸಬೇಡಿ; ಸಂಚಾರ ಪೊಲೀಸರ ಮನವಿ

|

Updated on: May 22, 2023 | 7:49 PM

ರಾಜ್ಯ ರಾಜಧಾನಿ ಬೆಂಗಳೂರು ನಗರದ ಹಲವೆಡೆ ಸೋಮವಾರ ಸಂಜೆಯೂ ಭಾರೀ ಮಳೆ ಸುರಿದಿದೆ. ಅಂಡರ್​ಪಾಸ್​​ಗಳಲ್ಲಿ ಸಂಚರಿಸಬೇಡಿ ಎಂದು ಬೆಂಗಳೂರು ಸಂಚಾರ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Bangalore Rains: ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ, ಅಂಡರ್​ಪಾಸ್​​ಗಳಲ್ಲಿ ಸಂಚರಿಸಬೇಡಿ; ಸಂಚಾರ ಪೊಲೀಸರ ಮನವಿ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ನಗರದ ಹಲವೆಡೆ ಸೋಮವಾರ ಸಂಜೆಯೂ ಭಾರೀ ಮಳೆ (Bangalore Rains) ಸುರಿದಿದೆ. ನಗರದ ಮಲ್ಲೇಶ್ವರಂ, ಮೆಜೆಸ್ಟಿಕ್, ಕಾರ್ಪರೇಷನ್, ಗಿರಿನಗರ, ಶಾಂತಿನಗರ, ರಿಚ್​ಮಂಡ್ ರಸ್ತೆ ಸೇರಿದಂತೆ ಹಲವು ಕಡೆಗಳಲ್ಲಿ ಗಾಳಿ ಸಹಿತ ಧಾರಕಾರ ಮಳೆ ಸುರಿದಿದೆ. ಈ ಮಧ್ಯೆ, ಅಂಡರ್​ಪಾಸ್​​ಗಳಲ್ಲಿ ಸಂಚರಿಸಬೇಡಿ ಎಂದು ಬೆಂಗಳೂರು ಸಂಚಾರ ಪೊಲೀಸರು (Bengaluru Traffic Police) ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಭಾನುವಾರ ಸಂಜೆ ಸುರಿದಿದ್ದ ಭಾರೀ ಮಳೆಯಿಂದಾಗಿ ಕೆಆರ್ ಸರ್ಕಲ್ ಅಂಡರ್​ಪಾಸ್​​ನಲ್ಲಿ ಕೃತಕ ನೆರೆ ಸೃಷ್ಟಿಯಾಗಿ ಅದರಲ್ಲಿ ಕಾರು ಸಿಲುಕಿದ ಪರಿಣಾಮ ಯುವತಿಯೊಬ್ಬರು ಮೃತಪಟ್ಟಿದ್ದರು.

ಮಳೆಯ ಕಾರಣ ಸಾರ್ವಜನಿಕರು ವಿಧಾನಸೌಧದ ಸುತ್ತಲಿನ 6 ಕಿಮೀ ವ್ಯಾಪ್ತಿಯಲ್ಲಿರುವ ಅಂಡರ್​ಪಾಸ್​​ಗಳಲ್ಲಿ ಸಂಚರಿಸಬಾರದು ಎಂದು ಬೆಂಗಳೂರು ನಗರ ಸಂಚಾರ ಪೊಲೀಸರು ಟ್ವೀಟ್ ಮಾಡಿದ್ದಾರೆ. ಹಲವೆಡೆ ಅಂಡರ್​ಪಾಸ್​ಗಳ ಮೂಲಕ ಸಂಚರಿಸದಂತೆ ಬಿಬಿಎಂಪಿ ಸಿಬ್ಬಂದಿ ಬ್ಯಾರಿಕೇಡ್ ಅಳವಡಿಸಿದ್ದಾರೆ.


ಕೆಆರ್​ ಸರ್ಕಲ್​ ಅಂಡರ್​ಪಾಸ್​ನಲ್ಲಿ ಕಾರು ಮುಳುಗಡೆಯಾಗಿ ಟೆಕ್ಕಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಕಾರು ಚಾಲಕನನ್ನು ಪೊಲೀಸರು ಸೋಮವಾರ ಮಧ್ಯಾಹ್ನ ಬಂಧಿಸಿದ್ದಾರೆ.

ಕಬ್ಬನ್​ಪಾರ್ಕ್​ನಲ್ಲಿ ಧರೆಗುರುಳಿದ 40ಕ್ಕೂ ಹೆಚ್ಚು ಮರಗಳು

ಬೆಂಗಳೂರಿನಲ್ಲಿ 2 ದಿನಗಳಿಂದ ಸುರಿದ ಮಳೆಯಿಂದಾಗಿ ಕಬ್ಬನ್​ಪಾರ್ಕ್​ನಲ್ಲಿ 40ಕ್ಕೂ ಹೆಚ್ಚು ಮರಗಳು ಉರುಳಿ ಬಿದ್ದಿವೆ. ಕಬ್ಬನ್ ಉದ್ಯಾನವನದಲ್ಲಿ ಒಟ್ಟು 2 ಸಾವಿರಕ್ಕೂ ಹೆಚ್ಚು ಮರಗಳಿವೆ. ರಸ್ತೆಯ ಮೇಲೆ ಬಿದ್ದಿದ್ದ ಎಲ್ಲ ಮರಗಳನ್ನು ತೆರವುಗೊಳಿಸಿದ್ದೇವೆ. ಇನ್ನೆರಡು ದಿನ ಭಾರಿ ಮಳೆಯ ಮುನ್ಸೂಚನೆ ಇದೆ ಎಂದು ಕಬ್ಬನ್ ಪಾರ್ಕ್ ತೋಟಗಾರಿಕೆ ಉಪನಿರ್ದೇಶಕ ಬಾಲಕೃಷ್ಣ ಹೇಳಿದ್ದಾರೆ.

ಇದನ್ನೂ ಓದಿ: Bangalore Rain: ಬೆಂಗಳೂರು ಮಳೆ ದುರಂತ, ಮಾನವೀಯತೆ ಮರೆತ ಸೇಂಟ್‌ ಮಾರ್ಥಾಸ್‌ ಆಸ್ಪತ್ರೆ, ಇನ್ಫೋಸಿಸ್ ಉದ್ಯೋಗಿ ಬಲಿ

ಪ್ರವಾಸಿಗರು ಮುನ್ನೆಚ್ಚರಿಕಾ ಕ್ರಮವಾಗಿ ಪಾರ್ಕ್​ಗೆ ಭೇಟಿ ನೀಡದಿರುವುದು ಒಳಿತು. ಒಂದು ವೇಳೆ ಪಾರ್ಕ್​ಗೆ ಭೇಟಿ ನೀಡಿದರೆ ಮರಗಳ ಕೆಳಗೆ ನಿಲ್ಲಬೇಡಿ ಎಂದು ಅವರು ಸಲಹೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:21 pm, Mon, 22 May 23