Bengaluru School: ಬೆಂಗಳೂರಿನಲ್ಲಿ ಶಾಲೆ ಆರಂಭಕ್ಕೆ ಸರ್ಕಾರದಿಂದ ಗ್ರೀನ್ ಸಿಗ್ನಲ್; ನೈಟ್ ಕರ್ಫ್ಯೂ ರದ್ದು

| Updated By: sandhya thejappa

Updated on: Jan 29, 2022 | 2:35 PM

Night Curfew: ಕೊವಿಡ್​ ತಾಂತ್ರಿಕ ಸಲಹಾ ಸಮಿತಿ ವರದಿಯಂತೆ ನಿರ್ಧಾರ ಕೈಗೊಳ್ಳಲಾಗಿದೆ. ಸಿಎಂ ಬೊಮ್ಮಾಯಿ ನೇತೃತ್ವದ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ ಎಂದು ಹೇಳಿದ ಸಚಿವ ಬಿಸಿ ನಾಗೇಶ್,​  ಶೇ. 100ರಷ್ಟು ಮಕ್ಕಳು ಶಾಲೆಗೆ ಹಾಜರಾಗಲು ಅನುಮತಿ ನೀಡಲಾಗಿದೆ ಎಂದರು.

Bengaluru School: ಬೆಂಗಳೂರಿನಲ್ಲಿ ಶಾಲೆ ಆರಂಭಕ್ಕೆ ಸರ್ಕಾರದಿಂದ ಗ್ರೀನ್ ಸಿಗ್ನಲ್; ನೈಟ್ ಕರ್ಫ್ಯೂ ರದ್ದು
ಶಾಲಾ ಮಕ್ಕಳು (ಸಾಂದರ್ಭಿಕ ಚಿತ್ರ)
Follow us on

ಬೆಂಗಳೂರು: ಕೊರೊನಾ (Coronavirus) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಶಾಲೆಗಳನ್ನ ಬಂದ್ ಮಾಡಲಾಗಿತ್ತು. ಆದರೆ ಬೆಂಗಳೂರಿನಲ್ಲಿ ಕೊರೊನಾ ತೀವ್ರತೆ ಕಡಿಮೆ ಇರುವುದರಿಂದ ಶಾಲೆಗಳನ್ನ ಪುನರಾರಂಭಿಸಲು ಕರ್ನಾಟಕ ಸರ್ಕಾರ (Karnataka Government) ನಿರ್ಧರಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿ ಈ ತೀರ್ಮಾನ ಕೈಗೊಂಡಿದ್ದಾರೆ. ಬೆಂಗಳೂರಲ್ಲಿ ಸೋಮವಾರದಿಂದ ಎಲ್ಲಾ ತರಗತಿ ಪುನಾರಂಭವಾಗುತ್ತದೆ ಅಂತ  ಶಿಕ್ಷಣ ಸಚಿವ ಬಿಸಿ ನಾಗೇಶ್​ ಹೇಳಿಕೆ ನೀಡಿದ್ದಾರೆ. ಕೊವಿಡ್​ ನಿಯಮ ಪಾಲಿಸಿ ಶಾಲೆಗಳ ಪುನಾರಂಭಕ್ಕೆ ಅವಕಾಶ ನೀಡಲಾಗಿದೆ. ಶಾಲೆ ಆರಂಭಕ್ಕೆ ಕೊವಿಡ್​ ನಿಯಮ ಪಾಲಿಸುವುದು ಕಡ್ಡಾಯ. ಯಾವುದಾದರೂ ತರಗತಿಯಲ್ಲಿ ಮಕ್ಕಳಿಗೆ ಪಾಸಿಟಿವ್ ಬಂದರೆ, ಅಂತಹ ತರಗತಿ ಮುಚ್ಚಿ ಸ್ಯಾನಿಟೈಸ್ ಮಾಡಲಾಗುವುದು. ಶಾಲೆಗಳಿಗೆ ರಜೆ ವಿಚಾರದಲ್ಲಿ ಜಿಲ್ಲಾಧಿಕಾರಿ ಕ್ರಮ ಕೈಗೊಳ್ಳುತ್ತಾರೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.

ಕೊವಿಡ್​ ತಾಂತ್ರಿಕ ಸಲಹಾ ಸಮಿತಿ ವರದಿಯಂತೆ ನಿರ್ಧಾರ ಕೈಗೊಳ್ಳಲಾಗಿದೆ. ಸಿಎಂ ಬೊಮ್ಮಾಯಿ ನೇತೃತ್ವದ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ ಎಂದು ಹೇಳಿದ ಸಚಿವ ಬಿಸಿ ನಾಗೇಶ್,​  ಶೇ. 100ರಷ್ಟು ಮಕ್ಕಳು ಶಾಲೆಗೆ ಹಾಜರಾಗಲು ಅನುಮತಿ ನೀಡಲಾಗಿದೆ ಎಂದರು.

ನೈಟ್ ಕರ್ಫ್ಯೂ ತೆರವಿಗೆ ನಿರ್ಧಾರ:
ಮಾಧ್ಯಮದೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ್,  ನೈಟ್ ಕರ್ಫ್ಯೂ ಜನವರಿ 31 ರಿಂದ ಇರಲ್ಲ. ಪಬ್ ಆ್ಯಂಡ್ ರೆಸ್ಟೋರೆಂಟ್, ಹೋಟೆಲ್​ಗಳಿಗೆ ಶೆ. 100 ರಷ್ಟು ಅವಕಾಶ ನೀಡಲಾಗಿದೆ. ಆದರೆ ಸಿನಿಮಾ ಥಿಯೇಟರ್​ಗಳಿಗೆ ಶೇ. 50 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ ಅಂತ ತಿಳಿಸಿದರು. ಮದುವೆಗಳಿಗೆ ಒಳಾಂಗಣದಲ್ಲಿ 200 ಜನರಿಗೆ, ಹೊರಾಂಗಣದಲ್ಲಿ 300 ಜನರಿಗೆ ಅವಕಾಶ ನೀಡಲಾಗಿದೆ. ಮಂದಿರ, ಮಸೀದಿ, ಚರ್ಚ್​ಗಳಲ್ಲಿ ಸೇವೆ ಪುನಾರಂಭ ಮಾಡಬಹುದು. ಆದರೆ ಧಾರ್ಮಿಕ ಸ್ಥಳಗಳಲ್ಲಿ  50 ಜನ ಮಾತ್ರ ಒಂದೇ ಬಾರಿ ದರ್ಶನ ಪಡೆಯಬಹುದು. ಜಾತ್ರೆ, ಮೆರವಣಿಗೆ, ಧರಣಿ, ಪ್ರತಿಭಟನೆ ಧಾರ್ಮಿಕ ಉತ್ಸವಗಳಿಗೆ ನಿರ್ಬಂಧ ಹೇರಲಾಗಿದೆ. ಜಿಮ್, ಈಜುಕೊಳದಲ್ಲಿ ಶೇ. 50 ರಷ್ಟು ಅವಕಾಶ ನೀಡಲಾಗಿದೆ ಅಂತ ಆರ್ ಅಶೋಕ್ ಹೇಳಿದರು.

ಪ್ರವಾಸಿತಾಣಗಳ ಭೇಟಿಗೆ ಯಾವುದೇ ನಿರ್ಬಂಧ ವಿಧಿಸಿಲ್ಲ ಅಂತ  ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್​​ ಹೇಳಿದ್ದಾರೆ. ಕೊವಿಡ್​ ನಿಯಮ ಪಾಲಿಸಿ ಪ್ರವಾಸಿಗರು ಭೇಟಿ ನೀಡಬಹುದು. ರಾಜ್ಯದ ಪ್ರವಾಸಿತಾಣಗಳು ಪ್ರವಾಸಿಗರಿಗೆ ಮುಕ್ತವಾಗಿರಲಿವೆ. ಸಫಾರಿ ಸೇರಿದಂತೆ ಎಲ್ಲಾ ಚಟುವಟಿಕೆಗೆ ಅವಕಾಶ ಇರುತ್ತದೆ ಅಂತ ಹೇಳಿದ್ದಾರೆ.

ಇಂದು ನಡೆದ ಸಭೆಯಲ್ಲಿ ಕೇರಳ, ಮಹಾರಾಷ್ಟ್ರ, ಗೋವಾ ಗಡಿಗಳಲ್ಲಿ ತೀವ್ರ ನಿಗಾ ವಹಿಸಲು ಸೂಚಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಕೊವಿಡ್ ಚಿಕಿತ್ಸೆಗೆ ಶೇ. 25 ರಷ್ಟು ಹಾಸಿಗೆಗಳನ್ನು ನಿಗದಿಪಡಿಸಲು ನಿರ್ಧರಿಸಲಾಗಿದ್ದು, ಕೊವಿಡ್ ಹೊರತು ಪಡಿಸಿ, ಇತರ ಚಿಕಿತ್ಸೆಗಳನ್ನು ಸಮರ್ಪಕವಾಗಿ ಒದಗಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ

ಮೈಸೂರು ಅಭಿವೃದ್ಧಿ ಮಾಡಿದ್ದು ನಾನು, ನಾನು, ನಾನು! ಮೈಸೂರು ಮಹಾರಾಜರನ್ನು ಬಿಟ್ಟರೆ ನೆಕ್ಸ್ಟ್​​ ನಾನೇ: ಮೈಸೂರು ಶಾಸಕರಿಗೆ ಸಿಂಹ ಸವಾಲು

ಹಳೆಯ ಕಾರ್ಯಕ್ರಮಗಳಿಗೆ ಹೆಸರು ಬದಲಾವಣೆ ಮಾಡಿರುವುದೇ ಬಿಜೆಪಿಯವರ ಸಾಧನೆ: ವಿಪಕ್ಷ ನಾಯಕ ಸಿದ್ದರಾಮಯ್ಯ

Published On - 1:38 pm, Sat, 29 January 22