ಕೇಂದ್ರದ ಸ್ವಚ್ಛ, ಕಸ ಮುಕ್ತ ಪ್ರಶಸ್ತಿಗೆ ಬೆಂಗಳೂರು ಆಯ್ಕೆ; ರಾಷ್ಟ್ರಪತಿ ರಾಮನಾಥ್ ಕೋವಿಂದ್​ರಿಂದ ಪ್ರಶಸ್ತಿ ಪ್ರದಾನ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಈ ಪ್ರಶಸ್ತಿಯನ್ನು ನೀಡಲಿದ್ದಾರೆ. ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸೇರಿದಂತೆ ಕೆಲ ಅಧಿಕಾರಿಗಳು ಸ್ವಚ್ಛ ಸರ್ವೇಕ್ಷಣಾ 2021 ಪ್ರಶಸ್ತಿ ಪಡೆಯಲಿದ್ದಾರೆ.

ಕೇಂದ್ರದ ಸ್ವಚ್ಛ, ಕಸ ಮುಕ್ತ ಪ್ರಶಸ್ತಿಗೆ ಬೆಂಗಳೂರು ಆಯ್ಕೆ; ರಾಷ್ಟ್ರಪತಿ ರಾಮನಾಥ್ ಕೋವಿಂದ್​ರಿಂದ ಪ್ರಶಸ್ತಿ ಪ್ರದಾನ
ಬಿಬಿಎಂಪಿ (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: preethi shettigar

Updated on:Nov 20, 2021 | 1:21 PM

ಬೆಂಗಳೂರು: ಕೇಂದ್ರದ ಸ್ವಚ್ಛ, ಕಸ ಮುಕ್ತ ಪ್ರಶಸ್ತಿಗೆ ಬೆಂಗಳೂರು ಆಯ್ಕೆಯಾಗಿದೆ. ಸಫಾಯಿ ಮಿತ್ರ ಸುರಕ್ಷಾ ಚಾಲೆಂಜ್ ಮತ್ತು ಕಸ ಮುಕ್ತ ನಗರಗಳ ಅಡಿಯಲ್ಲಿ ಅರ್ಜಿಗಳನ್ನು ಈ ಹಿಂದೆ ಆಹ್ವಾನಿಸಿತ್ತು. ಆ ಪ್ರಕಾರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಚ್ಛ ಸರ್ವೇಕ್ಷಣಾ 2021 ಪ್ರಶಸ್ತಿ ನೀಡುತ್ತಿದ್ದು, ಇದರಲ್ಲಿ ಬೆಂಗಳೂರು ಆಯ್ಕೆಯಾಗಿದೆ. ಈ ಪ್ರಶಸ್ತಿಗೆ ರಾಜ್ಯದ ಒಟ್ಟು 9 ನಗರಗಳು ಸ್ವಚ್ಛ ನಗರಗಳೆಂದು (Clean city) ಪ್ರಶಸ್ತಿ ತಮ್ಮದಾಗಿಸಿಕೊಂಡಿವೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಈ ಪ್ರಶಸ್ತಿಯನ್ನು ನೀಡಲಿದ್ದಾರೆ. ಬಿಬಿಎಂಪಿ (BBMP) ಮುಖ್ಯ ಆಯುಕ್ತ ಗೌರವ್ ಗುಪ್ತಾ ಸೇರಿದಂತೆ ಕೆಲ ಅಧಿಕಾರಿಗಳು ಸ್ವಚ್ಛ ಸರ್ವೇಕ್ಷಣಾ 2021 ಪ್ರಶಸ್ತಿ ಪಡೆಯಲಿದ್ದಾರೆ.

ರಾಜ್ಯಕ್ಕೆ ಒಟ್ಟು 9 ಪ್ರಶಸ್ತಿಗಳು 1) ಕರ್ನಾಟಕ ರಾಜ್ಯ 2) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) 3) ಹುಬ್ಬಳ್ಳಿ-ಧಾರವಾಡ 4) ಮೈಸೂರು 5) ಮುಧೋಳ 6) ಹೊಸದುರ್ಗ 7) ಕೃಷ್ಣರಾಜನಗರ 8) ಕುಮಟಾ 9) ಪಿರಿಯಾಪಟ್ಟಣ

ಮೂವರು ವಲಯ ಜಂಟಿ ಆಯುಕ್ತರ ವರ್ಗಾವಣೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಮೂವರು ವಲಯ ಜಂಟಿ ಆಯುಕ್ತರನ್ನು ವರ್ಗಾವಣೆ ಮಾಡಲಾಗಿದೆ. ಮೂವರು ವಲಯ ಜಂಟಿ ಆಯುಕ್ತರನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ಅದರಂತೆ, ಯಲಹಂಕ ವಲಯ ಜಂಟಿ ಆಯುಕ್ತ ಡಾ.ಡಿ. ಆರ್​​ ಅಶೋಕ್, ಪೂರ್ವ ವಲಯ ಜಂಟಿ ಆಯುಕ್ತೆ ಕೆ.ಆರ್​​. ಪಲ್ಲವಿ, ದಕ್ಷಿಣ ವಲಯ ಜಂಟಿ‌ ಆಯುಕ್ತ ವೀರಭದ್ರಸ್ವಾಮಿ ವರ್ಗಾವಣೆ ಮಾಡಲಾಗಿದೆ.

ಕೆ.ಆರ್​​. ಪಲ್ಲವಿ, ವೀರಭದ್ರಸ್ವಾಮಿ ಮಾತೃ ಇಲಾಖೆಗೆ ವಾಪಸ್ ಆಗಿದ್ದಾರೆ. ಪೌರಾಡಳಿತ ಇಲಾಖೆಗೆ ಕೆ.ಆರ್​​. ಪಲ್ಲವಿ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಗೆ ವೀರಭದ್ರಸ್ವಾಮಿ ವಾಪಸ್ ಆಗಿದ್ದಾರೆ. ಬಿಬಿಎಂಪಿ ಪೂರ್ವ ವಲಯ ಜಂಟಿ ಆಯುಕ್ತರಾಗಿ ಆರ್. ಶಿಲ್ಪಾ, ಯಲಹಂಕ ವಲಯ ಜಂಟಿ ಆಯುಕ್ತರಾಗಿ ಪಿ.ವಿ. ಪೂರ್ಣಿಮಾ, ದಕ್ಷಿಣ ವಲಯ ಜಂಟಿ ಆಯುಕ್ತರಾಗಿ ಡಾ. ಜಗದೀಶ್ ನಾಯಕ್ ನೇಮಕಗೊಂಡಿದ್ದಾರೆ.

ಇದನ್ನೂ ಓದಿ:

ಬಿ ಎಸ್ ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಘೋಷಣೆ; ಲೋಕಸಭಾ ಸ್ಪೀಕರ್ ಓಂ ಬಿರ್ಲಾರಿಂದ ಪ್ರಶಸ್ತಿ ಪ್ರದಾನ

Sunil Chhetri: ಸೂಪರ್‌ಸ್ಟಾರ್‌ ಆದ ನಿಮ್ಮೆಲ್ಲರಿಂದಲೇ! ಖೇಲ್ ರತ್ನ ಪ್ರಶಸ್ತಿ ಸ್ವೀಕರಿಸಿದ ಬಳಿಕ ಭಾವುಕರಾದ ಸುನಿಲ್ ಛೆಟ್ರಿ

BBMP: ಮೂವರು ವಲಯ ಜಂಟಿ ಆಯುಕ್ತರ ವರ್ಗಾವಣೆ

Published On - 1:14 pm, Sat, 20 November 21

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು