Bangalore Rains Today: ಬೆಂಗಳೂರಿನಲ್ಲಿ ಇಂದು ಮಳೆಯಾಗುತ್ತಾ? ಹವಾಮಾನ ಮುನ್ಸೂಚನೆ ಇಲ್ಲಿದೆ

Bengaluru weather: ಬಿಸಿಲಿನ ಬೇಗೆಯಿಂದ ಕಂಗೆಟ್ಟು ಗುರುವಾರ ರಾತ್ರಿ ಸುರಿದ ಮಳೆಯಿಂದ ಹರ್ಷಗೊಂಡಿರುವ ಬೆಂಗಳೂರಿಗರಿಗೆ ಹವಾಮಾನ ಇಲಾಖೆ ಮತ್ತೆ ಸಿಹಿ ಸುದ್ದಿ ನೀಡಿದೆ. ಇಂದೂ ಸಹ ನಗರದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಮುಂದಿನ ವಾರವೂ ನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Bangalore Rains Today: ಬೆಂಗಳೂರಿನಲ್ಲಿ ಇಂದು ಮಳೆಯಾಗುತ್ತಾ? ಹವಾಮಾನ ಮುನ್ಸೂಚನೆ ಇಲ್ಲಿದೆ
ಬ್ಯಾಟರಾಯನಪುರದಲ್ಲಿ ಗುರುವಾರ ರಾತ್ರಿ ಸುರಿದ ಮಳೆಗೆ ಉಂಟಾದ ಅವಾಂತರ
Edited By:

Updated on: May 03, 2024 | 11:54 AM

ಬೆಂಗಳೂರು, ಮೇ 3: ಬಿಸಿಲಿನ ತಾಪ, ಉಷ್ಣ ಗಾಳಿಯಿಂದ ಬೇಸತ್ತಿದ್ದ ಬೆಂಗಳೂರು (Bengaluru) ಜನರಿಗೆ ಗುರುವಾರ ರಾತ್ರಿ ಸುರಿದ ಮಳೆ (Bangalore Rains) ತಂಪೆರೆದಿತ್ತು. ಆದರೆ, ಶುಕ್ರವಾರ ಬೆಳಗ್ಗೆ ಮತ್ತೆ ಬಿಸಿಲಿನ ಝಳ ಮುಂದುವರಿದಿದೆ. ಇಂದೂ ಸಹ ಸಂಜೆ ವೇಳೆಗೆ ಮಳೆಯಾಗಬಹುದಾ ಎಂಬ ಕುತೂಹಲದಲ್ಲಿ ರಾಜಧಾನಿಯ ಮಂದಿ ಇದ್ದಾರೆ. ಇದಕ್ಕೆ ಪೂರಕವಾಗಿ ಭಾರತೀಯ ಹವಾಮಾನ ಇಲಾಖೆ (IMD) ಕೂಡ ಸಿಹಿ ಸುದ್ದಿ ನೀಡಿದೆ. ಇಂದು ಸಂಜೆ ಸಹ ಬೆಂಗಳೂರಿನ ಕೆಲವಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೇಗಿರಲಿದೆ ಬೆಂಗಳೂರು ವಾತಾವರಣ?

ಬೆಂಗಳೂರಿನಲ್ಲಿ ಇಂದು ಹೆಚ್ಚು ಹೊತ್ತು ಮೋಡಕವಿದ ವಾತಾವರಣ ಇರಲಿದ್ದು, ನಗರದಲ್ಲಿ 38.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ಇರಲಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಉಷ್ಣ ಗಾಳಿ ಇಂದೂ ಸಹ ಮುಂದುವರಿಯಲಿದೆ. ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರು ಮಾತ್ರವಲ್ಲದೆ ಕೊಡಗು, ಮೈಸೂರು ಸೇರಿದಂತೆ ರಾಜ್ಯದ ಒಳನಾಡು ಪ್ರದೇಶಗಳಲ್ಲಿ ಹಲವೆಡೆ ಇಂದು ಮಳೆಯಾಗುವ ನಿರೀಕ್ಷೆ ಇದೆ.

ಮುಂದಿನ ವಾರ ಕೂಡ ಬೆಂಗಳೂರಿನಲ್ಲಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಸೋಮವಾರ ಹಾಗೂ ಮಂಗಳವಾರ ಸಂಜೆ ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರಿನಲ್ಲಿರುವ ಕೇಂದ್ರ ಮುನ್ಸೂಚನೆ ನೀಡಿದೆ.

ಮತ್ತಷ್ಟು ಓದಿ: ಬಿಸಿಲಿನಿಂದ ತತ್ತರಿಸಿದ್ದ ಬೆಂಗಳೂರಿಗೆ ಕೊನೆಗೂ ತಂಪೆರೆದ ಮಳೆರಾಯ

ಬೆಂಗಳೂರಿನಲ್ಲಿ ಎಲ್ಲೆಲ್ಲಿ ಮಳೆ?

ಸರಿಸುಮಾರು 5 ತಿಂಗಳ ನಂತರ ಗುರುವಾರ ರಾತ್ರಿ ಬೆಂಗಳೂರಿನಲ್ಲಿ ಮಳೆ ಸುರಿದಿತ್ತು. ಮೆಜೆಸ್ಟಿಕ್, ರಾಜಾಜಿನಗರ, ರೇಸ್ ಕೋರ್ಸ್, ಕೋರಮಂಗಲ, ರಿಚ್ಮಂಡ್ ಸರ್ಕಲ್, ಕಬ್ಬನ್ ಪಾರ್ಕ್, ಗಿರಿನಗರ, ವಿಧಾನಸೌಧ, ಶಾಂತಿನಗರ, ಪೀಣ್ಯ, ದಾಸರಹಳ್ಳಿ, ಬಾಗಲಗುಂಟೆ, ಶೆಟ್ಟಿಹಳ್ಳಿ, ಮಲ್ಲಸಂದ್ರ ಸೇರಿದಂತೆ ಬೆಂಗಳೂರಿನ ಬಹುತೇಕ ಕಡೆಗಳಲ್ಲಿ ಗುರುವಾರ ರಾತ್ರಿ ಗುಡುಗು ಸಹಿತ ಮಳೆಯಾಗಿತ್ತು.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರು ಮಾತ್ರವಲ್ಲದೆ, ಪಕ್ಕದ ಜಿಲ್ಲೆಗಳಾದ ರಾಮನಗರ, ಮಂಡ್ಯದ ಹಲವು ಕಡೆಗಳಲ್ಲಿಯೂ ಗುರುವಾರ ರಾತ್ರಿ ಗುಡುಗು, ಮಿಂಚು ಸಹಿತ ಮಳೆಯಾಗಿತ್ತು. ಈ ಮಧ್ಯೆ, ಉತ್ತರ ಕರ್ನಾಟಕ ಭಾಗದಲ್ಲಿ ಇಂದೂ ಸಹ ಬಿಸಿಗಾಳಿ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:19 am, Fri, 3 May 24

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us