AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕಾಣೆಯಾಗಿದ್ದ ಅಸ್ಸಾಂ ಮೂಲದ ಬಾಲಕಿ ಶವವಾಗಿ ಪತ್ತೆ; ಅತ್ಯಾಚಾರವೆಸಗಿ ಮುಖ ಜಜ್ಜಿ ಕೊಲೆ ಮಾಡಿದ ಕಿರಾತಕರು!

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಅಸ್ಸಾಂ ಮೂಲದ ಅಪ್ರಾಪ್ತ ಬಾಲಕಿಯ ಭೀಕರ ಕೊಲೆಯಾಗಿದೆ. ಗುರುವಾರ ಸಂಜೆ ಕಾಣೆಯಾಗಿದ್ದ ಬಾಲಕಿಯ ನಗ್ನ ಶವ ಶನಿವಾರ ಬೋಳುಗುಟ್ಟದ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ. ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿ ತನಿಖೆ ಕೈಗೊಂಡಿದ್ದಾರೆ.

ಬೆಂಗಳೂರು: ಕಾಣೆಯಾಗಿದ್ದ ಅಸ್ಸಾಂ ಮೂಲದ ಬಾಲಕಿ ಶವವಾಗಿ ಪತ್ತೆ; ಅತ್ಯಾಚಾರವೆಸಗಿ ಮುಖ ಜಜ್ಜಿ ಕೊಲೆ ಮಾಡಿದ ಕಿರಾತಕರು!
ಬೆಂಗಳೂರಿನಲ್ಲಿ ಘಟನೆ
TV9 Web
| Edited By: |

Updated on:Mar 28, 2026 | 6:51 PM

Share

ಬೆಂಗಳೂರು , ಮಾ.28 : ರಾಜಧಾನಿಯ ಹೊರವಲಯದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮನುಷ್ಯಕುಲವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಗುರುವಾರ ಸಂಜೆ ಕಾಣೆಯಾಗಿದ್ದ ಅಸ್ಸಾಂ ಮೂಲದ ಅಪ್ರಾಪ್ತ ಬಾಲಕಿಯ ಶವ ಶನಿವಾರ (ಮಾ.28) ಬೋಳುಗುಟ್ಟದ ನೀಲಗಿರಿ ತೋಪಿನಲ್ಲಿ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಅಸ್ಸಾಂ ಮೂಲದ ಈ ಬಾಲಕಿ ವಿಟ್ಟಸಂದ್ರ ಸಮೀಪದ ಶೆಡ್ ಒಂದರಲ್ಲಿ ತನ್ನ ಪೋಷಕರ ಜೊತೆ ವಾಸವಿದ್ದಳು. ಗುರುವಾರ ಸಂಜೆ ಮನೆ ಬಳಿ ಆಟವಾಡುತ್ತಿದ್ದ ಬಾಲಕಿ ದಿಢೀರ್ ಕಾಣೆಯಾಗಿದ್ದಳು. ಪೋಷಕರು ಸುತ್ತಮುತ್ತ ಎಲ್ಲಾ ಕಡೆ ಹುಡುಕಾಡಿದರೂ ಮಗು ಪತ್ತೆಯಾಗಿರಲಿಲ್ಲ. ಈ ಸಂಬಂಧ ಶುಕ್ರವಾರ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ದೂರು ದಾಖಲಿಸಲಾಗಿತ್ತು.

ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾಗ, ಇಂದು ಸಂಜೆ ಬೋಳುಗುಟ್ಟದ ನಿರ್ಜನ ಪ್ರದೇಶದ ನೀಲಗಿರಿ ತೋಪಿನಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಶವವು ಸಂಪೂರ್ಣ ನಗ್ನ ಸ್ಥಿತಿಯಲ್ಲಿದ್ದು, ಕಿರಾತಕರು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ನಂತರ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅಷ್ಟೇ ಅಲ್ಲದೆ, ಮಗುವಿನ ಗುರುತು ಪತ್ತೆಯಾಗಬಾರದೆಂಬ ಉದ್ದೇಶದಿಂದ ಮುಖವನ್ನು ಕಲ್ಲಿನಿಂದ ಜಜ್ಜಿ ವಿಕೃತವಾಗಿ ಹತ್ಯೆ ಮಾಡಲಾಗಿದೆ.

ಇದನ್ನೂ ಓದಿ: ಸಕಲೇಶಪುರದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಫೋಟೋಗ್ರಾಫರ್‌ಗಳ ಮೇಲೆ ಹಲ್ಲೆ: ಕೈಮುಗಿದರೂ ಬಿಡದ ಕಿಡಿಗೇಡಿಗಳು

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿ ಬಲೆ ಬೀಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:00 pm, Sat, 28 March 26

Follow Us
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು