AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕಾಲ್ತುಳಿತ: ಅಮೈಕಸ್ ಕ್ಯೂರಿ ನೇಮಿಸಿದ ಕೋರ್ಟ್, ಹೀಗಂದ್ರೇನು?

ಆರ್​ಸಿಬಿ ಗೆಲುವನ್ನು ಸಂಭ್ರಮಿಸಲು ಬುಧವಾರ (ಜೂ.03) ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವಿಜಯೋತ್ಸವ ಕಾರ್ಯಕ್ರಮ ವೀಕ್ಷಿಸಲು ಕ್ರೀಡಾಂಗಣದ ಬಳಿ ಲಕ್ಷಾಂತರ ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಟ್ಟಿದ್ದರು. ಘಟನೆ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಕೋರ್ಟ್​, ಇಂದು ಅರ್ಜಿ ವಿಚಾರಣೆ ನಡೆಸಿ, ಅಮೈಕಸ್ ಕ್ಯೂರಿ ನೇಮಿಸಿದೆ.

ಬೆಂಗಳೂರು ಕಾಲ್ತುಳಿತ: ಅಮೈಕಸ್ ಕ್ಯೂರಿ ನೇಮಿಸಿದ ಕೋರ್ಟ್, ಹೀಗಂದ್ರೇನು?
ಹೈಕೋರ್ಟ್​
Ramesha M
| Edited By: |

Updated on: Jun 23, 2025 | 3:55 PM

Share

ಬೆಂಗಳೂರು, ಜೂನ್​ 23: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ (Chinnaswamy stadium Stampede) 11 ಜನರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ನ (High Court) ವಿಭಾಗೀಯ ಪೀಠ ಸೋಮವಾರ (ಜೂ.23) ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ನಡೆಸಿತು. ಈ ಪ್ರಕರಣದಲ್ಲಿ ಅಮೈಕಸ್ ಕ್ಯೂರಿಯಾಗಿ (ನ್ಯಾಯಾಲಯಕ್ಕೆ ನೆರವಾಗುವ ವಕೀಲ) ಹಿರಿಯ ವಕೀಲೆ ಎಸ್.ಸುಶೀಲಾ ಅವರನ್ನು ಪೀಠ ನೇಮಕ ಮಾಡಿತು. ಪಿಐಎಲ್‌ ಹಾಗೂ ಪ್ರಕರಣದ ಇತರೆ ದಾಖಲೆಗಳನ್ನು ಎಸ್.ಸುಶೀಲಾರಿಗೆ ನೀಡಲು ಪೀಠ ಸೂಚನೆ ನೀಡಿತು.

ವಿಚಾರಣೆ ವೇಳೆ ಕೆಎಸ್‌ಸಿಎ, ಆರ್‌ಸಿಬಿ, ಡಿಎನ್‌ಎ ಪರ ವಕೀಲರು ಹಾಜರಾಗಿದ್ದರು. ರಾಜ್ಯ ಸರ್ಕಾರ ಘಟನೆಗೆ ಸಂಬಂಧಿಸಿದಂತೆ ಈವರೆಗೂ ಕೈಗೊಂಡ ಕ್ರಮದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್​ಗೆ ಸಲ್ಲಿಕೆ ಮಾಡಿತು. ಇನ್ನು, ವರದಿಯನ್ನು ಮುಚ್ಚಿದ ಲಕೋಟೆಯಲ್ಲಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ವಿಚಾರಣೆಯನ್ನು ಅಮೈಕಸ್ ಕ್ಯೂರಿ ನೇಮಕದ ಬಳಿಕ ಈ ಬಗ್ಗೆ ವಿಚಾರಣೆ ನಡೆಸಲಾಗುವುದು ಎಂದು ನ್ಯಾ.ವಿ.ಕಾಮೇಶ್ವರ ರಾವ್, ನ್ಯಾ.ಸಿ.ಎಂ.ಜೋಶಿ ಅವರಿದ್ದ ವಿಭಾಗೀಯ ಪೀಠ ಅಭಿಪ್ರಾಯ ವ್ಯಕ್ತಪಡಿಸಿತು. ಈ ಪ್ರಕರಣದಲ್ಲಿ ಅಮೈಕಸ್ ಕ್ಯೂರಿಯಾಗಿ ಹಿರಿಯ ವಕೀಲೆ ಎಸ್.ಸುಶೀಲಾ ಅವರನ್ನು ಪೀಠ ನೇಮಕ ಮಾಡಿತು.

ಪರಿಹಾರದ ಹಣ ಹೆಚ್ಚಿಸುವಂತೆ ಸಂತ್ರಸ್ತರೂ ಕೂಡ ಅರ್ಜಿ ಸಲ್ಲಿಕೆ ಮಾಡಿದರು. ಸರ್ಕಾರ ಒಬ್ಬೊಬ್ಬರಿಗೆ ಒಂದೊಂದು ರೀತಿಯ ಪರಿಹಾರ ನೀಡುತ್ತಿದೆ. ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತದಿಂದ ಮೃತಪಟ್ಟವರಿಗೆ 25 ಲಕ್ಷ ರೂ. ನೀಡಿದೆ. ಆದರೆ, ಸಿಡಿಲು ಬಡಿದು ಮೃತಪಟ್ಟವರಿಗೆ ಇಷ್ಟು ಪರಿಹಾರ ನೀಡಿಲ್ಲ. ತುಮಕೂರಿನಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟವರಿಗೂ ನೀಡಿಲ್ಲ. ಇತರೆ ಘಟನೆಗಳಲ್ಲೂ ಏಕರೂಪದ ಪರಿಹಾರ ನೀಡಲು ಅರ್ಜಿ ಮೂಲಕ ಮನವಿ ಮಾಡಲಾಗಿದೆ. ಈ ಹಂತದಲ್ಲಿ ಯಾವುದೇ ಅಭಿಪ್ರಾಯ ಹೇಳುವುದಿಲ್ಲ ಎಂದು ಹೈಕೋರ್ಟ್​ ಹೇಳಿತು. ಈ ಎಲ್ಲ ಅರ್ಜಿಗಳ ವಿಚಾರಣೆಯನ್ನು ಜುಲೈ 1 ಕ್ಕೆ ಮುಂದೂಡಿದೆ.

ಇದನ್ನೂ ಓದಿ
Image
Stampede: ಮೃತರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರ ಮೊತ್ತ ಹೆಚ್ಚಳ
Image
Stampede: ಕಾಲ್ತುಳಿತದಲ್ಲಿ ಗಾಯಗೊಂಡವರು 65 ಮಂದಿ ಆರ್​ಸಿಬಿ ಅಭಿಮಾನಿಗಳು
Image
ತನಿಖೆಗಿಳಿದ ಸಿಐಡಿ: ಸ್ಟೇಡಿಯಂಗೆ ಭೇಟಿ, ಇಂಚಿಂಚೂ ಮಾಹಿತಿ ಸಂಗ್ರಹ
Image
ಬೆಂಗಳೂರು ಕಾಲ್ತುಳಿತ ದುರಂತದ ವರದಿ ನೀಡುವಂತೆ ಕುನ್ಹಾ ಆಯೋಗಕ್ಕೆ ಸೂಚನೆ

ಅಮಿಕಸ್ ಕ್ಯೂರಿ ಎಂದರೇನು?

ಅಮಿಕಸ್ ಕ್ಯೂರಿ ಎಂದರೆ “ನ್ಯಾಯಾಲಯದ ಸ್ನೇಹಿತ” ಎಂದರ್ಥ. ಅಮಿಕಸ್​ ಕ್ಯೂರಿ ಸಾಮಾನ್ಯವಾಗಿ ಕಾನೂನು ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿರದ ವ್ಯಕ್ತಿ ಅಥವಾ ಗುಂಪಾಗಿರುತ್ತದೆ. ಆದರೆ ನ್ಯಾಯಾಲಯಕ್ಕೆ ವಿಷಯದ ಬಗ್ಗೆ ಉಪಯುಕ್ತ ಮಾಹಿತಿಯನ್ನು ಅಥವಾ ದೃಷ್ಟಿಕೋನವನ್ನು ಒದಗಿಸುವ ಮೂಲಕ ಸಹಾಯ ಮಾಡಲು ಅನುಮತಿ ಕೇಳುತ್ತದೆ. ಉದಾಹರಣೆಗೆ, ಇದು ಕಾನೂನಿನ ಬಗ್ಗೆ ಪರಿಣತಿಯನ್ನು ಹೊಂದಿರುವ ವ್ಯಕ್ತಿಯಾಗಿರಬಹುದು, ಅಥವಾ ಸಾರ್ವಜನಿಕ ಹಿತಾಸಕ್ತಿಯ ವಿಷಯದ ಬಗ್ಗೆ ತಿಳಿದಿರುವ ಗುಂಪಾಗಿರಬಹುದು.

ಅಮಿಕಸ್ ಕ್ಯೂರಿಯು ಸಾಮಾನ್ಯವಾಗಿ “ಅಮಿಕಸ್ ಬ್ರೀಫ್” ಎಂಬ ಲಿಖಿತ ಹೇಳಿಕೆಯನ್ನು ನ್ಯಾಯಾಲಯಕ್ಕೆ ಸಲ್ಲಿಸುತ್ತದೆ. ಇದರಲ್ಲಿ ಅವರು ತಮ್ಮ ದೃಷ್ಟಿಕೋನಗಳನ್ನು ಮತ್ತು ವಾದಗಳನ್ನು ಮಂಡಿಸುತ್ತಾರೆ. ಅಮಿಕಸ್ ಕ್ಯೂರಿಯು ಸಲ್ಲಿಸುವ ಬ್ರೀಫ್ ಅನ್ನು ಸ್ವೀಕರಿಸಬೇಕೇ ಅಥವಾ ಬೇಡವೇ ಎಂಬುದು ನ್ಯಾಯಾಲಯದ ವಿವೇಚನೆಯನ್ನು ಅವಲಂಬಿಸಿರುತ್ತದೆ.

ಇದನ್ನೂ ಓದಿ: ಬೆಂಗಳೂರು ಕಾಲ್ತುಳಿತ ಪ್ರಕರಣ: ಆರ್​ಸಿಬಿಗೆ ಹೈಕೋರ್ಟ್​ ನೋಟಿಸ್

ಅಮಿಕಸ್ ಕ್ಯೂರಿಯ ಮುಖ್ಯ ಉದ್ದೇಶವೆಂದರೆ ನ್ಯಾಯಾಲಯವು ಮಾಹಿತಿಯುತ ಮತ್ತು ನ್ಯಾಯಯುತ ನಿರ್ಧಾರವನ್ನು ತೆಗೆದುಕೊಳ್ಳಲು ಸಹಾಯ ಮಾಡುವುದು. ಸಂಕ್ಷಿಪ್ತವಾಗಿ ಹೇಳುವುದಾದರೆ, ಅಮಿಕಸ್ ಕ್ಯೂರಿಯು ಪ್ರಕರಣದಲ್ಲಿ ಭಾಗಿಯಾಗಿರದಿದ್ದರೂ, ನ್ಯಾಯಾಲಯಕ್ಕೆ ಅಮೂಲ್ಯವಾದ ಒಳನೋಟಗಳನ್ನು ಮತ್ತು ಮಾಹಿತಿಯನ್ನು ಒದಗಿಸುವ ವ್ಯಕ್ತಿ ಅಥವಾ ಗುಂಪಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್