ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ; ಬಳ್ಳಾರಿಯಲ್ಲಿ ಓರ್ವನನ್ನು ಅರೆಸ್ಟ್ ಮಾಡಿದ ಎನ್‌ಐಎ

ಮಾರ್ಚ್​ 01ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿ ಎನ್​ಐಎ ತಂಡ ಬಳ್ಳಾರಿಯಲ್ಲಿ ಓರ್ವ ನನ್ನು ಅರೆಸ್ಟ್ ಮಾಡಿದ್ದಾರೆ. ಶಬ್ಬೀರ್ ಎಂಬಾತನನ್ನು ಎನ್​ಐಎ ಆಧಿಕಾರಿಗಳು ವಶಕ್ಕೆ ಪಡೆದು ಬೆಂಗಳೂರಿಗೆ ಕರೆತರುತ್ತಿದ್ದಾರೆ. ಕರೆದುಕೊಂಡು ಬಂದು ಮತ್ತಷ್ಟು ವಿಚಾರಣೆ ನಡೆಸಲಿದ್ದಾರೆ. ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ NIA ಘೋಷಣೆ ಮಾಡಿದೆ.

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ; ಬಳ್ಳಾರಿಯಲ್ಲಿ ಓರ್ವನನ್ನು ಅರೆಸ್ಟ್ ಮಾಡಿದ ಎನ್‌ಐಎ
ರಾಮೇಶ್ವರಂ ಕೆಫೆ
Follow us
| Updated By: ಆಯೇಷಾ ಬಾನು

Updated on:Mar 13, 2024 | 1:42 PM

ಬಳ್ಳಾರಿ, ಮಾರ್ಚ್​.13: ಬೆಂಗಳೂರಿನ ರಾಮೇಶ್ವರಂ ಕೆಫೆ (Bengaluru Rameshwaram Cafe) ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧ ಎನ್‌ಐಎ ಅಧಿಕಾರಿಗಳು ಬಳ್ಳಾರಿಯಲ್ಲಿ ಓರ್ವನನ್ನು ಬಂಧಿಸಲಾಗಿದೆ. ಮುಂಜಾನೆ 4 ಗಂಟೆ ಸುಮಾರಿಗೆ ಬಳ್ಳಾರಿ ಮೂಲದ ಶಬ್ಬೀರ್​ನನ್ನು ಎನ್​ಐಎ (NIA) ತಂಡ ಅರೆಸ್ಟ್ ಮಾಡಿದೆ. ಸದ್ಯ ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿಗೆ ಕರೆತರಲಾಗುತ್ತಿದೆ. ರಾಮೇಶ್ವರಂ ಬಾಂಬ್ ಪ್ರಕರಣಕ್ಕೂ ಯುವಕನಿಗೂ ಲಿಂಕ್ ಇರುವ ಅನುಮಾನದ ಮೇಲೆ ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.

ಎನ್​ಐಎ ವಶಕ್ಕೆ ಪಡೆದ ಶಬ್ಬೀರ್, ತೋರಣಗಲ್​ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಮಾರ್ಚ್​. 01ನೇ ತಾರೀಖು 9 ಗಂಟೆ 10 ನಿಮಿಷಕ್ಕೆ ಬುಡಾ ಕಾಂಪ್ಲೆಕ್ಸ್​​ ಬಳಿ ಶಂಕಿತ ಉಗ್ರನನ್ನ ಭೇಟಿಯಾಗಿದ್ದ. ಹಾಗೂ ಶಬ್ಬೀರ್, ಶಂಕಿತನನ್ನು ಫೋನ್ ಮೂಲಕ ಸಂಪರ್ಕ ಮಾಡಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಎಲ್ಲಾ ಅನುಮಾನದ ಮೇಲೆ ಎನ್‌ಐಎ ಅಧಿಕಾರಿಗಳು ಶಬ್ಬೀರ್​ನನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಬಾಂಬರ್​​ ಕರ್ನಾಟಕ ಮೂಲದವನೇ!

ಎನ್‌ಐಎ ಅಧಿಕಾರಿಗಳು ಶಬ್ಬೀರನ ಹಿನ್ನೆಲೆ ಕೆದುಕುತ್ತಿದ್ದಾರೆ. ಶಬ್ಬೀರನ ಅಣ್ಣನ ಮಕ್ಕಳಿಂದ ಶಂಕಿತ ಬಾಂಬರ್‌ನ ಪರಿಚಯವಾಗಿತ್ತು. ಶಂಕಿತನ ಪರಿಚಯದ ಬಗ್ಗೆ ಶಬ್ಬೀರ್ ಮಾಹಿತಿ ಬಿಚ್ಚಿಟ್ಟಿದ್ದಾನೆ. ಬಳ್ಳಾರಿ ಹೊಸ ಬಸ್ ನಿಲ್ದಾಣದಿಂದ ಬುಡಾ ಕಾಂಪ್ಲೆಕ್ಸ್ ಬಳಿ‌ ಆಟೋದಲ್ಲಿ ಬಂದು ಇಳಿದಿದ್ದ ಶಂಕಿತ ಬಾಂಬರ್ ಬಳಿಕ ಶಬ್ಬೀರನನ್ನ ಭೇಟಿ ಮಾಡಿದ್ದ. ಸದ್ಯ ಈ ಭೇಟಿಯ ಸಿಸಿ ಟಿವಿ ಫೋಟೋಸ್ ಆಧಾರದ ಮೇಲೆ ಅರೆಸ್ಟ್ ಮಾಡಲಾಗಿದೆ.

ಬೆಂಗಳೂರು ಬಾಂಬ್‌ ಬ್ಲಾಸ್ಟ್‌ಗೂ ಇವರಿಗೂ ಇದೆಯಾ ಲಿಂಕ್

ಎನ್‌ಐಎ ಅಧಿಕಾರಿಗಳು ಉಗ್ರರ ತಲಾಶ್ ನಲ್ಲಿದ್ದಾರೆ. ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್‌ಗಾಗಿ ತೀವ್ರ ಶೋಧ ನಡೆಯುತ್ತಿದೆ. ಬೆಂಗಳೂರು ಬಾಂಬ್ ಬ್ಲಾಸ್ ಆದ ದಿನ ಮುಜಾಫೀರ್ ಇಲ್ಲೇ ವಾಸ್ತವ್ಯ ಹೂಡಿದ್ದ. ಮುಜಾಫೀರ್ ಹುಸೇನ್ ಶಹಬಾಜ್​ಗಾಗಿ ತೀವ್ರ ಹುಡಕಾಟ ನಡೆಯುತ್ತಿದೆ. ಸೈಯದ್ ಅಲಿ ಬಾಂಬ್ ತಯಾರಿಕೆಗೆ ಸಹಾಯ ಮಾಡಿದ್ದ. ಸೈಯದ್ ಅಲಿ ಟೆಕ್ನಿಷಿಯನ್ ಕಾರ್ಯ ನಿರ್ವಾಹಣೆ ಮಾಡಿದ್ದ. ಡಾರ್ಕ್ ವೆಬ್‌ ಮೂಲಕ ವಸ್ತುಗಳನ್ನ ಸಂಗ್ರಹಿಸಿ ಬಾಂಬ್ ತಯಾರಿಕೆ ಶಂಕೆ ವ್ಯಕ್ತವಾಗಿದೆ. ಸೈಯದ್ ಆಲಿ, ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್, ಮುಜಾಫೀರ್‌ಗಾಗಿ ಎನ್‌ಐಎ ತಂಡ ತೀವ್ರ ಹುಡಕಾಟ ನಡೆಸುತ್ತಿದೆ. ಬೆಂಗಳೂರು ಬಾಂಬ್ ಬ್ಲಾಸ್ಟ್‌ಗೂ ಇವರಿಗೂ ಲಿಂಕ್ ಇರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ NIA ಘೋಷಣೆ ಮಾಡಿದೆ. ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣವನ್ನು NIA ಕೈಗೆತ್ತಿಕೊಂಡು ತನಿಖೆ ನಡೆಸುತ್ತಿದೆ. ಶಂಕಿತ ಆಂಧ್ರ ಪ್ರದೇಶದ ತಿರುಪತಿ ಅಥವಾ ಹೈದ್ರಾಬಾದ್ನಲ್ಲಿ ತಲೆಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಇದ್ದು, ಆತನ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:02 pm, Wed, 13 March 24

ತಾಜಾ ಸುದ್ದಿ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!