ನವೆಂಬರ್ 29ರಿಂದ ಡಿಸೆಂಬರ್ 1ರವರೆಗೆ ಬೆಂಗಳೂರು ಟೆಕ್ ಸಮ್ಮಿಟ್ ಆಯೋಜನೆ
ನವೆಂಬರ್ 29ರಿಂದ ಡಿಸೆಂಬರ್ 1ರವರೆಗೆ ಬೆಂಗಳೂರು ಟೆಕ್ ಸಮ್ಮಿಟ್ ನಡೆಯಲಿದೆ. ಸಮ್ಮಿಟ್ನಲ್ಲಿ 30 ದೇಶಗಳ 350ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ. ಏಷ್ಯಾದ ಅತಿದೊಡ್ಡ ಟೆಕ್ ಸಮ್ಮಿಟ್ ಇದಾಗಿದೆ ಎಂದರು. ಕಳೆದ 25 ಸಮ್ಮಿಟ್ಗಳಲ್ಲಿ ತೆಗೆದುಕೊಂಡ ನಿರ್ಣಯ ಸಕ್ಸಸ್ ಆಗಿದೆ ಎಂದು ಐಟಿ-ಬಿಟಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಬೆಂಗಳೂರು ನ.25: ನವೆಂಬರ್ 29ರಿಂದ ಡಿಸೆಂಬರ್ 1ರವರೆಗೆ ಬೆಂಗಳೂರು ಟೆಕ್ ಸಮ್ಮಿಟ್ (Bengaluru Tech Summit) ನಡೆಯಲಿದೆ ಎಂದು ಐಟಿ-ಬಿಟಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದರು. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಬೆಂಗಳೂರಿನ ಅರಮನೆ ಮೈದಾನದಲ್ಲಿ ಟೆಕ್ ಸಮ್ಮಿಟ್ ನಡೆಯಲಿದೆ. ‘ಬ್ರೇಕಿಂಗ್ ಬೌಂಡರಿ’ ಘೋಷ ವಾಕ್ಯದೊಂದಿಗೆ ಸಮ್ಮಿಟ್ ನಡೆಯುತ್ತೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು 26ನೇ ಟೆಕ್ ಸಮ್ಮಿಟ್ ಉದ್ಘಾಟಿಸಲಿದ್ದಾರೆ.
ಸಮ್ಮಿಟ್ನಲ್ಲಿ 30 ದೇಶಗಳ 350ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ. ಏಷ್ಯಾದ ಅತಿದೊಡ್ಡ ಟೆಕ್ ಸಮ್ಮಿಟ್ ಇದಾಗಿದೆ ಎಂದರು. ಕಳೆದ 25 ಸಮ್ಮಿಟ್ಗಳಲ್ಲಿ ತೆಗೆದುಕೊಂಡ ನಿರ್ಣಯ ಸಕ್ಸಸ್ ಆಗಿದೆ. ಚಂದ್ರಯಾನ-3 ಪಯಣದ ಕುರಿತು ವಿಶೇಷ ಪ್ರದರ್ಶನ ಇರಲಿದೆ. ಚಂದ್ರಯಾನದಲ್ಲಿ ಭಾಗಿಯಾದ ಸಣ್ಣ ಸಣ್ಣ ಕಂಪನಿಗಳಿಗೆ ಸಹ ಸಮ್ಮಿಟ್ನಲ್ಲಿ ಪ್ರದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದರು.
ಐಟಿ ಮತ್ತು DeepTech, Metaverse ಮತ್ತು WEB 3.0, ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್‌ಗಳು, ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್, ಟೆಲಿಕಾಂ ಮತ್ತು 6G ನಂತಹ ತಂತ್ರಜ್ಞಾನ-ಸಂಬಂಧಿತ ಕ್ಷೇತ್ರಗಳಲ್ಲಿ ಭಾರತದ ಕ್ಷಿಪ್ರ ಪ್ರಗತಿಯನ್ನು ಪ್ರದರ್ಶಿಸುವ ಇದು ವೇದಿಕೆಯಾಗಲಿದೆ.
ಈ ಟೆಕ್ ಸಮ್ಮಿಟ್ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಹೆಚ್ಚುತ್ತಿರುವ ಪ್ರಭಾವಕ್ಕೆ ಸಾಕ್ಷಿಯಾಗಲಿದೆ. ಈ ಟೆಕ್ ಸಮ್ಮಿಟ್ನಲ್ಲಿ ಇಸ್ರೋದ ಗಮನಾರ್ಹ ಸಾಧನೆಗಳು ಮತ್ತು ಬಾಹ್ಯಾಕಾಶ ಪರಿಶೋಧನೆಗೆ ನೀಡಿದ ಕೊಡುಗೆಗಳ ಪ್ರದರ್ಶನವಾಗಲಿದೆ. ಟೆಕ್ ಸಮ್ಮಿಟ್ ಬಾಹ್ಯಾಕಾಶ ಉದ್ಯಮದಲ್ಲಿ ಖಾಸಗಿ ಹೂಡಿಕೆದಾರರನ್ನು ಆಕರ್ಷಿಸುವ ಸರ್ಕಾರದ ಮುಂದುವರೆದ ಭಾಗವಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ