ಬೆಂಗಳೂರು: ಒಂದು ವರ್ಷದ ಮಗುವಿಗೆ ಹೃದಯ ಕಸಿ ಶಸ್ತ್ರಚಿಕಿತ್ಸೆ

ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿಯ ವೈದ್ಯರು ಒಂದು ವರ್ಷದ ಮಗುವಿಗೆ ಯಶಸ್ವಿಯಾಗಿ ಹೃದಯ ಕಸಿ ಶಸ್ತ್ರ ಚಿಕಿತ್ಸೆ ಮಾಡಿ ದಾಖಲೆ ನಿರ್ಮಿಸಿದ್ದಾರೆ. ಹೃದಯ ವೈಫಲ್ಯದಿಂದ ಬಳಲುತ್ತಿದ್ದ ಮಗುವಿಗೆ 72 ಗಂಟೆಗಳ ಒಳಗೆ ಶಸ್ತ್ರಚಿಕಿತ್ಸೆ ಅವಶ್ಯಕವಾಗಿತ್ತು. ಹೀಗಾಗಿ ಹೃದಯ ದಾನ ಪಡೆದು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಮಗು ಈಗ ಚೇತರಿಸಿಕೊಂಡಿದೆ.

ಬೆಂಗಳೂರು: ಒಂದು ವರ್ಷದ ಮಗುವಿಗೆ ಹೃದಯ ಕಸಿ ಶಸ್ತ್ರಚಿಕಿತ್ಸೆ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on:Nov 22, 2024 | 10:59 AM

ಬೆಂಗಳೂರು, ನವೆಂಬರ್​ 22: ಹೃದಯ ವೈಪಲ್ಯ ಸಮಸ್ಯೆಯಿಂದ ಬಳಲುತ್ತಿದ್ದ ಒಂದು ವರ್ಷದ ಮಗುವಿಗೆ ಯಶಸ್ವಿಯಾಗಿ ಹೃದಯ ಕಸಿ ಶಸ್ತ್ರಚಿಕಿತ್ಸೆ (Heart transplant) ಮಾಡುವ ಮೂಲಕ ನಾರಾಯಣ ಹೆಲ್ತ್​ಸಿಟಿಯ (Narayana Health) ವೈದ್ಯರ ತಂಡ ದಾಖಲೆ ನಿರ್ಮಿಸಿದೆ.

ಹೊಸ ಹೃದಯ ಪಡೆದಿರುವ ಮಗು 10 ತಿಂಗಳಿದ್ದಾಗ ಹೃದಯ ಸಮಸ್ಯೆ ಕಾಣಿಸಿಕೊಂಡಿತ್ತು. ಹೃದಯ ಸಮಸ್ಯೆಯಿಂದ ಕಾಮಲೆ, ತೂಕನಷ್ಟ, ಕಿಬ್ಬೊಟ್ಟೆಯಲ್ಲಿ ದ್ರವ ಶೇಖರಣೆ ಮತ್ತು ಬೇಕಾದಷ್ಟು ಆಹಾರ ತಿನ್ನಲಾಗದೆ ಗಂಭೀರ ಸ್ವರೂಪ ಪಡೆದಿತ್ತು. ಮಗುವಿನ ಆರೋಗ್ಯದಲ್ಲಿ ಉಂಟಾದ ಏರುಪೇರನ್ನು ಗಮನಿಸಿದ ಪೋಷಕರು ಬೆಂಗಳೂರಿನ ನಾರಾಯಣ ಹೆಲ್ತ್​ ಸಿಟಿಗೆ ಕರೆತಂದಿದ್ದರು.

ಇಲ್ಲಿನ ವೈದ್ಯರು ಮಗುವನ್ನು ಪರಿಶೀಲಿಸಿದಾಗ ರಿಸ್ಟ್ರಿಕ್ಟಿವ್​ ಕಾರ್ಡಿಯೋ ಮಯೀಪತಿ (ಆರ್​ಸಿಎಂ) ಎಂಬ ಹೆಸರಿನ ಹೃದಯ ಸಂಬಂಧಿತ ಕಾಯಿಲೆ ಇದ್ದು, ಅಂತಿಮ ಘಟ್ಟದಲ್ಲಿರುವುದು ಪತ್ತೆ ಹಚ್ಚಿದ್ದಾರೆ. 72 ಗಂಟೆಯೊಳಗೆ ಮಗುವಿಗೆ ಹೃದಯ ಕಸಿ ಶಸ್ತ್ರಚಿಕಿತ್ಸೆ ಮಾಡಬೇಕೆಂದು ತೀರ್ಮಾನಿಸಿ, ಒಂದು ವರ್ಷದ ಮಗುವಿಗೆ ಹೊಂದುವ ಹೃದಯಕ್ಕೆ ಹುಡಕಾಟ ನಡೆಸಿದ್ದಾರೆ.

ಇದನ್ನೂ ಓದಿ: Video: ಕೋತಿಗೆ ಹೃದಯಾಘಾತ; ಸಿಪಿಆರ್ ಮೂಲಕ ಜೀವ ಉಳಿಸಿದ ವ್ಯಕ್ತಿ

ಆಗ, ನರದೌರ್ಬಲ್ಯ ಕಾಯಿಲೆಯಿಂದ ಬಳಲುತ್ತಿದ್ದ ಎರಡೂವರೆ ವರ್ಷದ ಮಗುವಿನ ಮೆದುಳು ನಿಷ್ಕ್ರಿಯಗೊಂಡಿತ್ತು. ಆಗ, ವೈದ್ಯರು ನರದೌರ್ಬಲ್ಯ ಕಾಯಿಲೆಯಿಂದ ಬಳಲುತ್ತಿದ್ದ ಮಗುವಿನ ಪೋಷಕರಿಗೆ ಪರಿಸ್ಥಿತಿಯನ್ನು ವಿವರಿಸಿ ಬಾಲಕನ ಹೃದಯವನ್ನು ದಾನವಾಗಿ ಪಡೆದಿದ್ದಾರೆ.

ಬಳಿಕ, ರಿಸ್ಟ್ರಿಕ್ಟಿವ್​ ಕಾರ್ಡಿಯೋ ಮಯೀಪತಿ ಕಾಯಿಲೆಯಿಂದ ಬಳಲುತ್ತಿದ್ದ ಒಂದು ವರ್ಷದ ಬಾಲಕನಿಗೆ ಆಗಸ್ಟ್​ 18 ರಂದು ಹೊಸ ಹೃದಯ ಅಳವಡಿಸಿದ್ದಾರೆ. ಆಸ್ಪತ್ರೆಯಲ್ಲಿ ಸುಮಾರು ಎರಡು ತಿಂಗಳ ಚೇತರಿಕೆಯ ನಂತರ ಮಗುವನ್ನು ಡಿಸ್ಚಾರ್ಜ್​ ಮಾಡಿದ್ದಾತೆ. ಈಗ ಮಗು ಲವಲವಿಕೆಯಿಂದ ಹಾಗೂ ಆಹಾರ ಸೇವನೆ ಮತ್ತು ತೂಕ ವೃದ್ಧಿಯಲ್ಲಿ ಚೇತರಿಸಿಕೊಂಡಿದೆ ಎಂದು ವೈದ್ಯರು ಹೇಳಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:06 am, Fri, 22 November 24

ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ