Bangalore Rains: ಬೆಂಗಳೂರಿನ ಹಲವೆಡೆ ಗುಡುಗು, ಮಿಂಚು ಸಹಿತ ಸಾಧಾರಣ ಮಳೆ
ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ಶನಿವಾರ ಸಂಜೆ ಸಾಧಾರಣ ಮಳೆಯಾಗಿದೆ. ಕೆಲವಡೆ ಬಿರುಗಾಳಿ, ಗುಡುಗು ಹಾಗೂ ಮಿಂಚು ಸಹಿತ ಮಳೆ ಸುರಿದಿದೆ. ಜಯನಗರ, ಜೆಪಿ ನಗರ, ಬನಶಂಕರಿ, ಶಾಂತಿನಗರ, ಚಾಮರಾಜಪೇಟೆ, ರಾಜಾಜಿನಗರ, ಚಂದ್ರಲೇಔಟ್, ಮೆಜೆಸ್ಟಿಕ್, ಸಿಟಿ ಮಾರ್ಕೇಟ್, ರಿಚ್ಮಂಡ್ ರಸ್ತೆ, ನಂಜಪ್ಪ ಸರ್ಕಲ್ ಸೇರಿದಂತೆ ಹಲವೆಡೆ ಮಳೆಯಾಗಿದೆ.
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ಶನಿವಾರ ಸಂಜೆ ಸಾಧಾರಣ (Bangalore Rains) ಮಳೆಯಾಗಿದೆ. ಕೆಲವಡೆ ಬಿರುಗಾಳಿ, ಗುಡುಗು ಹಾಗೂ ಮಿಂಚು ಸಹಿತ ಮಳೆ ಸುರಿದಿದೆ. ಜಯನಗರ, ಜೆಪಿ ನಗರ, ಬನಶಂಕರಿ, ಶಾಂತಿನಗರ, ಚಾಮರಾಜಪೇಟೆ, ರಾಜಾಜಿನಗರ, ಚಂದ್ರಲೇಔಟ್, ಮೆಜೆಸ್ಟಿಕ್, ಸಿಟಿ ಮಾರ್ಕೇಟ್, ರಿಚ್ಮಂಡ್ ರಸ್ತೆ, ನಂಜಪ್ಪ ಸರ್ಕಲ್ ಸೇರಿದಂತೆ ಹಲವೆಡೆ ಮಳೆಯಾಗಿದೆ. ಇದರೊಂದಿಗೆ ಬೇಸಗೆಯ ಬೇಗೆಯಿಂದ ನಗರವಾಸಿಗಳಿಗೆ ತುಸು ತಂಪೆರೆದಂತಾಗಿದೆ. ನಗರದಲ್ಲಿ ವಾರಾಂತ್ಯ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಶುಕ್ರವಾರವೇ ಮುನ್ಸೂಚನೆ ನೀಡಿತ್ತು.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ತುಮಕೂರು, ದಾವಣಗೆರೆ, ಮಂಡ್ಯ, ಮೈಸೂರು, ಹಾಸನ, ರಾಮನಗರ, ಚಿಕ್ಕಿಬಳ್ಳಾಪುರ, ಕೋಲಾರ, ಚಾಮರಾಜನಗರ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮುಂದಿನ ಐದು ದಿನಗಳಲ್ಲಿ ಭಾರೀ ಮಳೆ ಬರುವ ಸಾಧ್ಯತೆ ಇದೆ. ಈ ವೇಳೆ ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗದ ಜಿಲ್ಲೆಗಳಲ್ಲಿ ಮಳೆ ಸುರಿಸುವ ಮಾರುತಗಳು ಸಕ್ರಿಯವಾಗಿರಲಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: Monsoon: ಕೇರಳಕ್ಕೆ ಮುಂಗಾರು ಮಾರುತಗಳ ಪ್ರವೇಶ ಯಾವಾಗ? ಹವಾಮಾನ ಇಲಾಖೆ ಏನು ಹೇಳುತ್ತೆ ಇಲ್ಲಿದೆ ಮಾಹಿತಿ
ಬೆಂಗಳೂರಿನ ಹಲವೆಡೆ ಮಳೆಯಾಗಿರುವ ಬಗ್ಗೆ ಜನರು ಸಾಮಾಜಿಕ ಮಾಧ್ಯಮಗಳಲ್ಲಿಯೂ ವಿಡಿಯೋಗಳನ್ನು ಪೋಸ್ಟ್ ಮಾಡುವ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
?️⛈️?
Cool weather ☁️#bangalorerains pic.twitter.com/YZcu33pBzs
— ?RRReddy❤️?ᴳᵃᵐᵉ ᶜʰᵃⁿᵍᵉᴿ ♔ (@RamRohitReddy) May 20, 2023
ಈ ಬಾರಿ ಕೇರಳಕ್ಕೆ ಮುಂಗಾರು ಮಾರುತಗಳ ಆಗಮನದಲ್ಲಿ ಸ್ವಲ್ಪ ವಿಳಂಬವಾಗಲಿದೆ ಎಂದು ಹವಾಮಾನ ಇಲಾಖೆ ಕೆಲವು ದಿನಗಳ ಹಿಂದೆ ತಿಳಿಸಿತ್ತು. ಹೀಗಾಗಿ ಈ ಬಾರಿಯ ಬೇಸಿಗೆ ಸಾಮಾನ್ಯಕ್ಕಿಂತ ದೀರ್ಘವಾಗಬಹುದು ಎಂದು ಅಂದಾಜಿಸಲಾಗಿತ್ತು. ಈ ಬಾರಿ ನೈಋತ್ಯ ಮುಂಗಾರು ಸ್ವಲ್ಪ ವಿಳಂಬವಾಗುವ ನಿರೀಕ್ಷೆ ಇದ್ದು, ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು. ನೈಋತ್ಯ ಮುಂಗಾರು ಸಾಮಾನ್ಯವಾಗಿ ಜೂನ್ 1 ರಂದು ಕೇರಳ ಪ್ರವೇಶಿಸುತ್ತದೆ.
ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 5:31 pm, Sat, 20 May 23