AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Traffic Advisory: ಇಂದು ಚಾಮರಾಜಪೇಟೆ, ಮೈಸೂರು ರಸ್ತೆಗಳಲ್ಲಿ ಸಂಚರಿಸುವವರು ಗಮನಿಸಿ

ಬೆಂಗಳೂರು ಸಂಚಾರ ಸಲಹೆ: ರಂಜಾನ್ ಹಬ್ಬದ ಪ್ರಯುಕ್ತ ಬೆಂಗಳೂರಿನ ವಿವಿಧ ರಸ್ತೆಗಳಲ್ಲಿ ಇಂದು ಸಂಚಾರ ಬದಲಾವಣೆ ಮಾಡಲಾಗಿದೆ. ಹಲವೆಡೆ ನಿರ್ಬಂಧ ಹೇರಲಾಗಿದ್ದು, ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ. ಈ ಬಗ್ಗೆ ಭಾನುವಾರವೇ ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ. ಇದೀಗ ಚಾಮರಾಜಪೇಟೆ ಹಾಗೂ ಮೈಸೂರು ರಸ್ತೆಗಳ ಸಂಚಾರ ನಿರ್ಬಂಧ ಬಗ್ಗೆ ಮಾಹಿತಿ ನೀಡಿದ್ದಾರೆ. ವಿವರ ಇಲ್ಲಿದೆ.

Bangalore Traffic Advisory: ಇಂದು ಚಾಮರಾಜಪೇಟೆ, ಮೈಸೂರು ರಸ್ತೆಗಳಲ್ಲಿ ಸಂಚರಿಸುವವರು ಗಮನಿಸಿ
ಟ್ರಾಫಿಕ್ ಪೊಲೀಸರು ನೀಡಿರುವ ಸಂಚಾರ ನಕ್ಷೆ ಹಾಗೂ ಸಂಚಾರ ದಟ್ಟಣೆಯ ಸಾಂದರ್ಭಿಕ ಚಿತ್ರ
Ganapathi Sharma
|

Updated on: Mar 31, 2025 | 6:58 AM

Share

ಬೆಂಗಳೂರು, ಮಾರ್ಚ್ 31: ರಂಜಾನ್ (Ramadan) ಹಬ್ಬದ ಪ್ರಯುಕ್ತ ಬೆಂಗಳೂರಿನ (Bengaluru) ಹಲವೆಡೆ ಸಂಚಾರ ನಿರ್ಬಂಧ ವಿಧಿಸಲಾಗಿದೆ. ಇನ್ನು ಅನೇಕ ಕಡೆಗಳಲ್ಲಿ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಬೆಂಗಳೂರು ಟ್ರಾಫಿಕ್ ಪೊಲೀಸರು (Bangalore Traffic Police) ಸೂಚನೆ ನೀಡಿದ್ದಾರೆ. ಈ ವಿಚಾರವಾಗಿ ಪ್ರಕಟಣೆ ಹೊರಡಿಸಿದ್ದು, ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಮಾಹಿತಿ ನೀಡಿದ್ದಾರೆ. ಚಾಮರಾಜಪೇಟೆ ಮತ್ತು ಮೈಸೂರು ರಸ್ತೆಗಳಲ್ಲಿ ಕೂಡ ಸಂಚಾರ ಬದಲಾವಣೆ ಮಾಡಲಾಗಿದೆ.

31.03.2025 ರಂದು ರಂಜಾನ್ ಹಬ್ಬದ ಪ್ರಯುಕ್ತ ಚಾಮರಾಜಪೇಟೆ ಸಂಚಾರ ಪೊಲೀಸ್ ಸರಹದ್ದಿನ ಬಿಬಿ ಜಂಕ್ಷನ್ ಹತ್ತಿರದ ಮಸೀದಿ ಹಾಗೂ ಬಿಬಿಎಂಪಿ ಆಟದ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಭಾಗವಹಿಸುತ್ತಿರುವುದರಿಂದ ಈ ಕೆಳಕಂಡ ರಸ್ತೆಯ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗವನ್ನು ಬಳಸಲು ಕೋರಿದೆ ಎಂದು ಚಾಮರಾಜಪೇಟೆ ಸಂಚಾರ ಪೊಲೀಸರು ಟ್ವೀಟ್ ಮಾಡಿದ್ದು, ವಿವರ ತಿಳಿಸಿದ್ದಾರೆ.

ಬೆಂಗಳೂರು ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗ ವಿವರ ಇಲ್ಲಿದೆ

  1. ಮೈಸೂರು ರಸ್ತೆಯ ಪೋಲ್‌ಗೇಟ್ ಜಂಕ್ಷನ್​ನಿಂದ ಬಿಬಿ ಜಂಕ್ಷನ್ ಮೂಲಕ ಬಿಜಿಎಸ್ ಫ್ಲೈಓವರ್ ಮೇಲ್ಬಾಗದಿಂದ ಟೌನ್‌ ಹಾಲ್‌ ವರೆಗೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮೈಸೂರು ಕಡೆಯಿಂದ ಟೌನ್ ಹಾಲ್ ಕಡೆಗೆ ಹೋಗುವ ವಾಹನಗಳು ಬ್ಯಾಟರಾಯನಪುರ ಸಂಚಾರ ರಾಣಾ ಸರಹದ್ದಿನ ಕಿತ್ತೋ ಜಂಕ್ಷನ್‌ನಲ್ಲಿ ಎಡತಿರುವು ಪಡೆದುಕೊಂಡು ವಿಜಯನಗರ ಮೂಲಕ ಸಾಗಬಹುದು.
  2. ಟೌನ್‌ಹಾಲ್ ಕಡೆಯಿಂದ ಮೈಸೂರು ಕಡೆಗೆ ಬಿಜಿಎಸ್ ಫ್ಲೈಓವರ್ ಮೇಲ್ಬಾಗದಿಂದ ಬಿಬಿ ಜಂಕ್ಷನ್ ಮಾರ್ಗವಾಗಿ ಟೋಲ್‌ಗೇಟ್ ಜಂಕ್ಷನ್ ವರೆಗೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
  3. ಟೌನ್‌ಹಾಲ್ ಕಡೆಯಿಂದ ಮೈಸೂರು ಕಡೆಗೆ ಹೋಗುವ ವಾಹನಗಳು ಬಿಜಿಎಸ್ ಫ್ಲೈಓವರ್ ಕೆಳಗಡೆ ಸರ್ವಿಸ್ ರಸ್ತೆಯನ್ನು ಬಳಸಿಕೊಂಡು ಭಾರಿ ವಾಹನಗಳು ವೆಟರ್ನರಿ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ಗೂಡ್‌ಶೆಡ್ ರಸ್ತೆ ಮೂಲಕ ಮತ್ತು ಲಘುವಾಹನಗಳು ಸಿರ್ಸಿ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದುಕೊಂಡು ಜೆ.ಜೆ ನಗರ-ಟ್ಯಾಂಕ್‌ ಬಂಡ್ ರಸ್ತೆ ಬಿನ್ನಿಮಿಲ್ ಜಂಕ್ಷನ್- ಹುಣಸೇಮರ ಮೂಲಕ ಸಾಗುವುದು.
  4. ಬಸವನಗುಡಿ ಹಾಗೂ ಚಾಮರಾಜಪೇಟೆ ಕಡೆಯಿಂದ ಮೆಜೆಸ್ಟಿಕ್ ಕಡೆಗೆ ಹೋಗುವಂತಹ ವಾಹನಗಳು ಚಾಮರಾಜಪೇಟೆ 1 ನೇ ಮುಖ್ಯರಸ್ತೆ, 5ನೇ ಅಡ್ಡ ರಸ್ತೆ ಮೂಲಕ ಮೈಸೂರು ರಸ್ತೆ, ಸಿರ್ಸಿ ಸರ್ಕಲ್, ಬಿನ್ನಿಮಿಲ್ ರಸ್ತೆಯ ಮೂಲಕ ಸಾಗುವುದು.

ಇವಿಷ್ಟೇ ಅಲ್ಲದೆ, ಇನ್ನೂ ಅನೇಕ ರಸ್ತೆಗಳಲ್ಲಿ ಸಂಚಾರ ನಿಷೇಧ, ಸಂಚಾರ ಬದಲಾವಣೆ ಮಾಡಲಾಗಿದೆ. ಆ ಕುರಿತು ಬೆಂಗಳೂರು ಸಂಚಾರ ಪೊಲೀಸರು ನೀಡಿರುವ ವಿವರವಾದ ಮಾಹಿತಿ ಕೆಳಗಡೆ ನೀಡಿರುವ ಲಿಂಕ್​ನಲ್ಲಿದೆ.

ಇದನ್ನೂ ಓದಿ
Image
ರಂಜಾನ್​ ಹಬ್ಬ: ಮಾ.31 ರಂದು ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ
Image
ಬೆಂಗಳೂರಿನ ಆ ಸ್ಥಳದಲ್ಲಿ ಸ್ಫೋಟಕ ಇಡಲು ಪ್ಲಾನ್: ಬಾಯ್ಬಿಟ್ಟ ಅಬ್ದುಲ್
Image
ಬ್ರಿಟಿಷ್ ಕಾಲದ ಟೋಪಿಗೆ ನಿವೃತ್ತಿ: ಪೊಲೀಸರ ತಲೆ ಮೇಲೆ ಸ್ಮಾರ್ಟ್​ ಹ್ಯಾಟ್​
Image
ಒಬ್ಬೊಬ್ಬರಾಗಿ ಸುರಕ್ಷಿತವಾಗಿ ಮನೆ ಸೇರಿದ ದಾವಣಗೆರೆಯ 22 ಹಕ್ಕಿಪಿಕ್ಕಿ ಜನರು

ಇದನ್ನೂ ಓದಿ: ರಂಜಾನ್​ ಹಬ್ಬ ಹಿನ್ನೆಲೆಯಲ್ಲಿ ಮಾ.31 ರಂದು ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್